Home ಪುತ್ತೂರು ಕಡಬದಲ್ಲಿ ಪೊಲೀಸರ ಬಲೆಗೆ ಬಿದ್ದ ಕೇರಳದ ಕೊಲೆಯತ್ನ ಆರೋಪಿ

ಕಡಬದಲ್ಲಿ ಪೊಲೀಸರ ಬಲೆಗೆ ಬಿದ್ದ ಕೇರಳದ ಕೊಲೆಯತ್ನ ಆರೋಪಿ

ಕಡಬದಲ್ಲಿ ಪೊಲೀಸರ ಬಲೆಗೆ ಬಿದ್ದ ಕೇರಳದ ಕೊಲೆಯತ್ನ ಆರೋಪಿ

ಕಡಬ: ಕೇರಳದಲ್ಲಿ ಕೊಲೆ ಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕಡಬ ಪೊಲೀಸರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರ(ಮಾರ್ಚ್ 20)ದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ಈತ ತಲೆಮರೆಸಿಕೊಂಡಿದ್ದ.

ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ.

ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೇರಳದ ಕೊಲ್ಲಂ ಠಾಣಾ ಎಸ್ಐ ಶಾನ್ವಾಝ್ ಹಾಗೂ ಸಿಬ್ಬಂದಿಗಳು, ಕಡಬ ಪೋಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್ ಹರೀಶ್ ಹಾಗೂ ಕಾನ್ಸ್‌ಟೇಬಲ್ ಭವಿತ್ ರವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿದ್ದಾರೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...