ಕನಾ೯ಟಕ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ದಾಖಲಿಸಿದ ಕಾಸರಗೋಡಿನ ಸಂಸದ..!
Published
5 years agoon
By
Adminಕನಾ೯ಟಕ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ದಾಖಲಿಸಿದ ಕಾಸರಗೋಡಿನ ಸಂಸದ..!
ಕಾಸರಗೋಡು : ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತಲಪಾಡಿ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ನ್ನು ಮುಚ್ಚಿರುವ ಕರ್ನಾಟಕ ಸರಕಾರದ ಕ್ರಮವನ್ನು ಪ್ರಶ್ನಿಸಿ ಕಾಸರಗೋಡಿನ ಸಂಸದ ರಾಜಮೋಹನ್ ಉನ್ನತಿನ್ ಸರ್ವೋಚ್ಚ ನ್ಯಾಯಾಲಯದಲ್ಲಿ ರಿಟ್ ದಾಖಲಿಸಿದ್ದಾರೆ.
ಕಾಸರಗೋಡಿನ ಜನತೆ ತಮ್ಮ ವೈದ್ಯಕೀಯ ಸವಲತ್ತುಗಳಿಗೆ ಹಲವಾರು ವರ್ಷಗಳಿಂದ ಮಂಗಳೂರನ್ನೇ ಅವಲಂಬಿಸಿದ್ದಾರೆ. ಗಡಿಯನ್ನು ಮುಚ್ಚಿರುವ ಕ್ರಮ ಸಂವಿಧಾನ ವಿರೋಧಿಯಾಗಿದ್ದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ರಿಟ್ ಪಿಟಿಷನ್ ನಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಲಪಾಡಿಯ ರಸ್ತೆಯನ್ನು ಮುಚ್ಚಿರುವುದರಿಂದ ಗಡಿಭಾಗದಲ್ಲಿರುವ ಕಾಸರಗೋಡು ಜಿಲ್ಲೆಯ ಜನರಿಗೆ ಅನನುಕೂಲವಾಗಿದ್ದು ಆಹಾರ; ಆರೋಗ್ಯ ಹಾಗೂ ವೈದ್ಯಕೀಯ ಸಹಕಾರದ ಹಕ್ಕುಗಳನ್ನು ನಿರಾಕರಿಸಿ ಗೌರವಯುತವಾಗಿ ಜೀವಿಸುವ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂಬುದಾಗಿ ರಿಟ್ ಅಜಿ೯ಯಲ್ಲಿ ಕಾಣಿಸಲಾಗಿದೆ.
ಈ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಂತ್ರಣಕ್ಕೆ ಒಳಪಟ್ಟಿದ್ದು ಕರ್ನಾಟಕ ರಾಜ್ಯ ಸರಕಾರಕ್ಕೆ ಸದರಿ ಹೆದ್ದಾರಿಯನ್ನು ಮುಚ್ಚುವ ಅಧಿಕಾರವಿಲ್ಲ. ಕರ್ನಾಟಕ ಸರಕಾರದ ಕ್ರಮವು ಸಂವಿಧಾನದ ಉಲ್ಲಂಘನೆಯಾಗಿದೆ. ಹೆದ್ದಾರಿಯನ್ನು ಮುಚ್ಚಿರುವುದರಿಂದ ಕ್ಲಪ್ತ ಕಾಲದಲ್ಲಿ ವೈದ್ಯಕೀಯ ನೆರವು ದೊರಕದೆ ಇಬ್ಬರು ವ್ಯಕ್ತಿಗಳು ಮೃತರಾಗಿದ್ದಾರೆ.
ನಿರ್ದಿಷ್ಟವಾಗಿ ತಲಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಿರುವುದರಿ೦ದ ಕಾಸರಗೋಡು ಜಿಲ್ಲೆಗೆ ಆಹಾರ ಮತ್ತು ಇತರ ಅವಶ್ಯಕ ವಸ್ತುಗಳ ಸರಬರಾಜು ವ್ಯತ್ಯಯವಾಗಿದ್ದು ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಹಾಗೂ ಕೇಂದ್ರ ಸರಕಾರದ ನಿರ್ದೇಶನಗಳಿಗೆ ತದ್ವಿರುದ್ಧವಾಗಿದೆ.
ಆಹಾರದ ಮತ್ತು ಆರೋಗ್ಯದ ಹಕ್ಕು ಮೂಲಭೂತ ಹಕ್ಕು ಆಗಿರುತ್ತದೆ. ಆದುದರಿಂದ ತಲಪಾಡಿಯಲ್ಲಿ ಮುಚ್ಚಿರುವ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ತೆರೆಯುವಂತೆ ಕರ್ನಾಟಕ ರಾಜ್ಯ ಸರಕಾರಕ್ಕೆ ನಿದೇ೯ಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಪ್ರಾರ್ಥಿಸಲಾಗಿದೆ.
ಗಡಿಯನ್ನು ಬಂದ್ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೂಡ ರಿಟ್ ನಲ್ಲಿ ಪ್ರಾರ್ಥಿಸಲಾಗಿದೆ.
ಕೊರೊನಾ ವೈರಸ್ ಹರಡದ೦ತೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾದ ಹಿನ್ನೆಲೆಯಲ್ಲಿ ಕನಾ೯ಟಕ ಸರಕಾರವು ತನ್ನ ಗಡಿಯಲ್ಲಿರುವ ರಸ್ತೆಗಳನ್ನು ಮುಚ್ಚಿ ಹೊರ ರಾಜ್ಯದವರ ಪ್ರವೇಶ ನಿಬ೯೦ಧಿಸಿತ್ತು.
You may like
DAKSHINA KANNADA
ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ
Published
11 hours agoon
10/01/2025By
NEWS DESK4ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಇದನ್ನೂ ಓದಿ : ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇದನ್ನೂ ಓದಿ : ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹ*ತ್ಯೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
LATEST NEWS
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
Published
12 hours agoon
10/01/2025By
NEWS DESK2ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.