Connect with us

LATEST NEWS

ಕೇರಳದಲ್ಲಿ ಮಾದಕ ವಸ್ತು ತಡೆಗೆ ರೆಡಿಯಾಯ್ತು ಸ್ಟೂಡೆಂಟ್‌ CID..!

Published

on

ಕಾಸರಗೋಡು: ಚಾಕ್ಲೇಟುಗಳು, ಸುಗಂಧ ದ್ರವ್ಯಗಳು, ಮಿಠಾಯಿ ಮೊದಲಾದ ಮಕ್ಕಳ ತಿನಿಸುಗಳಲ್ಲಿ ಮಾದಕ ವಸ್ತುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ನೀಡಿ ಅವರನ್ನು ಮಾದಕ ವ್ಯಸನಿಗಳನ್ನಾಗಿ ಮಾಡುವ ಸಕ್ರಿಯ ಜಾಲವೊಂದನ್ನು ಪತ್ತೆ ಹಚ್ಚಲು ಕೇರಳ ಪೊಲೀಸರ ಅಧೀನದಲ್ಲಿ 2010ರಲ್ಲಿ ರೂಪುಗೊಂಡ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ನ ರಹಸ್ಯ ತನಿಖಾ ವಿಭಾಗ ಮುಂದಾಗಿದೆ.


ಇದೀಗ ಇಂತಹ ಜಾಲದ ಬೆನ್ನು ಬಿದ್ದಿರುವ ಕೇರಳ ಪೊಲೀಸರು ಪೋಷಕರಿಗೆ ಎಚ್ಚರಿಕೆ ನೀಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನೆ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಶಾಲೆಗಳನ್ನು ಕೇಂದ್ರೀಕರಿಸಿ ಮಾದಕ ವಸ್ತು ಮಾಫಿಯಾ ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪೊಲೀಸರಿಂದ ಆಯ್ದ ವಿದ್ಯಾರ್ಥಿಗಳಿಗೆ ಸಿಐಡಿಗಳಾಗಿ ಪ್ರತ್ಯೇಕ ತರಬೇತಿ ನೀಡಲು ಯೋಜನೆ ರೂಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಯಾರಾದರೂ ಮಾದಕ ವಸ್ತು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ಆ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸುವುದು ಈ ರಹಸ್ಯ ತನಿಖಾ ತಂಡದ ಕರ್ತವ್ಯ.

ಇವರು ನೀಡುವ ಮಾಹಿತಿಗಳನ್ನು ಶಾಲಾ ಮಟ್ಟದ ಸಿಪಿಒಗಳಿಗೆ, ಅವರು ಜಿಲ್ಲಾ ನೋಡಲ್‌ ಅಧಿಕಾರಿಗಳಿಗೆ ತಿಳಿಸುತ್ತಾರೆ. ಬಳಿಕ ಅದರ ಆಧಾರದಲ್ಲಿ ನೋಡಲ್‌ ಅಧಿಕಾರಿ ಹಾಗೂ ನಾರ್ಕೋಟಿಕ್‌ ಸೆಲ್‌ ಸಂಯುಕ್ತವಾಗಿ ಪ್ರತ್ಯೇಕ ನಿರೀಕ್ಷಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತದೆ.

ಪ್ರಸ್ತುತ 702 ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಘಟಕಗಳಲ್ಲಿ ಈ ರೀತಿ ತಲಾ ಐವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಪೊಲೀಸ್‌ ಇಲಾಖೆಯ 19 ಜಿಲ್ಲಾಮಟ್ಟಗಳಲ್ಲಿ ಇದಕ್ಕಾಗಿ ಶಿಬಿರಗಳನ್ನು ವ್ಯವಸ್ಥೆ ಮಾಡಲಾಗಿದೆ. ಓಣಂ, ಕ್ರಿಸ್ಮಸ್‌, ಬೇಸಿಗೆ ರಜೆಗಳಲ್ಲಿ ಪ್ರತ್ಯೇಕ ಶಿಬಿರಗಳನ್ನು ಕೂಡಾ ನಡೆಸಲಾಗುತ್ತದೆ. ಕ್ರಿಸ್ಮಸ್‌ ರಜೆಯಲ್ಲಿ ಮೊದಲ ಶಿಬಿರ ನಡೆಯಲಿದೆ.

ಎಸ್‌ಪಿಸಿ ಮಿಕ್ಸೆಡ್‌ ಶಾಲೆಗಳಲ್ಲಿ ಮೂವರು ಗಂಡು ಮಕ್ಕಳನ್ನು, ಇಬ್ಬರು ಹೆಣ್ಮಕ್ಕಳನ್ನು ರಹಸ್ಯ ತನಿಖಾ ತಂಡಕ್ಕೆ ಆಯ್ಕೆ ಮಾಡಲಾಗುವುದು.

ಮಾದಕ ವಸ್ತು ಬಳಸುವವರಿಂದ ಸಂಭವಿಸುವ ಸ್ವಭಾವ, ವಿಕೃತಿಗಳನ್ನು ಗುರುತಿಸುವ ಸಾಮರ್ಥ್ಯ, ನಿರೀಕ್ಷಣಾ ರೀತಿ, ನಾಯಕತ್ವ, ಕೌನ್ಸೆಲಿಂಗ್‌ಗಳಲ್ಲಿ ವಿದ್ಯಾರ್ಥಿ ಪೊಲೀಸ್‌ ಕೆಡೆಟ್‌ನ ರಹಸ್ಯ ತನಿಖಾ ತಂಡವನ್ನು ಸಜ್ಜುಗೊಳಿಸಲಾಗುವುದು.

ವಿದ್ಯಾರ್ಥಿ ಪೊಲೀಸ್‌ ಕೆಡೆಟ್‌ಗಳಿಗೆ ವಾರದಲ್ಲಿ ಬುಧವಾರ, ಶನಿವಾರದಂದು ಶಾಲಾ ಮಟ್ಟದಲ್ಲಿ ತರಬೇತಿ ವ್ಯವಸ್ಥೆಗೊಳಿಸಲಾಗುತ್ತದೆ.

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

Published

on

ಬೆಂಗಳೂರು : ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಅತ್ತ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಇತ್ತ ಈ ವೀಡಿಯೋ ಹರಿಬಿಟ್ಟಿರುವುದು ತಾನು ಎಂದು ಒಪ್ಪಿಕೊಂಡಿದ್ದ ಕಾರ್ತಿಕ್ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆತ ಎಸ್ ಐ ಟಿ ಕಣ್ಣು ತಪ್ಪಿಸಿ ಮಲೇಷ್ಯಾ ತೆರಳಿದ್ದಾರೆ ಎನ್ನಲಾಗಿದೆ.


ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿಯಾಗಿರುವ ಕಾರ್ತಿಕ್, ಪ್ರಜ್ವಲ್ ರೇವಣ್ಣ ಬಳಿ 15 ವರ್ಷ ಕಾರು ಚಾಲಕನಾಗಿ ಕೆಲಸ ಮಾಡಿದ್ದರು.​ ಬಳಿಕ ಪರಸ್ಪರ ಮನಸ್ತಾಪದಿಂದ ಕಾರ್ತಿಕ್ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.

ಏನು ಹೇಳಿದ್ದ ಕಾರ್ತಿಕ್?

ಎರಡು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಕಾರ್ತಿಕ್ ಹರಿಬಿಟ್ಟಿದ್ದ. ಈ ವೀಡಿಯೋದಲ್ಲಿ, ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು ಹಲ್ಲೆ ಮಾಡಿದರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದಿದ್ದರು.
ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ ಎಂದಿದ್ದರು.

ಇದನ್ನೂ ಓದಿ  : ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೇ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ ಎಂದು ಹೇಳಿದ್ದರು.

ಎಸ್ ಐ ಟಿ ನೋಟೀಸ್ ನೀಡಿಲ್ಲ :

ವೀಡಿಯೋ ಮಾಡಿ ಹರಿಬಿಟ್ಟಿರುವ ಕಾರ್ತಿಕ್, ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದರು. ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ್ದರು. ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದು ಕಾರ್ತಿಕ್ ಹೇಳಿದ್ದ. ವೀಡಿಯೋಗಳ ಮೂಲಕ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ. ಈ ನಡುವೆ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

Continue Reading

LATEST NEWS

ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

Published

on

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್‌ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಇಲ್ಲ. ಯಾವುದೇ ಶಾಸ್ಕೋಕ್ತವಾದ ಆಚರಣೆ ಇಲ್ಲದೇ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.  ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಅಗಾಸ್ಟಿನ್ ಜಾರ್ಜ್‌ ಅವರನ್ನೊಳಗೊಂಡ ಪೀಠ ಈ ರೀತಿಯಾಗಿ ಹೇಳಿದೆ.

ಮದುವೆಗೆ ಮಾನ್ಯತೆ ನೀಡಲು ಶಾಸ್ತ್ರೋಕ್ತ ಕಾರ್ಯಕ್ರಮಗಳು ನಡೆದಿರಬೇಕು. ಸಮಸ್ಯೆ ಅಥವಾ ವಿವಾದ ಉಂಟಾದಾಗ ಪರಿಹರಿಸಲು ಸಮಾರಂಭದ ಪುರಾವೆಗಳು ನೆರವಿಗೆ ಬರಲಿವೆ. ಅಂತಹ ಆಚರಣೆ ಇಲ್ಲದೆ ನಡೆದ ಮದುವೆಗೆ ಕಾಯಿದೆಯ ಸೆಕ್ಷನ್ 7ರ ಪ್ರಕಾರ ಮಾನ್ಯತೆ ಸಿಗುವುದಿಲ್ಲ. ಕೇವಲ ಇಲಾಖೆಯ ಪ್ರಮಾಣ ಪತ್ರದಿಂದ ವೈವಾಹಿಕ ಸ್ಥಿತಿ ದೃಢೀಕರಿಸಲಾಗದು. ಹಿಂದೂ ವಿವಾಹದ ವಿಧಿ ವಿಧಾನಗಳಂತೆ ಮದುವೆ ನಡೆಯದಿದ್ದರೆ ಅದನ್ನು ಹಿಂದೂ ವಿವಾಹವೆಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ವಿವರಿಸಿದೆ.

ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಮದುವೆ ಎನ್ನುವುದು ಬಹಳ ಪವಿತ್ರ. ಇದು ಇಬ್ಬರು ವ್ಯಕ್ತಿಗಳ ನಡುವಿನ ಜೀವನ ಪರ್ಯಂತ, ಘನತೆಯ ಸಮಾನ ಸಹಮತದ ಮತ್ತು ಆರೋಗ್ಯಕರ ಸಮ್ಮಿಲನ ಎಂದು ಕೋರ್ಟ್‌ ಹೇಳಿದೆ.

ನೋಂದಣಿ ಅಂತಿಮವಲ್ಲ

ಯಾವುದೇ ಶಾಸ್ತ್ರೋಕ್ತ ಆಚರಣೆ ಇಲ್ಲದೇ ಕೇವಲ ಸಂಸ್ಥೆಯೊಂದು ನೋಂದಣಿಯ ದಾಖಲೆ ಪತ್ರ ವಿತರಿಸಿದರೆ ಅದು  ಹಿಂದೂ ವಿವಾಹ ಕಾಯ್ದೆ ಅನ್ವಯ ವಿವಾಹವನ್ನು ಮಾನ್ಯಗೊಳಿಸುವುದಿಲ್ಲ. ಹಿಂದೂ ವಿವಾಹ ವಿಧಿ ವಿಧಾನದಂತೆ ಮದುವೆ ನಡೆಯದೆ ಇರುವಾಗ ಸೆಕ್ಷನ್ 8ರ ಅಡಿಯಲ್ಲಿ ನೋಂದಣಿ ಅಧಿಕಾರಿ ವಿವಾಹವನ್ನು ನೋಂದಾಯಿಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 7ರ ಪ್ರಕಾರ ವೈವಾಹಿಕ ಸಮಾರಂಭದಲ್ಲಿ ಭಾಗಿಯಾಗಿದ್ದಲ್ಲಿ ಮಾತ್ರವೇ ದೃಢೀಕರಿಸಬೇಕು ಎಂದು ಪೀಠ ಸ್ಪಷ್ಟಪಡಿಸಿದೆ. ಹಿಂದೂ ವಿವಾಹ ಕಾಯಿದೆಯ ಅಡಿಯಲ್ಲಿ ಅಗತ್ಯವಾದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸದ ವಿವಾಹಗಳನ್ನು ನೋಂದಣಿ ಮಾಡುತ್ತಿರುವ ಪ್ರವೃತ್ತಿ ಬಗ್ಗೆ ಇಬ್ಬರೂ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಏನಿದು ಪ್ರಕರಣ?

ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ಮದುವೆ ನೋಂದಣಿ ಮಾಡಿಸಿದ್ದರೂ ಹಿಂದೂ ವಿವಾಹ ಕಾಯ್ದೆಯ ಅನುಸಾರ ಸಪ್ತಪದಿ ನೆರವೇರಿರಲಿಲ್ಲ ಎಂಬುದು ನ್ಯಾಯಾಲಯಕ್ಕೆ ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ನೋಂದಣಿಯನ್ನು ಅಮಾನ್ಯ ಮಾಡಿ ಮದುವೆಯನ್ನು ರದ್ದುಗೊಳಿಸಿ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣವನ್ನೂ ಕೂಡಾ ನ್ಯಾಯಾಲಯ ರದ್ದುಗೊಳಿಸಿದೆ.

ಭಾರತೀಯ ಸಮಾಜದಲ್ಲಿ  ಮದುವೆಗೆ ಹೆಚ್ಚಿನ ಮೌಲ್ಯ ಇದೆ. ದಂಪತಿಯ ಪೋಷಕರು ಕಾಗದದ ನೋಂದಣಿಗಳನ್ನು ಪ್ರೋತ್ಸಾಹಿಸಬಾರದು. ವಿವಾಹದ ಬಗ್ಗೆ ಯುವಜನತೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಿಂದೂ ವಿವಾಹದ ಶಾಸ್ತ್ರೋಕ್ತ ಆಚರಣೆಗಳನ್ನು ಕ್ಷುಲ್ಲಕವೆಂದು ಪರಿಗಣಿಸುವ ಬದಲು “ಶ್ರದ್ಧೆಯಿಂದ ಕಟ್ಟುನಿಟ್ಟಾಗಿ ಮತ್ತು ಧಾರ್ಮಿಕವಾಗಿ ಪಾಲಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

Continue Reading

DAKSHINA KANNADA

ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Published

on

ಮಂಗಳೂರು : ಬಿಗ್‌ಬಾಸ್ ಮುಖೇನ ರಾಜ್ಯದಲ್ಲಿ ಹೆಸರು ಪಡೆದಿರುವ ಕರಾವಳಿಯಲ್ಲಿ ಸ್ಟಾರ್ ರೂಪೇಶ್ ಶೆಟ್ಟಿ. ತುಳುನಾಡಿನ ಹುಲಿವೇಷ ಕುಣಿತವನ್ನು ಬಿಗ್‌ಬಾಸ್ ನಲ್ಲಿ ಪರಿಚಯಿಸಿದ್ದು ಅಲ್ಲದೆ ವೇಷದಾರಿಗಳ ಜೊತೆ ಹೆಜ್ಜೆ ಕೂಡಾ ಹಾಕಿದ್ದಾರೆ.  ಅಲ್ಲದೇ ರೂಪೇಶ್ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ವಿನ್ನರ್ ಕೂಡ ಹೌದು. ತುಳು ಸಿನಿಮಾದಲ್ಲಿ ಮಿಂಚಿದ್ದ ರೂಪೇಶ್ ಶೆಟ್ಟಿಗೆ ಬಿಗ್ ಬಾಸ್ ಬಳಿಕ ಕನ್ನಡ ಚಿತ್ರರಂಗದಲ್ಲೂ ಅವಕಾಶ ಸಿಕ್ಕಿತ್ತು. ಇದೀಗ ತಮಿಳು ಚಿತ್ರರಂಗಕ್ಕೂ ರೂಪೇಶ್ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಅಮೃತ ಸಾರಥಿ ಎಂಬುವವರು ನಿರ್ದೇಶನ ಮಾಡುತ್ತಿರುವ ತಮಿಳು ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ. ಯೋಗಿ ಬಾಬು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಪ್ರಮೋದ್ ಶೆಟ್ಟಿ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ‘ಸನ್ನಿಧಾನಂ PO’ ಎಂದು ಚಿತ್ರಕ್ಕೆ ಟೈಟಲ್ ಇಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೂಪೇಶ್ ಶೆಟ್ಟಿ, “ನನ್ನ ಮೊದಲ ತಮಿಳು ಚಿತ್ರ ಸನ್ನಿಧಾನಮ್ PO ಇದರ ಶೂಟಿಂಗ್ ನಿಮ್ಮೆಲ್ಲರ ಆಶೀರ್ವಾದದಿಂದ ಭರದಿಂದ ಸಾಗುತ್ತಿದೆ. ಯೋಗಿ ಬಾಬು ಅವರ ಜತೆ ನಟಿಸುವುದೇ ನನ್ನ ಪಾಲಿನ ಅದೃಷ್ಟ. ನನ್ನ ಸಿನಿ ಪಯಣ ಈ ರೀತಿಯಾಗಿ ಸಾಗಲು ನೀವೇ ಮೊದಲ ಕಾರಣ. ನಿಮ್ಮ ಪ್ರೀತಿ ಪ್ರೋತ್ಸಾಹ ಎಂದೂ ಹೀಗೆ ಇರಲಿ. ದೇವರಿಗೆ ಧನ್ಯವಾದಗಳು” ಎಂದು ಅವರು ಬರೆದುಕೊಂಡಿದ್ದಾರೆ.

2023ರ ನವೆಂಬರ್ ತಿಂಗಳಲ್ಲಿ ಸಿನಿಮಾ ಘೋಷಿಸಲಾಗಿದೆ. ಈ ಚಿತ್ರದ ಮೂರನೇ ಹಂತದ ಶೂಟಿಂಗ್ ಈಗ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ದಿನಾಂಕವನ್ನು ರೂಪೇಶ್ ಶೆಟ್ಟಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರೂಪೇಶ್ ಶೆಟ್ಟಿ ಅವರು ತುಳು ಸಿನಿಮಾಗಳಿಂದ ಬಣ್ಣದ ಬದುಕು ಆರಂಭಿಸಿದರು. 2015ರಲ್ಲಿ ರಿಲೀಸ್ ಆದ ‘ಐಸ್​ ಕ್ರೀಮ್’ ಹೆಸರಿನ ತುಳು ಚಿತ್ರದ ಮೂಲಕ ಅವರು ಹೀರೋ ಆದರು. 2023ರಲ್ಲಿ ಅವರ ನಟನೆಯ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್ ಆಯಿತು. ಅವರು ಸಿನಿಮಾ ನಿರ್ಮಾಣ ಕೂಡ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ ವಿನ್ನರ್ ಆಗಿದ್ದಾರೆ.

Continue Reading

LATEST NEWS

Trending