LATEST NEWS
Kasaragodu: ಮಧೂರು ಶ್ರೀ ಸಿದ್ಧಿವಿನಾಯಕ ದೇಗುಲದ ಅಂಗಣ ನೆರೆಯಿಂದ ಜಲಾವೃತ
ಸುರಿಯುತ್ತಿರುವ ಭಾರೀ ಮಳೆಗೆ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಂಗಣ ಬಹುತೇಕ ಮುಳುಗಿದ್ದು, ನೆರೆನೀರು ದೇಗುಲದ ಗರ್ಭಗುಡಿಯವರೆಗೆ ಬಂದಿದೆ.
ಕಾಸರಗೋಡು: ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಂಗಣ ಬಹುತೇಕ ಮುಳುಗಿದ್ದು, ನೆರೆನೀರು ದೇಗುಲದ ಗರ್ಭಗುಡಿಯವರೆಗೆ ಬಂದಿದೆ.
ಪ್ರತೀ ವರ್ಷ ಭಾರೀ ಮಳೆ ಬಂಧಾಗಲೂ ಇಲ್ಲಿನ ದೇಗುಲದ ಒಳಭಾಗಕ್ಕೆ ನೀರು ನುಗ್ಗುತ್ತದೆ.
ಪಕ್ಕದಲ್ಲೇ ಸೇತುವೆಯೊಂದು ಭರ್ತಿಯಾಗಿ ಹರಿಯುತ್ತಿದೆ.
ಇಲ್ಲಿ ಪ್ರತೀ ವರ್ಷವೂ ಇದೇ ಪರಿಸ್ಥಿತಿ ಪುನರಾವರ್ತನೆ ಆಗುತ್ತಿದೆ.
ಮಹಾಗಣಪತಿ ಕ್ಷೇತ್ರವಾಗಿರುವ ಇಲ್ಲಿ ಪ್ರತಿ ನಿತ್ಯ ಹೋಮ ಹವನಾದಿಗಳು ನಡೆಯುತ್ತಿದ್ದು, ಭಾರಿ ಮಳೆ ನಡುವೆಯೂ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಸುರಿವ ಮಳೆ ಲೆಕ್ಕಿಸದೇ, ಅಂಗಣದಲ್ಲಿ ನೀರು ನಿಂತಿದ್ದರೂ, ಸ್ವಲ್ಪ ಎತ್ತರದ ಪ್ರದೇಶದಲ್ಲಿರುವ ಕಡೆ ಹೋಮ ನಡೆಸುತ್ತಿರುವುದು ಕಂಡು ಬಂದಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ದೇಗುಲಕ್ಕೆ ಭಕ್ತರ ಸಂಖ್ಯೆ ಕಡಿಮೆಯಾಗಿದೆ.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
bengaluru
ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.
ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.
ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.