Connect with us

    ಮಂಗಳೂರು-ಕೇರಳ ಗಡಿ ದಿಗ್ಬಂದನ ತೆರವಿಗೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

    Published

    on

    ಮಂಗಳೂರು-ಕೇರಳ ಗಡಿ ದಿಗ್ಬಂದನ ತೆರವಿಗೆ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

    ಮಂಗಳೂರು: ಕರ್ನಾಟಕದ ಆಸ್ಪತ್ರೆಗಳಲ್ಲಿ ಕೇರಳದವರಿಗೆ ತುರ್ತು ಚಿಕಿತ್ಸೆಗೆ ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ವಿಧಿಸಿರುವ ಗಡಿ ದಿಗ್ಬಂದನವನ್ನು ತೆಗೆದು ಹಾಕುವಂತೆ ಕೇರಳ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿ ಮಧ್ಯಂತರ ಆದೇಶ ಪ್ರಕಟಿಸಿದೆ.

    ಕಾಸರಗೋಡಿನಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕ ಸರಕಾರ ಮುಂಜಾಗೃತ ಕ್ರಮವಾಗಿ ಕೇರಳ ಕರ್ನಾಟಕದ ಎಲ್ಲಾ ಗಡಿಗಳನ್ನು ಮುಚ್ಚಿದೆ.

    ಆದರೆ ಕರ್ನಾಟಕದ ಆದೇಶದ ವಿರುದ್ದ ಕೇರಳ ಸರಕಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಗಡಿ ನಿರ್ಬಂಧ ತೆಗೆದು ಹಾಕುವಂತೆ ಮನವಿ ಮಾಡಿದ್ದರು.

    ಆದರೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೆ ಗಡಿ ನಿರ್ಬಂಧ ಸಡಿಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿತ್ತು.

    ಈ ಹಿನ್ನಲೆ ಕೇರಳ ಹೈಕೋರ್ಟ್ ಅಸೋಸಿಯೇಷನ್ ನವರು ಕೇರಳ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಿತು.

    ಮಂಗಳೂರು ಮತ್ತು ಕೇರಳದ ಕಾಸರಗೋಡು ನಡುವೆ ಸಂಪರ್ಕಿಸುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ.

    ಆದ್ದರಿಂದ ಈ ರಸ್ತೆಗಳನ್ನು ದಿಗ್ಬಂಧನದಿಂದ ಮುಕ್ತವಾಗಿರಿಸುವಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಕರ್ನಾಟಕವು ನಿರ್ಮಿಸಿರುವ ಗಡಿ ಪ್ರವೇಶ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಬೇಕೆಂದು ನಾವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುತ್ತೇವೆ.

    ಜೊತೆಗೆ ಯಾವುದೇ ವಿಳಂಬವಿಲ್ಲದೆ ಎರಡು ರಾಜ್ಯಗಳ ನಡುವಿನ ಗಡಿಯುದ್ದಕ್ಕೂ, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ಆ್ಯಂಬುಲೆನ್ಸ್ ವಾಹನಗಳ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ನ್ಯಾಯಮೂರ್ತಿ ಎ.ಕೆ.ಜಯಶಂಕರ್ ನಂಬಿಯಾರ್ ಹಾಗೂ ಶಾಜಿ ಪಿ ಚಲಿ ಅವರಿದ್ದ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

    ಭಾರತದ ಪ್ರಜೆ ದೇಶದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಮುಕ್ತವಾಗಿ ಸಂಚರಿಸಬಹುದು ಎಂದು ಸಂವಿಧಾನದ 19 (1) (ಡಿ) ವಿಧಿಯಲ್ಲಿ ತಿಳಿಸಲಾಗಿದೆ.

    ಹೀಗಾಗಿ ಇಂತಹ ಸಂದರ್ಭಗಳಲ್ಲಿ ಗಡಿ ದಿಗ್ಬಂಧನ ಸರಿಯಲ್ಲ. ಗಡಿ ದಿಗ್ಬಂಧ ತೆರವು ಸ್ಥಗಿತವಾದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಿಗೆ ತೊಂದರೆಯಾಗಬಹುದು ಎಂದು ಹೈಕೋರ್ಟ್ ಸೂಚನೆ ನೀಡಿದೆ.

    ಆದ್ರೆ ಜಿಲ್ಲೆಯ ಜನರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯಾವುದೇ ಕಾರಣಕ್ಕೂ ಗಡಿ ಓಪನ್ ಮಾಡುವ ಸಾಧ್ಯತೆ ಇಲ್ಲ ಎಂದಿದ್ದಾರೆ. ಮುಂದೇನಾಗುತ್ತೋ ಕಾದು ನೋಡಬೇಕಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ನಿಫಾ ಆತಂಕ; 41 ಜನರಿಗೆ ಹೋಂ ಐಸೊಲೇಷನ್

    Published

    on

    ಬೆಂಗಳೂರು: ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಮತ್ತೆ ಹೋಮ್ ಕ್ಯಾರಂಟೈನ್ ಶುರುವಾಗಲಿದೆ.

    ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ ನಿಫಾಗೆ ಬಲಿಯಾಗಿದ್ದು ಯುವಕನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ ತೆರಳಿದ್ದ ಸ್ನೇಹಿತರು ಹಾಗೂ ಪ್ರಾಥಮಿಕ ಸಂಪರ್ಕಿತರಿಗೆ ಹೋಂ ಐಸೊಲೇಷನ್ ಮಾಡಲಾಗಿದೆ. 41 ಪ್ರಾಥಮಿಕ ಸಂಪರ್ಕಿತರು ಪತ್ತೆಯಾಗಿದ್ದು 41 ಜನರಿಗೂ ಕಡ್ಡಾಯ ಹೋಂ ಐಸೊಲೇಷನ್ ಮಾಡಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾವಹಿಸಿದ್ದಾರೆ.

    ಇನ್ನು 41 ಸಂಪರ್ಕಿತರ ಪೈಕಿ ಒಬ್ಬರಿಗೆ ನಿಫಾ ಗುಣಲಕ್ಷಣ ಕಂಡು ಬಂದಿದ್ದು, ಗುಣಲಕ್ಷಣಗಳಿರುವ ವ್ಯಕ್ತಿಯ ರಕ್ತವನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎಲ್ಲಾ ಸಂಪರ್ಕಿತರ ಮೇಲೆ ಆರೋಗ್ಯಾಧಿಕಾರಿಗಳು ನಿಗಾ ಇಟ್ಟಿದ್ದಾರೆ.

    Continue Reading

    LATEST NEWS

    ತಿರುಪತಿ ಲಡ್ಡು ಪ್ರಕರಣ: ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

    Published

    on

    ಬೆಂಗಳೂರು: ತಿರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿತ್ತು. ಇದೀಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

    ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ, 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ದೇವಾಲಯಗಳು ಭಕ್ತರಿಗೆ ಪ್ರಸಾದವನ್ನು ನೀಡುತ್ತವೆ.

    Continue Reading

    bengaluru

    ಜೈಲಿನಲ್ಲೇ ಮೊಬೈಲ್‌ ಬಳಕೆ !

    Published

    on

    ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


    ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
    ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
    ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ

    Continue Reading

    LATEST NEWS

    Trending