Home ಕರ್ನಾಟಕ ವಾರ್ತೆ ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಐವರು ಮಹಿಳೆಯರು ಸೇರಿ 20 ಸಾವು

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಐವರು ಮಹಿಳೆಯರು ಸೇರಿ 20 ಸಾವು

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಐವರು ಮಹಿಳೆಯರು ಸೇರಿ 20 ಸಾವು

ಬೆಂಗಳೂರು: ಬೆಂಗಳೂರಿನಿಂದ ಕೇರಳದ ಎರ್ನಾಕುಲಂಗೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಯ ವೋಲ್ವೋ ಬಸ್ ಸಂಖ್ಯೆ 784 ಗರುಡಾ ಕಿಂಗ್ ಕ್ಲಾಸ್ ಹಾಗೂ ಕಂಟೈನರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗುರುವಾರ ಮುಂಜಾನೆ ನಡೆದ ಈ ದುರ್ಘಟನೆಯಲ್ಲಿ 20 ಮಂದಿ ಮೃತಪಟ್ಟಿದ್ದಾರೆ.


ಬಸ್ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿತ್ತು ಎಂಬ ಮಾಹಿತಿ ಇದ್ದು, ಕೊಯಮತ್ತೂರು-ಸೇಲಂ ಹೆದ್ದಾರಿಯಲ್ಲಿ ಮುಂಜಾನೆ 4.30ರ ಸುಮಾರಿಗೆ ಅಪಘಾತ ನಡೆದಿದೆ. ಬಸ್ಸಿನಲ್ಲಿ 48 ಪ್ರಯಾಣಿಕರಿದ್ದರು. ಅದರಲ್ಲಿ 19 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎದುರಿನಿಂದ ಬರುತ್ತಿದ್ದ ಲಾರಿಯ ಟೈಯರ್ ಸ್ಫೋಟಗೊಂಡಿದ್ದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವೋಲ್ವೊ ಬಸ್‍ಗೆ ಡಿಕ್ಕಿ ಹೊಡೆದಿದೆ ಈ ಅಪಘಾತದಿಂದ ಬಸ್ಸಿಗೆ ಬಲಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತಕ್ಕೀಡಾದವರಿಗೆ ತುರ್ತು ವೈದ್ಯಕೀಯ ಸೌಲಭ್ಯ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲಕ್ಕಾಡ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಮೃತರನ್ನು ಗುರುತಿಸುವ ಕಾರ್ಯವಿಧಾನಗಳು ಪ್ರಗತಿಯಲ್ಲಿವೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

20 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಿರ್ಪೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಹಲವಾರು ಮಂದಿಗೆ  ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಐವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 48 ಜನರಲ್ಲಿ ಬಹುತೇಕರು ಕೇರಳದವರು ಎಂದು ತಿಳಿದುಬಂದಿದೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...