Friday, July 1, 2022

ಕೇರಳದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವಿಟ್ಲದ ಗುಜರಿ ವ್ಯಾಪಾರಿ ಪರಾರಿ

ಬಂಟ್ವಾಳ: ಕೇರಳದಲ್ಲಿ ಕಳವು ನಡೆದ ಘಟನೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ವಿಟ್ಲ ಗುಜುರಿ ಅಂಗಡಿಗೆ ದಾಳಿ ನಡೆಸಿದ ಘಟನೆ ತಾಲೂಕಿನ ವಿಟ್ಲದಲ್ಲಿ ಇಂದು ನಡೆದಿದೆ. ಈ ವೇಳೆ ಈಗ ಬರುತ್ತೇನೆಂದು ಹೇಳಿ ಗುಜರಿ ಅಂಗಡಿಯಲ್ಲಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ.


ಕಾಸರಗೋಡು ಜಿಲ್ಲೆಯ ಬದಿಯಡ್ಕ ಠಾಣಾ ವ್ಯಾಪ್ತಿಯ ಪೆರ್ಲದಲ್ಲಿ ಕಳವು ನಡೆದಿತ್ತು. ಆ ಪ್ರಕರಣದಲ್ಲಿ ಆರೋಪಿಯೋರ್ವನನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಕಳವುಗೈದ ವಸ್ತುವನ್ನು ವಿಟ್ಲದ ಗುಜರಿ ಅಂಗಡಿಗೆ ಮಾರಾಟ ಮಾಡಿದ್ದೇನೆಂದು ಆತ ಬಾಯ್ಬಿಟ್ಟಿದ್ದ.

ಆತ ನೀಡಿದ ಮಾಹಿತಿಯಂತೆ ಮಾರಾಟ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಇಂದು ಬದಿಯಡ್ಕ ಠಾಣಾ ಪೊಲೀಸರು ಆರೋಪಿ ಸಮೇತ ವಿಟ್ಲದ ಗುಜಿರಿ ಅಂಗಡಿಗೆ ದಾಳಿ ನಡೆಸಿದ್ದಾರೆ.

ಈ ವೇಳೆ ಅಂಗಡಿಯಲ್ಲಿದ್ದ ವ್ಯಕ್ತಿಯೋರ್ವ ಈಗ ಸಾಮಾನು ತಂದು ಕೊಡುವುದಾಗಿ ಹೇಳಿ ಸ್ಥಳದಿಂದ ಕಾಲ್ಕಿತ್ತಿದ್ದನು.

ಆದರೆ ಪೊಲೀಸರು ಆತ ಈಗ ಬರುತ್ತಾನೆಂದು ಗಂಟೆಗೂ ಹೆಚ್ಚು ಕಾಲ ಪೊಲೀಸರು ಕಾದು ಕಾದು ಸುಸ್ತಾಗಿ ಹೋಗಿದ್ದರು. ಆದರೆ ಆತ ಏಕಾಏಕಿ ನಾಪತ್ತೆಯಾದ್ದರಿಂದ ಪೊಲೀಸರು ತಲೆ ಮೇಲೆ ಕೈ ಇಟ್ಟು ಕುಳಿಕೊಂಡು ವಾಪಾಸಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಕೇರಳ ಪೊಲೀಸರು ಗಂಟೆಗೂ ಹೆಚ್ಚು ಕಾಲ ವಿಟ್ಲದಲ್ಲಿದ್ದುದನ್ನು ಕಂಡು ಸ್ಥಳೀಯರು ಗೊಂದಲಕ್ಕೀಡಾದರು.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...