Connect with us

DAKSHINA KANNADA

ಚುನಾವಣೆಗೆ ಟ್ಯಾಕ್ಸಿ ಚಾಲಕರನ್ನು ದುಡಿಸುವಾಗ ಮಾನವೀಯತೆ ಇಟ್ಕೊಳ್ಳಿ : ದ.ಕ. ಜಿಲ್ಲಾ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ ಆಗ್ರಹ

Published

on

ಚುನಾವಣಾ ಕರ್ತವ್ಯಕ್ಕಾಗಿ ಸಾರಿಗೆ ಇಲಾಖೆಯು ಟ್ಯಾಕ್ಸಿಗಳನ್ನು ಬಳಸಲು ಮುಂದಾಗಿದ್ದು, ಈ ಪ್ರಕ್ರಿಯೆ ನೋಡಿದಾಗ ಟ್ಯಾಕ್ಸಿ ಚಾಲಕರಿಗೆ  ಭಯ  ಆರಂಭವಾಗಿದೆ.

ಮಂಗಳೂರು :  ಖಾಸಗಿ ಟ್ಯಾಕ್ಸಿಗಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳುವ ಸಂದರ್ಭದಲ್ಲಿ ಟ್ಯಾಕ್ಸಿ ಚಾಲಕ- ಮಾಲಕರಿಗೆ  ಚುನಾವಣಾ ಅಧಿಕಾರಿಗಳು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರ ಜತೆಗೆ ಸೂಕ್ತ ಗೌರವ ಧನವನ್ನು ನೀಡ ಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ ಆಗ್ರಹಿಸಿದೆ.  

ಈ ಬಗ್ಗೆ ಟ್ಯಾಕ್ಸಿಮೆನ್‌ ಅಸೋಸಿಯೇಶನ್‌ ನ ಅಧ್ಯಕ್ಷ ಆನಂದ್‌ ಅವರು ಮಾಧ್ಯಮಗಳ ಜತೆ ಮಾತನಾಡಿ, ಇದೀಗ ಚುನಾವಣಾ ಕರ್ತವ್ಯಕ್ಕಾಗಿ ಸಾರಿಗೆ ಇಲಾಖೆಯು ಟ್ಯಾಕ್ಸಿಗಳನ್ನು ಬಳಸಲು ಮುಂದಾಗಿದ್ದು, ಈ ಪ್ರಕ್ರಿಯೆ ನೋಡಿದಾಗ ಟ್ಯಾಕ್ಸಿ ಚಾಲಕರಿಗೆ  ಭಯ  ಆರಂಭವಾಗಿದೆ.

ಕಳೆದ ಬಾರಿ ಚುನಾವಣೆಯ ವೇಳೆ ವಿಐಪಿಗಳು ಬಂದಾಗ ಒದಗಿಸಿದ್ದ ಸೇವೆಗೆ ಬರ ಬೇಕಾಗಿದ್ದ ಗೌರವ ಧನ  ನಮ್ಮ ಸಂಘಟನೆಯಿಂದ ಬಹಳಷ್ಟು ಒತ್ತಡ ಹಾಕಿದ ನಂತರ ಆರು ತಿಂಗಳ ಬಳಿಕ ಪಾವತಿಯಾಗಿದೆ.

ಹಾಗಾಗಿ ಈ ಬಾರಿ ಒತ್ತಡ ಬೇಡ; ಸ್ವ- ಇಚ್ಛೆಯಿಂದ ಕೊಡುವ ವಾಹನಗಳನ್ನು ಮಾತ್ರ ಬಳಸಿಕೊಳ್ಳಿ.  ಅಂಥವರಿಗೆ ಸೂಕ್ತ ಸೌಲಭ್ಯ ಕೊಡಿ ಎಂದರು.

ಅಸೋಸಿಯೇಶನ್‌ ನ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಅವರು ಮಾತನಾಡಿ, ಚುನಾವಣಾ ಕರ್ತವ್ಯಕ್ಕೆ ಪಡೆಯುವ ಟ್ಯಾಕ್ಸಿ ಮತ್ತು ಅದರ ಚಾಲಕನನ್ನು ಅಧಿಕಾರಿಗಳು ದಿನದ 24 ಗಂಟೆ ಕಾಲವೂ ದುಡಿಸುತ್ತಾರೆ.

ಕಾರ್ಮಿಕ ಕಾನೂನು ಪ್ರಕಾರ ಇದು ಸರಿಯಲ್ಲ. ಟ್ಯಾಕ್ಸಿ ಮತ್ತು ಕ್ಯಾಬ್‌ ಗಳಿಗೆ ಇತ್ತೀಚೆಗೆ ನಿಗದಿ ಪಡಿಸಿದ ಬಾಡಿಗೆ ದರ ಸಮಂಜಸವಾಗಿಲ್ಲ.

ಅದನ್ನು ಪುನರ್‌ ಪರಿಶೀಲಿಸ ಬೇಕು ಎಂದರು.

ಇತ್ತೀಚೆಗೆ ಕೇಂದ್ರ ಗೃಹ ಸಚಿವರು ಕ್ಯಾಂಪ್ಕೋ ಕಾರ್ಯಕ್ರಮಕ್ಕೆ ಬಂದಾಗ ಸುಮಾರು 15 ಟ್ಯಾಕ್ಸಿಗಳನ್ನು 4 ದಿನಗಳಿಗೆ ಒದಗಿಸಿದ್ದು, 3 ತಿಂಗಳಾದರೂ ಇನ್ನೂ ಬಾಡಿಗೆ ಹಣ ಬಂದಿಲ್ಲ ಎಂದು  ಭಾರತ್‌ ಟ್ರಾನ್ಸ್‌ಪೋರ್ಟ್‌ ಅಸೋಸಿಯೇಶನಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಗರಾಜ್‌ ರೈ ಆರೋಪಿಸಿದ್ದಾರೆ.

 

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending