Thursday, September 29, 2022

ಸಾರಡ್ಕ ಸೇರಿ ನಾಲ್ಕು ಗಡಿಗಳನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು : ಕೇಂದ್ರ ಸರಕಾರದ ಆದೇಶ ಇದ್ದರೂ ಗಡಿ ತೆರೆಯದೆ ಉದ್ದಟತನ ತೋರಿದ್ದ ಕಾಸರಗೋಡು ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇರಳ-ಕರ್ನಾಟಕ ಅಂತಾರಾಜ್ಯ ಪ್ರಮುಖ ನಾಲ್ಕು ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.


ಕೊರೊನಾ ಹಿನ್ನಲೆ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನಲಾಕ್ ಮಾರ್ಗಸೂಚಿ 3.0 ಪ್ರಕಾರ ಜನ ಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಆದೇಶಿಸಿದರು. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು. ಈ ಹಿನ್ನಲೆ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಕೇರಳ ಹೈಕೋರ್ಟ್ ಗೆ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.


ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇರಳ ಸರಕಾರಕ್ಕೆ ಮಧ್ಯಂತರ ಆದೇಶ ನೀಡಿದೆ. ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳುವ ಜಾಲ್ಸೂರು, ಪಾಣತ್ತೂರು, ಮಾಣಿಮೂಲೆ ಮತ್ತು ಸಾರಡ್ಕ ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...