Connect with us

bangalore

ಕಾಟೇರ ಸಿನಿಮಾಕ್ಕೆ ಮೊದಲ ದಿನವೇ ಭರ್ಜರಿ ಕಲೆಕ್ಷನ್

Published

on

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾ ನಿನ್ನೆ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಂಡಿದ್ದು, ಮೊದಲ ದಿನವೇ ಭಾರಿ ಕಲೆಕ್ಷನ್ ಅಗಿದೆ.

ಹೊಸ ಲುಕ್ ನಲ್ಲಿ ದರ್ಶನ್ ನಟನೆಯ ಸಿನಿಮಾ ಫ್ಯಾನ್ಸ್ ಗಳಿಗೆ  ಫೀದಾ ಆಗಿದೆ. ಇದೀಗ ಕಾಟೇರ ಸಿನಿಮಾದ ಕಲೆಕ್ಷನ್ ಬಗ್ಗೆ ಬಾಕ್ಸಾಫೀಸ್ ನಲ್ಲಿ ಮಾಹಿತಿ ಹೊರಬಿದ್ದಿದೆ. ಮೊದಲ ದಿನವೇ ಕಾಟೇರ 19ಕೋಟಿ 79 ಲಕ್ಷಗಳಿಸಿ ದಾಖಲೆ ನಿರ್ಮಿಸಿದೆ.

ಕಾಟೇರ ಸಿನಿಮಾವನ್ನು ರಾಕ್​ಲೈನ್​ ವೆಂಕಟೇಶ್​ ನಿರ್ಮಾಣ ಮಾಡಿದ್ದು, ತರುಣ್​ ಸುಧೀರ್​ ನಿರ್ದೇಶನದಲ್ಲಿ ನಟನಾಗಿ ದರ್ಶನ್, ಆರಾಧಾನಾ ರಾಮ್ ನಟಿಯಾಗಿ ನಟಿಸಿದ್ದಾರೆ. ಹಿರಿಯ ನಟ ಕುಮಾರ್​ ಗೋವಿಂದ್​, ವಿಜಯಾಕಾಂತ್​, ಜಗಪತಿಬಾಬು ಅವರು ಕಾಣಿಸಿಕೊಂಡಿದ್ದಾರೆ. ವಿ ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿ ಬಂದಿದೆ. 45 ಕೋಟಿ ಬಜೆಟ್​ ಅಂದಾಜಿನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ ಎಂದು ಹೇಳಲಾಗುತ್ತಿದೆ.

Click to comment

Leave a Reply

Your email address will not be published. Required fields are marked *

bangalore

ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ

Published

on

ಮಂಗಳೂರು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳುರು – ಮಂಗಳೂರು ನಡುವೆ ಡಿಸೆಂಬರ್ 23 ಹಾಗೂ 27 ರಂದು ವಿಶೇಷ ರೈಲು ಸಂಚರಿಸಲಿದೆ.  ಮತ್ತೆ ಪುನಃ ಅದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.

ಕೆಲಸದ ನಿಮಿತ್ತ ಮಂಗಳೂರಿನ ಹಲವು ಜನ ಬೆಂಗಳೂರಿನಲ್ಲಿ ವಾಸವಿದ್ದಾರೆ. ಇದೀಗ ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಅವರಿಗೆಲ್ಲಾ ಅನುಕೂಲವಾಗಲೆಂದು ಈ ವಿಶೇಷ ರೈಲು ಸಂಚಾರವನ್ನು ಅಳವಡಿಸಿದ್ದು, ಹಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದರ ಫಲಾನುಭವಿಗಳಾಗಲಿದ್ದಾರೆ.

ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್​​ಸೈಟ್​ಗೆ ಭೇಟಿ ನೀಡಿ. NTES ಅಪ್ಲಿಕೇಶನ್​​ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.

Continue Reading

bangalore

ಫಾರ್ಮ್ ಹೌಸ್ ನಲ್ಲಿ ದರ್ಶನ್ ರಿಲ್ಯಾಕ್ಸ್; ಬೆನ್ನು ನೋವು ಮಾಯಾ !

Published

on

ಮಂಗಳೂರು/ಮೈಸೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ದರ್ಶನ್ ಸೇರಿ ಕೆಲವರು ಜೈಲಿನಿಂದ ರಿಲೀಸ್ ಆಗಿದ್ದಾರೆ. 7 ಮಂದಿ ಆರೋಪಿಗಳಿಗೆ ಸೆರೆವಾಸದಿಂದ ಮುಕ್ತಿ ಸಿಕ್ಕಿದೆ. ಇದರ ಮಧ್ಯೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ದಾಸ ಮೈಸೂರಿನಲ್ಲಿ ರಿಲ್ಯಾಕ್ಸ್ ಮೋಡ್‌ಗೆ ಜಾರಿದ್ದಾರೆ.

ದರ್ಶನ್ ಗೆ ರೆಗ್ಯುಲರ್ ಬೇಲ್ ಸಿಕ್ಕಿದ್ದರೂ ಕೂಡ ಮೈಸೂರಿಗೆ ಹೋಗಲು ಅವಕಾಶ ಇರಲಿಲ್ಲ. ಇದರಿಂದ ದರ್ಶನ್ ಗೆ ಮೈಸೂರಿನ ಫಾರ್ಮ್ ಹೌಸ್ ಕಡೆ ಹೋಗಲು ತುಡಿತ ಹೆಚ್ಚಾಗಿತ್ತು. ಇದೇ ನಿಟ್ಟಿನಲ್ಲಿ ಸೆಷನ್ಸ್ ಕೋರ್ಟ್ ಗೆ ದಾಸ ಅರ್ಜಿ ಸಲ್ಲಿಸಿದರು. ಕೋರ್ಟ್ ಕೂಡ ದರ್ಶನ್ ಗೆ ಅನುಮತಿ ನೀಡಿತ್ತು. ಡಿಸೆಂಬರ್ 20ರಿಂದ ಜನವರಿ 05ರವರೆಗೆ 2ವಾರ ಪಮಿರ್ಷನ್ ಕೊಟ್ಟಿದೆ.

ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

ಫಾರ್ಮ್ ಹೌಸ್ ನಲ್ಲಿ ದಾಸನ ಬೆನ್ನು ನೋವು ಮಾಯಾ !
ದರ್ಶನ್ ಗೆ ಕೋರ್ಟ್ ಅನುಮತಿ ಕೊಟ್ಟ ಬೆನ್ನಲ್ಲೇ ನಿನ್ನೆ ಬೆಳಗ್ಗೆ ದರ್ಶನ್ ಮೈಸೂರಿಗೆ ಪ್ರಯಣಿಸಿದ್ದಾರೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ವಿನೀಶ್ ಕ್ಯಾಟವೇರಿ ಫಾರ್ಮ್ ಹೌಸ್​ನಲ್ಲಿ ರೆಸ್ಟ್‌ ಮಾಡುತ್ತಿದ್ದಾರೆ. ಫಾರ್ಮ್ ಹೌಸ್​ನಲ್ಲಿ ಪ್ರಾಣಿಗಳ ಜೊತೆ ಕಾಲಕಳೆಯುತ್ತ ದರ್ಶನ್ ಓಡಾಡುತ್ತಿದ್ದಾರೆ. ತೋಟದ ಕೆಲಸ ಮಾಡಿಸುತ್ತ ಬೆನ್ನುನೋವನ್ನೇ ಮರೆತಂತೆ ಕಾಣಿಸಿಕೊಂಡಿದ್ದಾರೆ.

ಇಷ್ಟುದಿನ ಜೈಲಿನಲ್ಲಿ ಬಂಧಿಯಾಗಿದ್ದ ದರ್ಶನ್ ಈಗ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ದಾಸನಿಗೆ ಮತ್ತೆ ಶಾಕ್ ಕೊಡಲು ಪೊಲೀಸ್ ಇಲಾಖೆ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ಕೊಂಡೊಯ್ಯಲು ಸಜ್ಜಾಗಿದೆ.

 

Continue Reading

bangalore

ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !

Published

on

ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್‌ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.

ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್‌.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

Continue Reading

LATEST NEWS

Trending

Exit mobile version