DAKSHINA KANNADA
ಮುಲ್ಕಿಯಲ್ಲಿ ಕಾರಿಗೆ ಮೀನು ಸಾಗಾಟ ಲಾರಿ ಡಿಕ್ಕಿ : ಕಾರಿನಲಿದ್ದ ಮೂವರು ಪ್ರಯಾಣಿಕರು ಅಪಾಯದಿಂದ ಪಾರು..!
ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ.
ಮಂಗಳೂರು : ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿದ್ದ ಸಂದೇಶ್ ಪೂಜಾರಿ ಹಾಗೂ ಅವರ ಪತ್ನಿ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಕೆಲ ಹೊತ್ತು ಮಾತಿನ ಚಕಮಕಿ ನಡೆದಿದ್ದು, ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೂಡಲೇ ಸ್ಥಳಕ್ಕೆ ಧಾವಿಸಿದ ಟ್ರಾಫಿಕ್ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.