Wednesday, October 5, 2022

ಕಾಸರಗೋಡು ಫೋಕ್ಸೋ ಆರೋಪಿ ಉಡುಪಿಯಲ್ಲಿ ಶವವಾಗಿ ಪತ್ತೆ..!

ಕಾಸರಗೋಡು ಫೋಕ್ಸೋ ಆರೋಪಿ ಉಡುಪಿಯಲ್ಲಿ ಶವವಾಗಿ ಪತ್ತೆ..!

ಉಡುಪಿ : ಕಾಸರಗೋಡು ಫೋಕ್ಸೋ ಆರೋಪಿಯೊಬ್ಬ ಉಡುಪಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕಾಸರಗೋಡಿನ ಕೂಡ್ಲುವಿನ 28 ವರ್ಷದ ಮಹೇಶ್ ಶವವಾಗಿ ಪತ್ತೆಯಾದ ಪೋಕ್ಸೋ ಆರೋಪಿಯಾಗಿದ್ದಾನೆ.

ಶೌಚಾಲಯದಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಮಾಡಿದ್ದ ಆರೋಪವನ್ನು ಮಹೇಶ್ ಹೊಂದಿದ್ದ.

ಜುಲೈ 22 ರಂದು ಕಾಸರಗೋಡು ಧಕ್ಕೆ ಬಳಿ ವಿಚಾರಣೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಹಾರಿದ್ದ.

ಸಾಕಷ್ಟು ಹುಡುಕಾಡಿದ್ದರು ಕೂಡ ಆರೋಪಿಯ ಪತ್ತೆಯಿರಲಿಲ್ಲ. ಈ ಬಗ್ಗೆ ಉಡುಪಿ ಪೊಲೀಸರಿಗೂ ಈ  ಮಾಹಿತಿ ನೀಡಲಾಗಿತ್ತು. ಇಂದು ಉಡುಪಿಯ ಕೋಟ ಮಣೂರು ಪಡುಕರೆಯ ಸಮುದ್ರ ತೀರದಲ್ಲಿ ಶವ ಪತ್ತೆಯಾಗಿದೆ.

ಮಹೇಶ್ ಶವ  ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವದಲ್ಲಿದ್ದ ಬಟ್ಟೆ ಮತ್ತು ಕೈಕೋಳ ಗಮನಿಸಿ ಶವದ ಗುರುತು ಪತ್ತೆ ಹಚ್ಚಲಾಗಿದೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...