Thursday, September 29, 2022

ಕೇರಳ ಅಂತರರಾಜ್ಯ ಗಡಿ ರಸ್ತೆಗಳ ಸಂಚಾರ ನಿಷೇಧ ತೆರವಿಗೆ ಹೈಕೋರ್ಟ್ ಸೂಚನೆ

ಮಂಗಳೂರು : ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ.


ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವನಿ ನಾಲ್ಕು ಅಂತರರಾಜ್ಯ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಕೇರಳ ಹೈಕೋರ್ಟ್ ಕೆಲವು ದಿನಗಳ ಹಿಂದೆ ಆದೇಶಿಸಿತ್ತು. ಇದೀಗ ಗಡಿ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದೆ. ಕಾಸರಗೋಡು – ಕರ್ನಾಟಕ ಅಂತರರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡುವಂತೆ ಕೋರಿ ಬಿಜೆಪಿಯ ಹೈಕೋರ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.


ಕೊರೊನಾ ಲಾಕ್ ಡೌನ್ ಸಂದರ್ಭ ಮುಚ್ಚಲ್ಪಟ್ಟಿದ್ದ ಕಾಸರಗೋಡು – ದಕ್ಷಿಣಕನ್ನಡ ಜಿಲ್ಲಾ ಅಂತರಾರಾಜ್ಯ ಗಡಿ, ಅನ್ಲಾಕ್ ಗಳ ನಂತರವೂ ಮುಕ್ತ ಸಂಚಾರಕ್ಕೆ ಅವಕಾಶ ನೀಡದೇ ನಿರ್ಬಂಧಗಳನ್ನು ಹೇರಿದ್ದವು. ಒಂದು ಹಂತದಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ಮುಕ್ತ ಅವಕಾಶ ನೀಡಿದರೂ ಕಾಸರಗೋಡು ಜಿಲ್ಲಾಡಳಿತ ಮತ್ತೆ ನಿರ್ಬಂಧಗಳನ್ನು ಹೇರಿತ್ತು. ಈ ಹಿನ್ನಲೆ ಕಾಸರಗೋಡು ಬಿಜೆಪಿ ಗಡಿ ಪ್ರದೇಶಗಳಲ್ಲಿ ಕಾಸರಗೋಡು ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ನಡೆಸಿತ್ತು. ಅಲ್ಲದೆ ಕೇರಳ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.

LEAVE A REPLY

Please enter your comment!
Please enter your name here

Hot Topics

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...