Connect with us

LATEST NEWS

ಕಾವೇರಿ ನದಿ ನೀರು ಹಂಚಿಕೆ ವಿವಾದ- ಶೋಭಾ ಕರಂದ್ಲಾಜೆಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು..!

Published

on

ಉಡುಪಿ: ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆಯಾಗಿದೆ. ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಟ್ಟಿದ್ದೇವೆ.

ಸರಕಾರದ ಕೆಲಸ ಜನಸಾಮಾನ್ಯರಿಗೂ ತಲುಪುವಂತೆ ಜನತಾದರ್ಶನ ಯೋಜನೆ ರೂಪಿಸಿದ್ದೇವೆ.

ಪ್ರತಿ ತಿಂಗಳು 25ನೇ ತಾರೀಕಿನಂದು ಜಿಲ್ಲಾಡಳಿತದಿಂದ ಜನತಾದರ್ಶನ ಸಭೆ ಮಾಡುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂಕೋರ್ಟ್ ನ ತೀರ್ಪನ್ನ ನಾವು ಪಾಲಿಸಬೇಕು.

ನೆಲಜಲವನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತೇವೆ. ಬೇಗ ಮಳೆ ಆಗಲಿ ಎಂದು ದೇವರಲ್ಲಿ ಮಳೆಯಾಗಲಿ ಎಂದು ಪ್ರಾರ್ಥನೆ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಎಲ್ಲಾ ವರದಿಗಳನ್ನು ಇಟ್ಟು ಸುಪ್ರೀಂನಲ್ಲಿ ವಾದ ಮಾಡಿದೆ.

ರಾಜ್ಯ ಸರ್ಕಾರದ ಬಳಿ ವೈಜ್ಞಾನಿಕ ವರದಿ ಇಲ್ಲ, ವಾದ ಮಂಡಿಸಿಲ್ಲ ಎಂದು ಆರೋಪಿಸಿರುವ ಶೋಭಾ ಕರಂದ್ಲಾಜೆ ವಾದ ಹೇಗೆ ಮಾಡಬೇಕು ಎಂದು ಹೇಳಿಕೊಡಲಿ ಎಂದು ತಿರುಗೇಟು ನೀಡಿದರು.

Click to comment

Leave a Reply

Your email address will not be published. Required fields are marked *

LATEST NEWS

ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಮಹಿಳೆ ಸಾವು

Published

on

ನವದೆಹಲಿ: ಎರಡು ಅಂತಸ್ತಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಮತ್ತು ಅವರ ಪತಿ ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ರೋಹಿತ್‌ ಮತ್ತು ವಿನೀತಾ ಶರ್ಮಾ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ್ದರು.

ಮುಂಜಾನೆ 3.35ರ ಸುಮಾರಿಗೆ ಬೆಂಕಿಯ ಬಗ್ಗೆ ನಮಗೆ ಎಚ್ಚರಿಕೆ ನೀಡಲಾಯಿತು. ನಂತರ ನಾವು ನಾಲ್ಕು ಅಗ್ನಿಶಾಮಕ ವಾಹನಗಳನ್ನು ಎಸ್ ಕ್ಲಾತ್ ಹೌಸ್ ಮತ್ತು ರೆಡಿಮೇಡ್ ಗಾರ್ಮೆಂಟ್ಸ್ ಮುಖ್ಯ ರಸ್ತೆಯಲ್ಲಿರುವ ಬಟ್ಟೆ ಅಂಗಡಿಗೆ ಕಳುಹಿಸಿದ್ದೇವೆ. ದಂಪತಿಯನ್ನು ರಕ್ಷಿಸಲಾಗಿದೆ. ಆದರೆ ವಿನೀತಾ ದೀರ್ಘಕಾಲದವರೆಗೆ ಹೊಗೆಯಲ್ಲಿ ಸಿಲುಕಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ನೋಯಾದ ಗೌತಮ್ ಬುದ್ಧ ನಗರದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರದೀಪ್ ಕುಮಾರ್ ಚೌಬೆ ಹೇಳಿದ್ದಾರೆ.

Continue Reading

LATEST NEWS

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ: ಆರೋಗ್ಯ ಇಲಾಖೆ

Published

on

ಬೆಂಗಳೂರು: ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಜತೆಗೆ, ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣು ಇಡಲು ನಿರ್ಧರಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಇಲಾಖೆ ಹೇಳಿದೆ.

ಈ ವಿಚಾರವಾಗಿ ಇಂದು (ಬುಧವಾರ) ಸಂಜೆಯೊಳಗೆ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರದಿಂದ 12 ಸಾವಿರ ರೂ!

ಖಾಸಗಿ ಆಸ್ಪತ್ರೆಗಳಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್​ಗೆ 10 ಸಾವಿರ ರೂ.ನಿಂದ 12 ಸಾವಿರ ರೂ. ದರ ಇದೆ. ಹೀಗಾಗಿ ಟೆಸ್ಟಿಂಗ್ ಅಗತ್ಯ ಇಲ್ಲ ಎಂದು ಇಲಾಖೆ ಪ್ರಕಟಣೆ ಹೊರಡಿಸಲಿದೆ ಎಂದು ಮೂಲಗಳು ಹೇಳಿವೆ.

ಅಪಾಯಕಾರಿ ವೈರಸ್ ಅಲ್ಲ: ಆರೋಗ್ಯ ಇಲಾಖೆ

ಸಾಮಾನ್ಯವಾಗಿ ಚಳಿಗಾಲದಲ್ಲಿ ವೈರಸ್ ಕಾಣಿಸಿಕೊಳ್ಳುವುದು ಸಹಜ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲೂ ಎಚ್​​ಎಂಪಿವಿ ಟೆಸ್ಟಿಂಗ್ ಮಾಡುವುದಿಲ್ಲ. ಈ ವೈರಸ್ ಅಪಾಯಕಾರಿ ಅಲ್ಲ ಎಂದು ಆರೋಗ್ಯ ‌ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಪತ್ತೆಯಾಗಿರುವುದು ಚೀನಾದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ವೈರಸ್ ಅಲ್ಲ ಎಂದು ಈಗಾಗಲೇ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಿದ್ದು, ಜನರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಈಗಾಗಲೇ ವೈರಸ್ ಪತ್ತೆಯಾಗಿದೆ. ಅದಕ್ಕೂ ಮುನ್ನ ಶಿವಮೊಗ್ಗದಲ್ಲಿ ವೈರಸ್ ಪತ್ತೆಯಾಗಿರುವ ಬಗ್ಗೆ ನಂತರ ಬೆಳಕಿಗೆ ಬಂದಿತ್ತು. ಆದರೆ, ಈ ಎಲ್ಲ ವೈರಸ್ ಸೋಂಕು ಪ್ರಕರಣಗಳಲ್ಲಿ ಸೋಂಕಿಗೆ ಒಳಗಾದ ಮಕ್ಕಳು ಸದ್ಯ ಆರೋಗ್ಯವಾಗಿದ್ದಾರೆ.

ದೇಶದಾದ್ಯಂತ ಈವರೆಗೆ ಒಟ್ಟು 7 ಹೆಚ್ಎಂಪಿವಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಕರ್ನಾಟಕದಲ್ಲಿ 2, ತಮಿಳುನಾಡಿನಲ್ಲಿ 2, ಮಹಾರಾಷ್ಟ್ರದಲ್ಲಿ 2, ಗುಜರಾತ್​ನಲ್ಲಿ 1 ಪ್ರಕರಣ ದೃಢಪಟ್ಟಿವೆ.

ಎಚ್‌ಎಂಪಿವಿ ವೈರಸ್ ಬಗ್ಗೆ ಭಯ ಅಗತ್ಯವಿಲ್ಲ. ಮುನ್ನೆಚ್ಚರಿಕೆ ವಹಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

Continue Reading

BELTHANGADY

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ

Published

on

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮಂಗಳವಾರ ಲೋಕಾರ್ಪಣೆ ಮಾಡಿದರು.

ಪತ್ನಿ ಸಮೇತರಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಧನ್‌ಕರ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಕಾಂಪ್ಲೆಕ್ಸ್ ಉದ್ಘಾಟಿಸಿ ಅಮೃತವರ್ಷಿಣಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ವೇದಿಕೆಯಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಪರಾಷ್ಟ್ರಪತಿ ಕ್ಷೇತ್ರ ಕೆಲಸ ಕಾರ್ಯಗಳನ್ನ ಪ್ರಶಂಸಿಸಿ, ಇನ್ನಷ್ಟು ಒಳ್ಳೆ ಕಾರ್ಯ ನಡೆಯಲಿ ಎಂದು ಹಾರೈಸಿದರು.

ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಮಂಜುನಾಥ ದೇವರ ದರ್ಶನಕ್ಕೆ ಬರುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಿದ್ದಾರೆ. ಲಕ್ಷಾಂತರ ಜನರು ಧರ್ಮಸ್ಥಳಕ್ಕೆ ಆಗಮಿಸುತ್ತಾರೆ. ಭಕ್ತರು ನಿಲ್ಲುವುದಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರ ಅಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ ಎಲ್ಲ ಜನರಿಗೆ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ. ಧಾರ್ಮಿಕ ಸಂಸ್ಥೆಗಳು ಈ ದೇಶದಲ್ಲಿ ಸಂಸ್ಕೃತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿವೆ. ಧಾರ್ಮಿಕ ಸಂಸ್ಥೆಗಳೇ ಈ ದೇಶದ ಗ್ರಾಮೀಣ ಪ್ರದೇಶದ ಶಕ್ತಿ. ಶಿಕ್ಷಣವೇ ದೇಶದಲ್ಲಿ ಸಮಾನತೆ ತರುವ ಮುಖ್ಯ ಸಾಧನವಾಗಿದೆ ಎಂದು ತಿಳಿಸಿದರು.

ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕು. ಮೆಸಪೊಟೆಮಿಯಾ, ಚೀನಾ ನಾಗರಿಕತೆ ನಾಶವಾಗಿದೆ. ನಮ್ಮ ನಾಗರಿಕತೆ ಮಾತ್ರ ಇನ್ನೂ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ‍್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ‍್ಯ ಇದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆ ಇದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಸಂವಿಧಾನವೇ ನಮ್ಮಲ್ಲಿ ಪರಮೋಚ್ಛವಾದುದು. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.

ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ, ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರ ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ, ಅತ್ಯುನ್ನತ ನಾಗರಿಕತೆ ನಮ್ಮದು. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಹೇಳಿದರು.

Continue Reading

LATEST NEWS

Trending

Exit mobile version