ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜೀವ ಯಾನೆ ಸಜಿತ್ (30) ಗೆ ಜೀವಾವಧಿ ಹಾಗೂ ಒಂದೂವರೆ ಲಕ್ಷ ರೂ. ದಂಡ ವಿಧಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ತಿರ್ಪು ನೀಡಲಾಗಿದೆ.
2016ರ ಎ.14 ರಂದು ಈ ಘಟನೆ ನಡೆದಿತ್ತು. ಆಟೋರಿಕ್ಷಾ ಚಾಲಕ ಸಜಿತ್ ಬಾಲಕಿಯನ್ನು ತನ್ನ ಆಟೋದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಮೊಕದ್ದಮೆ ದಾಖಲಿಸಲಾಗಿತ್ತು.
ಲೈಂಗಿಕ ದೌರ್ಜನ್ಯಕ್ಕೆ ಐಪಿಸಿ ನಿಯಮ ಪ್ರಕಾರ 15 ವರ್ಷ ಸಜೆ ಹಾಗೂ 50 ಸಾವಿರ ರೂ ದಂಡ, ಲೈಂಗಿಕ ದೌರ್ಜನ್ಯಕ್ಕೆ ಕರೆದುಕೊಂಡು ಹೋದುದಕ್ಕೆ 10 ವರ್ಷ ಸಜೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗಿದೆ.
ಅಲ್ಲದೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಜೀವನ ಪರ್ಯಂತ ಸಜೆ ಕೂಡ ಅನುಭವಿಸಬೇಕು. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಎರಡು ವರ್ಷ ಸಜೆ ಅನುಭವಿಸಬೇಕು.