ತಿರುವನಂತಪುರಂ: ಕೇರಳದಲ್ಲಿ ಒಂದು ದಿನದ ಅಂತರದಲ್ಲೇ ಎರಡು ರಾಜಕೀಯ ಪಕ್ಷದ ನಾಯಕರ ಬರ್ಬರ ಹತ್ಯೆಯಾಗಿದ್ದು, ಬಿಜೆಪಿ ಮತ್ತು ಎಸ್‌ಡಿಪಿಐ ಪಕ್ಷಕ್ಕೆ ಸೇರಿದ ನಾಯಕರನ್ನು ಹತ್ಯೆ ಮಾಡಲಾಗಿದೆ. ಆಲುಪ್ಪುಳ ನಗದಲ್ಲಿ ಸದ್ಯ 144 ಸೆಕ್ಷನ್ ಜಾರಿ ಮಾಡಲಾಗಿದೆ.
ನಿನ್ನೆ ಸಂಜೆ ಎಸ್ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ.ಎಸ್. ಶಾನ್ ಮನೆಗೆ ಹೋಗುವಾಗ ಕೊಲೆಯಾಗಿದ್ದಾರೆ.
ಶಾನ್ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಾನ್ ಚಿಕಿತ್ಸೆ ಫಲಕಾರಿಯಾಗದೇ ಕೊಚ್ಚಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಾದ 12 ಗಂಟೆ ಬಳಿಕ ಕೆಲ ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕ ರೆಂಜಿತ್ ಶ್ರೀನಿವಾಸನ್ ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ.
ರೆಂಜಿತ್ ಅವರು ಪಕ್ಷದ ಒಬಿಸಿ ಘಟಕದ ಮುಖ್ಯಸ್ಥರಾಗಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡು ಘಟನೆಗಳ ಮೇಲೆ ತನಿಖೆ ಕೈಗೊಂಡಿದ್ದಾರೆ.
ಈ ಕೃತ್ಯಗಳನ್ನು ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಈ ಘಟನೆಯಲ್ಲಿ 11 ಎಸ್‌ಡಿಪಿಐ ಕಾರ್ಯಕರ್ತರು ಹಾಗೂ 6 ಆರ್‌ಎಸ್‌ಎಸ್ ಕಾರ್ಯಕರ್ತರ ಬಂಧಿಸಿದ್ದು, ತನಿಖೆ ನಡೆಯುತ್ತಿದೆ.