LATEST NEWS
‘ಕೇರಳಂ’ ಮರುನಾಮಕರಣ ನಿರ್ಣಯಕ್ಕೆ ಕೇರಳ ವಿಧಾನ ಸಭೆ ಒಪ್ಪಿಗೆ
ಕೇರಳ ರಾಜ್ಯಕ್ಕೆ “ಕೇರಳಂ” ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರಕಾರವನ್ನು ಕೋರಿ ಸಿಎಂ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯಕ್ಕೆ ಕೇರಳ ವಿಧಾನ ಸಭೆ ಬುಧವಾರ ಸರ್ವಾನುಮತದ ಒಪ್ಪಿಗೆ ನೀಡಿದೆ.
ಕೇರಳ: ಕೇರಳ ರಾಜ್ಯಕ್ಕೆ “ಕೇರಳಂ” ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರಕಾರವನ್ನು ಕೋರಿ ಸಿಎಂ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯಕ್ಕೆ ಕೇರಳ ವಿಧಾನ ಸಭೆ ಬುಧವಾರ ಸರ್ವಾನುಮತದ ಒಪ್ಪಿಗೆ ನೀಡಿದೆ.
ಕೇಂದ್ರ ಜಾರಿಗೆ ತರಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಕೇರಳ ವಿಧಾನ ಸಭೆ ಅವಿರೋಧವಾಗಿ ನಿರ್ಣಯ ಅಂಗೀಕರಿಸಿದ ಮರುದಿನವೇ ರಾಜ್ಯದ ಹೆಸರು ಬದಲಾವಣೆಗೆ ಮುಂದಾಗಿದೆ.
ಸಂವಿಧಾನದ ಎಂಟನೇ ಪರಿಚ್ಛೇಧ ಸೇರಿದಂತೆ ಎಲ್ಲ ಭಾಷೆಗಳಲ್ಲಿ ರಾಜ್ಯದ ಹೆಸರನ್ನು “ಕೇರಳಂ ” ಎಂದು ಕೇಂದ್ರ ಸರಕಾರ ಬದಲಾಯಿಸಬೇಕು ಎನ್ನುವ ನಿರ್ಣಯವನ್ನು ಸಿಎಂ ಪಿಣರಾಯಿ ವಿಜಯನ್ ಮಂಡಿಸಿದರು.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟ ಯುಡಿಎಫ್ ಯಾವುದೇ ಬದಲಾವಣೆ ಅಥವಾ ತಿದ್ದುಪಡಿ ಇಲ್ಲದೇ ಒಪ್ಪಿಗೆ ಸೂಚಿಸಿತು.
ಇದಾದ ನಂತರ ಸ್ಪೀಕರ್ ಎ.ಎನ್ .ಶಂಶೀರ್ ಅವರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಘೋಷಿಸಿದರು.
“ಮಲಯಾಳಂ ಭಾಷೆಯಲ್ಲಿ ರಾಜ್ಯದ ಹೆಸರು ಕೇರಳಂ.
ಭಾಷಾವಾರು ಆಧಾರದ ಮೇಲೆ1956 ರ ನ. 1 ರಂದು ರಾಜ್ಯಗಳನ್ನು ಮರು ರಚಿಸಲಾದ ನಂತರವೂ ಬೇರೆ ಭಾಷೆಗಳಲ್ಲಿ ಕೇರಳ ಎಂದಿದೆ.
ಮಲಾಯಾಳಂ ಮಾತನಾಡುವ ಜನರಿಗೆ “ಅಖಂಡ ಕೇರಳದ ಬಯಕೆ ಸ್ವಾತಂತ್ರ್ಯ ಚಳವಳಿಯ ದಿನಗಳಿಂದಲೂ ಇತ್ತು.
ಸಂವಿಧಾನದ 3ನೇ ವಿಧಿಯಡಿ ಅದನ್ನು “ಕೇರಳಂ” ಎಂದು ಮರುನಾಮಕರಣ ಮಾಡಲು ತುರ್ತು ಕ್ರಮಗಳ ಅಗತ್ಯವಿದೆ ” ಎಂದು ನಿರ್ಣಯವು ಹೇಳಿದೆ.
ಸಂವಿಧಾನದ 3ನೇ ವಿಧಿಯು ಹೊಸ ರಾಜ್ಯಗಳ ರಚನೆ ಮತ್ತು ಪ್ರದೇಶಗಳು , ಗಡಿಗಳು ಅಥವಾ ಅಸ್ತಿತ್ವದಲ್ಲಿರುವ ರಾಜ್ಯಗಳ ಹೆಸರುಗಳ ಬದಲಾವಣೆಗೆ ಸಂಬಂಧಿಸಿದ್ದಾಗಿದೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!