Friday, August 12, 2022

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಕಟ್ಟದಪ್ಪ ಸೇವೆ

ಪಡುಬಿದ್ರಿ: ಇಲ್ಲಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಇಂದು ವಿಶೇಷ ಕಟ್ಟದಪ್ಪ ಸೇವೆ ಜರಗಿತು.


ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀ ಮಹಾಗಣಪತಿ ದೇವರ ಇಷ್ಟಾರ್ಥ ಸಿದ್ಧಿಗಾಗಿ ಇಲ್ಲಿ ನಡೆಯುವ ಕಟ್ಟದಪ್ಪ ಮತ್ತು ಪೊಟ್ಟಪ್ಪ ಸೇವೆಗಳು ಜಗತ್ಪ್ರಸಿದ್ಧ.

ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬಲ್ಲಿ ಜನರು ಎಷ್ಟೇ ಪ್ರಯತ್ನ ಪಟ್ಟರೂ, ಕಟ್ಟಪುಣಿ ಸುದೃಢವಾಗಿ ನಿಲ್ಲುತ್ತಿರಲಿಲ್ಲ. ಪಡುಬಿದ್ರಿ ಮಹಾಗಣಪತಿಗೆ ಕಟ್ಟದಪ್ಪ ಹರಕೆ ಹೇಳಿದ್ದರಂತೆ. ಹರಕೆ ಸಲ್ಲಿಸಿದ ಬಳಿಕ ಕಟ್ಟಪುಣಿ ಸುದೃಢವಾಗಿ ನಿಂತಿತು ಎಂದು ಇಲ್ಲಿನ ಭಕ್ತರ ನಂಬಿಕೆ.


ಅಂದು ೫-೬ ಸೇರು ಅಕ್ಕಿ ಹಿಟ್ಟು ಮೂಲಕ ಮಧ್ಯಾಹ್ನ ನಡೆಯುತ್ತಿದ್ದ ಸೇವೆ ಇಂದು ಜಗದಗಲ ಹರಡಿ ೧೦೦ ಮುಡಿ ವರೆಗೆ ಬಂದು ತಲುಪಿದೆ.

ಕಳೆದ ೨೦ ವರ್ಷಗಳಿಂದ ಶ್ರೀ ದೇವಳದಲ್ಲಿ ಯೋಗೀಶ್ ಭಟ್ ಕರ್ಕಟೆ ಹೌಸ್ ರವರ ೮೫ ಜನರ ತಂಡ ಇಲ್ಲಿ ಕಟ್ಟದಪ್ಪ ತಯಾರಿಸುವ ಕಾಯಕ ಮಾಡುತ್ತಾ ಬಂದಿದೆ.


೧೬ ವರ್ಷಗಳ ಹಿಂದೆ ೨೦ ಮುಡಿ ಅಕ್ಕಿ ಹಿಟ್ಟಿನಿಂದ ಕಟ್ಟದಪ್ಪ ತಯಾರಿಸಲಾಗುತ್ತಿತ್ತು ಎನ್ನುವ ಯೋಗಿಶ್ ಭಟ್, ಈ ವರ್ಷ ೧೦೦ ಮುಡಿ ಅಕ್ಕಿ ಹಿಟ್ಟು ಉಪಯೋಗಿಸಿ ಕಟ್ಟದಪ್ಪ ತಯಾರಿಸಲಾಗುತ್ತಿದೆ. ಇದರಿಂದ ಇದರ ಜನಪ್ರಿಯತೆ ಹಾಗೂ ಭಕ್ತರ ಭಕ್ತಿ ಭಾವದ ಬಗ್ಗೆ ಅರಿಯಬಹುದು ಎನ್ನುತ್ತಾರೆ.

ಈ ಬಾರಿ ಕಟ್ಟದಪ್ಪಕ್ಕೆ ೧೦೦ ಮುಡಿ ಅಕ್ಕಿ ಹಿಟ್ಟು, ೧೫೦೦ ತೆಂಗಿನ ಕಾಯಿ, ೩೫೦೦ ಬಾಳೆ ಹಣ್ಣು, ೩೭೦೦ ಕೆಜಿ ಬೆಲ್ಲ, ೩೦ ಗೋಣಿ ಚೀಲ ಅರಳು, ೧೫ ಕೆಜಿ ಏಲಕ್ಕಿ ಮತ್ತು ೮೦ ಟಬ್ಬಿ ಕೊಬ್ಬರಿ ಎಣ್ಣೆ ಬಳಸಿ ಈ ಕಟ್ಟದಪ್ಪ ತಯಾರಿಸಲಾಗುತ್ತದೆ.


೮೫ ಜನರ ಅಡುಗೆಯಾಳುಗಳ ತಂಡ ಸೇರಿ ೮ ಬಾಣಲೆ, ೨ ಕೊಪ್ಪರಿಗೆ, ೨೨ ಅಪ್ಪದ ಕಾವಲಿ ಮೂಲಕ ಬೆಳಗಿನ ಜಾವ ೧.೩೦ ಗಂಟೆಯಿAದ ಆರಂಭಿಸಿ ರಾತ್ರಿ ೬, ೭ ಗಂಟೆ ತನಕ ಸುಮಾರು ೨ ಲಕ್ಷ ಅಪ್ಪಗಳನ್ನು ತಯಾರಿಸಿದ್ದಾರೆ.

ದೇವಳದ ಆಡಳಿತಾಧಿಕಾರಿ ಪ್ರಶಾಂತ್ ಶೆಟ್ಟಿ, ಅನುವಂಶೀಯ ಮೊಕ್ತೇಸರ ರತ್ನಾಕರ ರಾಜ್ ಕಿನ್ನಕ್ಕ ಬಳ್ಳಾಲ್ ಮತ್ತು ರವಿ ಬಟ್‌ರವರು ಸಮಗ್ರ‍್ರ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...