Connect with us

DAKSHINA KANNADA

KSRTC ಹೆಸರು ಇನ್ನು ಕೇರಳದ ಪಾಲಿಗೆ : 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು..!

Published

on

ಮಂಗಳೂರು : ಕೆಎಸ್ಆರ್ ಟಿ ಸಿ ಎಂಬ ಹೆಸರು‌ ಕೇರಳ ಪಾಲಾಗಿದ್ದು, ಭಾರತ ಸರ್ಕಾರದ ಟ್ರೇಡ್​ಮಾರ್ಕ್​ ರಿಜಿಸ್ಟ್ರಿ ಇಂತಹದೊಂದು ಆದೇಶ ಹೊರಡಿಸಿದೆ. ಕೆಎಸ್ಆರ್​ಟಿಸಿ ಹೆಸರು ಮತ್ತು ಎರಡು ಆನೆಯ ಸಂಕೇತ, ಆನವಂಡಿ ಹೆಸರಿನ ಕಾಪಿರೈಟ್ ಅನ್ನು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಂಜೂರು ಮಾಡಿದೆ.

ಟ್ರೇಡ್​ಮಾರ್ಕ್​​ ರಿಜಿಸ್ಟ್ರಿ ಮಂಜೂರು ಮಾಡಿರುವುದಾಗಿ ಕೇರಳ ಸರ್ಕಾರದ ಸಾರಿಗೆ ಇಲಾಖೆ ನಿನ್ನೆ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕೇರಳ ಮತ್ತು ಕರ್ನಾಟಕ ರಾಜ್ಯಗಳ ನಡುವೆ ‘ಕೆಎಸ್‌ಆರ್‌ಟಿಸಿ’ ಮೊನೊಗ್ರಾಮ್ ಕುರಿತ ವಿವಾದ ಬಹಳ ಹಿಂದೆಯೇ ಹುಟ್ಟಿಕೊಂಡಿತ್ತು.

ಆದರೆ, ಎರಡು ರಾಜ್ಯಗಳ ನಡುವಿನ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಬಂಧಿಸಿದಂತೆ ‘ಕೆಎಸ್‌ಆರ್‌ಟಿಸಿ’ ಮೊನೊಗ್ರಾಮ್ ಬಳಸುವ ಬಗೆಗಿನ ಕಾನೂನು ವಿವಾದವೂ 2014ರಲ್ಲಿ ಎಲ್ಲರ ಗಮನಕ್ಕೆ ಬಂದಿತ್ತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯು ಕೇರಳ ಸಾರಿಗೆ ಇಲಾಖೆಗೆ ಪತ್ರ ಬರೆದು ಕೆಎಸ್ಆರ್ಟಿಸಿ ಮೊನೊಗ್ರಾಮ್ ಬಳಸದಂತೆ ಸೂಚಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೇರಳ ಸಾರಿಗೆ ಇಲಾಖೆ, 1953 ರಿಂದಲೂ ‘ಕೆಎಸ್‌ಆರ್‌ಟಿಸಿ’ ಮೊನೊಗ್ರಾಮ್‌ನೊಂದಿಗೆ ಬಳಸುತ್ತಿದ್ದೇವೆ ಎಂದು ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಲ್ಲಿ ಆಕ್ಷೇಪಣೆ ಸಲ್ಲಿಸಿತ್ತು.

ತಿರುವಾಂಕೂರು ರಾಜ್ಯ ಸಾರಿಗೆ ಇಲಾಖೆ ರಚನೆಯಾದಾಗ ಬ್ರಿಟಿಷ್ ರಾಜನ ಅವಧಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು 1965 ರಲ್ಲಿ ರಚಿಸಲಾಯಿತು.

ಕರ್ನಾಟಕವು ಕೆ.ಎಸ್‌.ಆರ್‌.ಟಿ.ಸಿ ಹೆಸರನ್ನು 1973 ರಿಂದ ಬಳಸಲಾರಂಭಿಸಿತು.ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಟ್ರೇಡ್​ ರಿಜಿಸ್ಟ್ರಿ ಕೇರಳದ ಪರ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾರಿಗೆ ಇಲಾಖೆ, ರಾಜ್ಯ ಸಾರಿಗೆ ಇಲಾಖೆಗೆ ಇನ್ಮುಂದೆ ಕೆಎಸ್​ಆರ್​​ಟಿಸಿ ಎಂದು ಬಳಸಬೇಡಿ ಎಂದು ನೋಟಿಸ್ ಜಾರಿಗೊಳಿಸಲು ನಿರ್ಧರಿಸಿದ್ದು, 7 ವರ್ಷಗಳ ಕಾನೂನು ಸಮರದಲ್ಲಿ ಕರ್ನಾಟಕಕ್ಕೆ ಸೋಲು ಕಂಡಿದೆ.

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending