DAKSHINA KANNADA
ಕಾಂತಾರಕ್ಕೆ ಮತ್ತೆ ಶಾಕ್ ಕೊಟ್ಟ ಕೇರಳ ಕೋರ್ಟ್; ಚಿತ್ರ ನಿರ್ಮಾಪಕರು -ಸಂಗೀತಾ ನಿರ್ದೇಶಕರು ಇದಕ್ಕೆ ಉತ್ತರಿಸ್ತಾರೆಂದ ರಿಷಬ್..! .!!
Published
2 years agoon
By
Adminಪಾಲಕ್ಕಾಡ್ : ಕೋಯಿಕೋಡ್ ಬಳಿಕ ಕೇರಳದ ಮತ್ತೊಂದು ನ್ಯಾಯಾಲಯ ಹಾಡಿಗೆ ತಡೆಯಾಜ್ಞೆ ನೀಡಿದ್ದು ಥಿಯೇಟರ್ , ಒಟಿಟಿ ಪ್ರದರ್ಶನ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ನೀಡಿದ್ದಿ ಈ ಮೂಲಕ ಕಾಂತಾರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕಾಂತಾರ ಸಿನಿಮಾದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್‌ನಲ್ಲಿ ಕಾಂತಾರ ತನ್ನ ಹವಾ ಸೃಷ್ಟಿಸಿದೆ.
ಈ ಮಧ್ಯೆ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಾಂತಾರ ಚಿತ್ರದ ಹಾಡುಗಳನ್ನು ಅನ್ಯ ಭಾಷೆಯ ಹಾಡುಗಳಿಂದ ಕದಿಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಆದರೂ ಆ ಹಾಡಿನ ಮಾಲೀಕರಿಂದ ಯಾವುದೇ ರೀತಿಯ ದೂರುಗಳು ಕೇಳಿ ಬಂದಿರಲಿಲ್ಲ. ಆದರೆ ಕಳೆದ ವಾರವಷ್ಟೇ ಕೇರಳದ ತೈಕ್ಕುಡಂ ಬ್ರಿಡ್ಜ್ ಎಂಬ ಬ್ಯಾಂಡ್ ವರಹ ರೂಪಂ ಹಾಡಿಗೂ ಹಾಗೂ ತಮ್ಮ ‘ನವರಸಮ್’ ಹಾಡಿಗೂ ಅಪಾರವಾದ ಸಾಮ್ಯತೆಗಳಿವೆ ಎಂದು ಕಾಂತಾರ ವಿರುದ್ಧ ದೂರನ್ನು ಸಲ್ಲಿಸಿತ್ತು.
ಈ ಸಂಬಂಧ ಕೋಯಿಕೋಡ್ ಸ್ಥಳೀಯ ನ್ಯಾಯಾಲಯ ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿತ್ತು. ಇದಾದ ಬೆನ್ನಲ್ಲೇ ಇದೀಗ ಮತ್ತೊಂದು ಆಡಿಯೋ ಕಂಪೆನಿ ವರಾಹ ರೂಪಂ ಹಾಡಿನ ವಿರುದ್ಧ ಕಾಪಿರೈಟ್ ದೂರು ದಾಖಲಿಸಿದ್ದು, ಕೋಯಿಕೋಡ್ ಬಳಿಕ ಕೇರಳದ ಮತ್ತೊಂದು ಸ್ಥಳೀಯ ನ್ಯಾಯಾಲಯ ಹಾಡಿಗೆ ತಡೆಯಾಜ್ಞೆ ನೀಡಿದೆ.
ಈ ಹಾಡನ್ನು ಒಳಗೊಂಡು ಚಿತ್ರಮಂದಿರ, ಒಟಿಟಿ, ಯೂಟ್ಯೂಬ್, ಅಮೆಜಾನ್ ಪ್ರೈಮ್ ಗಳಲ್ಲಿ ಪ್ರದರ್ಶಿಸಬಾರದು ಎಂದು ಕೇರಳದ ಪಾಲಕ್ಕಾಡ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕಾಂತಾರ ಸಿನಿಮಾ ನಿರ್ದೇಶಕರು, ನಿರ್ಮಾಪಕ, ಸಂಗೀತ ನಿರ್ದೇಶಕ, ಪೃಥ್ವಿರಾಜ್ ಪ್ರೊಡಕ್ಷನ್, ಅಮೆಜಾನ್, ಯೂಟ್ಯೂಬ್, ಸ್ಪಾಟಿ ಪೈ, ವಿಂಕ್ ಮ್ಯೂಸಿಕ್, ಡವೋ ಮ್ಯೂಸಿಕ್, ಜೀಯೋ ಸೆವನ್ ಮೊದಲಾಗಿ ವರಹಾ ರೂಪಂ ಹಾಡಿನ ಪ್ರದರ್ಶನ ಮತ್ತು ಪ್ರಸಾರ ಮಾಡದಂತೆ ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಕಾಂತಾರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕಾಂತಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ತೈಕ್ಕುಡಂ ಬ್ರಿಡ್ಜ್ :
ಇನ್ನು ಕಾಂತಾರ ತಂಡದ ವಿರುದ್ಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ತಂಡ ಬೇಸರ ವ್ಯಕ್ತಪಡಿಸಿತ್ತು.
ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ.
ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ.
ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್’ ತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿತ್ತು.
ಹಾಡಿನ ಕಾಪಿರೈಟ್ ಬಗ್ಗೆ ರಿಷಬ್ ಏನಂದ್ರು ..!?
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾದ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಾಂತಾರ ಸಿನಿಮಾ ನಟ ಹಾಗೂ ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಹಾಡಿನ ಬಗ್ಗೆ ಇದಿಗ ಎದ್ದಿರುವ ವಿವಾದ ಸಹಜವಾಗಿದ್ದು, ಸಿನಿಮಾ ಗೆದ್ದಾಗ ಇಂತಹ ವಿಚಾರಗಳು ಸಹಜವಾಗಿ ಬರುತ್ತವೆ.
ಈ ಬಗ್ಗೆ ಸಂಗೀತ ನಿರ್ದೇಶಕರು ಮತ್ತು ಚಿತ್ರ ನಿರ್ಮಾಪಕರು ಉತ್ತರ ನೀಡುತ್ತಾರೆ ಎಂದಿದ್ದಾರೆ.
ಮಂಗಳೂರು : ಶ್ವೇತಾ ಜ್ಯುವೆಲರ್ಸ್‌ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.
ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್‌ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್ ಮೈಕಾಲ
ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.
ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ
DAKSHINA KANNADA
ತಪ್ಪಿಸಿಕೊಳ್ಳಲು ಯತ್ನಿಸಿದ ಬ್ಯಾಂಕ್ ದರೋಡೆ ಆರೋಪಿ ಕಾಲಿಗೆ ಗುಂಡು..!
Published
1 day agoon
21/01/2025By
NEWS DESKಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್ ರಫೀಕ್ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
DAKSHINA KANNADA
ಗೋವುಗಳ ಮೇಲಿನ ಪೈಶಾಚಿಕ ಕೃ*ತ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Published
1 day agoon
21/01/2025By
NEWS DESK4ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.
ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.
LATEST NEWS
ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
ಶ್ವೇತಾ ಜ್ಯುವೆಲರ್ಸ್‌ನ ಮಾಲಿಕ ಅಶೋಕ್ ಶೇಟ್ ನಿ*ಧನ
ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್ ಮೈಕಾಲ
ಡಾಲಿ ಚಾಯ್ ವಾಲಾ ಮಂಗಳೂರಿನವನಲ್ಲ, ಇಲ್ಲದಿದ್ದರೆ ಅವನ ಅಂಗಡಿ ಮೇಲೆ ಬುಲ್ಢೋಝರ್ ಹೋಗ್ತಿತ್ತು-ರಾಜ್ ಬಿ ಶೆಟ್ಟಿ
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಇನ್ಮುಂದೆ ಹಾಯಾಗಿ ಕಳೆಬಹುದು ನಿವೃತ್ತಿ ಜೀವನ
ಟರ್ಕಿಯ ಸ್ಕಿ ರೆಸಾರ್ಟ್ನಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 76ಕ್ಕೆ ಏರಿಕೆ
Trending
- BIG BOSS3 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS10 hours ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS2 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
- FILM3 days ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು