Connect with us

    FILM

    ‘ ಕಾಂತಾರ’ ಸಿನಿಮಾ ಪ್ರದರ್ಶನಕ್ಕೆ ಕೇರಳ ಹೈಕೋರ್ಟ್ ತಡೆ..!?

    Published

    on

    ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ.

    ಕೊಚ್ಚಿ : ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ.

    ‘ವರಹಾರೂಪಂ’ ಹಾಡು ಒಳಗೊಂಡಿರುವ ಸಿನಿಮಾ ಪ್ರದರ್ಶನ ಮಾಡಲು ಕೇರಳ ಹೈಕೋರ್ಟ್ ತಡೆಯಾಜ್ಞೆ  ನೀಡಿದೆ.

    ಕಾಪಿರೈಟ್ ಉಲ್ಲಂಘಿಸಿದ ಆರೋಪಕ್ಕೆ ಕಾಂತಾರ ಸಿನಿಮಾ ನಿರ್ದೇಶಕ , ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ಅವರಿಗೆ ನಿರೀಕ್ಷಣ ಜಾಮೀನು ಅನುಮತಿಸಿದ ನ್ಯಾಯಾಲಯ ಫೇಬ್ರವರಿ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 1 ರ ವರೆಗೆ ತನಿಖಾಧಿಕಾರಿ ಮುಂದೆ ಹಾಜರಾಗುಂತೆ ಸೂಚಿಸಿದೆ.

    ಹೈಕೋರ್ಟ್ ಆದೇಶದಲ್ಲಿ ಏನಿದೆ..?

    ಕೇರಳ ಹೈಕೋರ್ಟ್ ನ ನ್ಯಾಯಮೂರ್ತಿ ಎ ಬದರುದ್ದೀನ್ ಅವರು “‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್‌ನಿಂದ ಮಧ್ಯಂತರ ಅಥವಾ ಅಂತಿಮ ಆದೇಶ ಬರೋವರೆಗೆ ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಹಾಡನ್ನು ಬಳಕೆ ಮಾಡುವಂತಿಲ್ಲ.

    ಈ ಪ್ರಕರಣದ ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ’ ಎಂದು ಬದ್ರುದೀನ್ ಹೇಳಿದ್ದಾರೆ.

    ತೈಕುಡಂ ಬ್ರಿಡ್ಜ್‌ನವರು ಕೋಯಿಕ್ಕೋಡ್‌ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

    ‘ವರಾಹ ರೂಪಂ’ ಹಾಡಿನಲ್ಲಿ ಬಳೆ ಆದ ಟ್ಯೂನ್ ‘ನವರಸಂ’ ಹಾಡಿನದ್ದು ಎನ್ನುವ ಆರೋಪ ಮಾಡಲಾಗಿತ್ತು.

    ಈ ಪ್ರಕರಣದ ಸದ್ಯ ಕೋರ್ಟ್‌ನಲ್ಲಿ ವಿಚಾರಣೆ ಆಗುತ್ತಿದೆ. ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳ ಕುರಿತು ತ್ವರಿತ ನಿರ್ಧಾರವನ್ನು ಪಡೆಯಲು ಅವರು ಸೂಕ್ತ ಸಿವಿಲ್ ನ್ಯಾಯಾಲಯಕ್ಕೆ ಹೋಗಬಹುದು ಎಂದು ನ್ಯಾಯಾಲಯದ ಆದೇಶವು ಸ್ಪಷ್ಟಪಡಿಸಿದೆ.

    FILM

    ದಿಲೀಪ್ ಕುಮಾರ್ ಆಗಿದ್ದ ಎ.ಆರ್ ರೆಹಮಾನ್ ಧರ್ಮ ಬದಲಿಸಿದ್ದು ಯಾಕೆ ಗೊತ್ತಾ ??

    Published

    on

    ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಸುಮಾರು 29 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನ ಘೋಷಣೆ ಮಾಡಿದ್ದು ಬಹಳ ಅಚ್ಚರಿ ಮೂಡಿಸಿತ್ತು. ಈ ವಿಚ್ಚೇದನದ ಸುದ್ದಿಯಿಂದಾಗಿ ಎ.ಆರ್‌ ರೆಹಮಾನ್‌ ಅವರ ವೈಯಕ್ತಿನ ಬದುಕಿನ ಹಲವು ವಿಚಾರಗಳು ಮುನ್ನೆಲೆಗೆ ಬರುತ್ತಿವೆ.

    ‘ರೆಹಮಾನ್’ ಎಂಬ ಹೆಸರಿನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದ ದಿಲೀಪ್ ಕುಮರ್ 1980ರಲ್ಲಿ ತಂದೆಯ ಮರಣದ ನಂತರ ಕುಟುಂಬದೊಂದಿಗೆ ಇಸ್ಲಾಂಗೆ ಮತಾಂತರಗೊಂಡ ನಂತರ, ಬಹುಕಾಲದ ಆಸೆಯಾಗಿದ್ದ ರೆಹಮಾನ್’ ಎಂಬ ಹೆಸರನ್ನು ಬಳಸಲು ನಿರ್ಧರಿಸಿದರು.

    ತಂಗಿಯ ಮದುವೆಗೆ ಜ್ಯೋತಿಷ್ಯ ನೋಡುವಾಗ, ಒಬ್ಬ ಹಿಂದೂ ಜ್ಯೋತಿಷಿ ಅಬ್ದುಲ್ ರೆಹಮಾನ್ ಮತ್ತು ಅಬ್ದುಲ್ ರಹೀಮ್ ಎಂಬ ಹೆಸರುಗಳನ್ನು ಸೂಚಿಸಿದ್ದಾಗಿ ರೆಹಮಾನ್ ಆಗಾಗ ನನಪಿಸುಕೊಳ್ಳುತ್ತಿರುತ್ತಾರೆ. ‘ರೆಹಮಾನ್’ ಹೆಸರು ಇಷ್ಟವಾಗಿದ್ದ ಕಾರಣ ಅದನ್ನೇ ಆಯ್ಕೆ ಮಾಡಿಕೊಂಡರು. ತಾಯಿಯ  ಮನದಿಚ್ಚೆಯಂತೆ, ‘ಅಲ್ಲಾ ರಕ್ಕಾ’ ಎಂಬುದನ್ನು ಸೇರಿಸಿ ಎ.ಆರ್. ರೆಹಮಾನ್ ಎಂದು ಹೆಸರು ಬದಲಾಯಿಸಿಕೊಂಡಿದ್ದರು.

    ‘ದೇವರಿಂದ ರಕ್ಷಿಸಲ್ಪಟ್ಟವರು’ ಎಂಬ ಅರ್ಥವನ್ನು ಹೊಂದಿರುವ ಎ.ಆರ್. ರೆಹಮಾನ್ ಎಂಬ ಹೆಸರು ಇಂದು ಸಂಗೀತ ಲೋಕದಲ್ಲಿ ಅನುಪಮ ಸ್ಥಾನ ಪಡೆದಿದೆ. ಈ ಹೆಸರು ಬದಲಾವಣೆ ರೆಹಮಾನ್ ಅವರ ಆಧ್ಯಾತ್ಮಿಕ ಪಯಣವನ್ನು ಸೂಚಿಸುವುದು ಮಾತ್ರವಲ್ಲದೆ, ಜಾಗತಿಕ ಖ್ಯಾತಿಗೆ ಅವರ ಏಳಿಗೆಯ ಆರಂಭವನ್ನೂ ಸೂಚಿಸುತ್ತದೆ, ರೆಹಮಾನ್ ಎಂಬ ಹೆಸರು ವಿಶ್ವದ ಅತ್ಯಂತ ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರನ್ನಾಗಿ ಮಾಡಿದೆ.

    29 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ ರೆಹಮಾನ್ ಸಾಯಿರಾ ದಂಪತಿ ವಕೀಲರಾದ ವಂದನಾ ಶಾ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯ ಮೂಲಕ ಪ್ರತ್ಯೇಕಗೊಂಡಿರುವ ವಿಚಾರ ತಿಳಿಸಿದರು. ತಮ್ಮ ತಂದೆಯನ್ನು ಕೊನೆಯ ದಿನಗಳಲ್ಲಿ ಆರೈಕೆ ಮಾಡಿದ್ದ  ಸೂಫಿ ಸಂತರೊಬ್ಬರ ಪ್ರಭಾವಕ್ಕೆ ಒಳಗಾಗಿ ಮುಸ್ಲಿಂ ಧರ್ಮಕ್ಕೆ ರೆಹಮಾನ್ ಮತಾಂತರಗೊಂಡರು ಎನ್ನಲಾಗಿದೆ. ‘ಈ ನಂಬಿಕೆಯ ಬದಲಾವಣೆ ಮನಸ್ಸಿಗೆ ಶಾಂತಿ ನೀಡಿದ್ದು, ತಾವು ತಮ್ಮ ನಂಬಿಕೆಯನ್ನು ಬೇರೆಯವರ ಮೇಲೆ ಹೇರಲು ಇಷ್ಟಪಡುವುದಿಲ್ಲ’ ಎಂದು ಸ್ವತಃ ರೆಹಮಾನ್‌ ಹೇಳಿಕೊಂಡಿದ್ದಾರೆ.

    Continue Reading

    FILM

    ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?

    Published

    on

    ಮಂಗಳೂರು/ಬೆಂಗಳೂರು : ಏಕ್ ಲವ್ ಯಾ ಸಿನಿಮಾದಲ್ಲಿ ನಾಯಕನಾಗಿ ಮಿಂಚಿ ಸಕತ್ ಫೇಮಸ್ ಆಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣಾ ಹಸೆಮಣೆ ಏರಲು ಸಜ್ಜಾಗಿದ್ದಾರೆ.  ಸರಳವಾಗಿ ಅವರ ನಿಶ್ಚಿತಾರ್ಥ ಕಾರ್ಯ ನೆರವೇರಿದೆ.

    ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು,  ರಾಣಾ ಎಂಗೇಜ್ಮೆಂಟ್  ಆಗಿರುವ ಹುಡುಗಿ ಯಾರು? ಎಲ್ಲಿಯವರು? ಎಂಬ ಮಾಹಿತಿ ಬಹಿರಂಗವಾಗಿಲ್ಲ.  ನಿಶ್ಚಿತಾರ್ಥದ ಫೋಟೋ ನೋಡಿದ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ  ಹರಿಸುತ್ತಿದ್ದಾರೆ.

    ಪ್ರೇಮ್ ಮಿಸ್ ಯಾಕೆ?

    ರಾಣಾ ಎಂಗೇಜ್ಮೆಂಟ್ ಸಮಾರಂಭದಲ್ಲಿ ನಟಿ ರಕ್ಷಿತಾ ಪ್ರೇಮ್  ಕುಟುಂಬ ಇದೆ. ಆದ್ರೆ ನಿರ್ದೇಶಕ ಪ್ರೇಮ್ ಇಲ್ಲ. ಅವರು ಏನು ಭಾಗಿಯಾಗಿಲ್ಲ ಎಂಬ ಅನುಮಾನ ಹುಟ್ಟಿರೋದು ಸಹಜ.  ಪ್ರೇಮ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋದರಿಂದ ನಿಶ್ಚಿತಾರ್ಥದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಕೆಡಿ ಸಿನಿಮಾದ ಶೂಟಿಂಗ್ ಗಾಗಿ ಅವರು ಚಿಕ್ಕಮಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.

    ಏಕ್ ಲವ್ ಯಾ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ರಾಣಾ, ಪ್ರೇಮ್ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ್ ಈಶ್ವರ್ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಾನ್ವಿ ಪ್ರೊಡಕ್ಷನ್ ನಿರ್ಮಾಣದ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

    Continue Reading

    FILM

    ಕ್ರಿಕೆಟರ್ ಆಗಬೇಕಿದ್ದ ಆದಿತ್ಯ ಹೀರೋ ಆಗಿದ್ದರ ಹಿಂದಿನ ಕಥೆ ಗೊತ್ತಾ ?

    Published

    on

    ಅನೇಕ ಕಲಾವಿದರು ಹೀರೋ/ಹೀರೋಯಿನ್ ಆಗಬೇಕು ಎಂದು ಕನಸು ಕಾಣುತ್ತಿರುತ್ತಾರೆ. ಆದರೆ, ಕೆಲವರು ಬೇರೆಯದೇ ಆಲೋಚನೆ ಇಟ್ಟುಕೊಂಡು ನಂತರ ಚಿತ್ರರಂಗಕ್ಕೆ ಬಂದು ಗೆಲುವು ಕಾಣುತ್ತಾರೆ. ಈ ಸಾಲಿಗೆ ಆದಿತ್ಯ ರಾಯ್ ಕಪೂರ್ ಸಹ ಸೇರುತ್ತಾರೆ. ಕ್ರಿಕೆಟರ್ ಆಗಬೇಕು ಎಂದು ಕನಸು ಕಂಡಿದ್ದ ಆದಿತ್ಯ ನಂತರ  ಬಾಲಿವುಡ್​ನ ಸ್ಟಾರ್ ಆಗಿರೋ ಕಥೆಯೇ ರೋಚಕ.

    ಆದಿತ್ಯ ರಾಯ್ ಕಪೂರ್ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದು 2009ರ ‘ಲಂಡನ್ ಡ್ರೀಮ್ಸ್’ ಸಿನಿಮಾ ಮೂಲಕ. ಆ ಬಳಿಕ  ‘ಆಶಿಕಿ 2’, ‘ಯೇ ಜವಾನಿ ಹೇ ದಿವಾನಿ’ ‘ಕಳಂಕ್’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದರು. ಅವರು ನಟಿಸಿದ ‘ದಿ ನೈಟ್ ಮ್ಯಾನೇಜರ್’ ಸೀರಿಸ್ ಭರ್ಜರಿ ಮೆಚ್ಚುಗೆ ಪಡೆಯಿತು. ಈ ಸರಣಿಯಲ್ಲಿ ಅವರ ನಟನೆ ಸಾಕಷ್ಟು ಗಮನ ಸೆಳೆಯಿತು. ಈ ಸರಣಿಂದ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದಕ್ಕೆ ಸೀಕ್ವೆಲ್ ಕೂಡ ಬರಬೇಕಿದೆ. ಇಷ್ಟೆಲ್ಲ ಹೆಸರು ಮಾಡಿದ ಆದಿತ್ಯ ಅವರ ಮೂಲ ಕನಸು ಮಾತ್ರ ಬೇರೆಯದೇ ಇತ್ತು.

    ‘ನಾನು ಕ್ರಿಕೆಟರ್ ಆಗಬೇಕು ಎಂದುಕೊಂಡಿದ್ದೆ. ಆದರೆ, ಅದು ಹೊಂದಾಣಿಕೆ ಆಗಿಲ್ಲ. ನಂತರ ನಟನೆಗೆ ಬಂದೆ. ನಾನು ವಿಡಿಯೋ ಜಾಕಿ ಕೂಡ ಆಗಿದ್ದೆ’ ಎಂದಿದ್ದರು ಆದಿತ್ಯ ರಾಯ್ ಕಪೂರ್. ಹಾಗಂತ ಆದಿತ್ಯ ರಾಯ್ ಕಪೂರ್ ಅವರಿಗೆ ಯಾವುದೇ ಹಿನ್ನೆಲೆ ಇಲ್ಲ ಎಂದುಕೊಳ್ಳಬೇಡಿ. ಅವರು ದೊಡ್ಡ ಕುಟುಂಬದ ಹಿನ್ನೆಲೆಯಿಂದಲೇ ಬಂದವರು.

     

    Continue Reading

    LATEST NEWS

    Trending