BANTWAL
ವಿಟ್ಲ: ಸ್ನೇಹಿತನನ್ನು ನೋಡಲು ಬಂದ ಕೇರಳಿಗರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು -ಪ್ರಕರಣ ಸುಖಾಂತ್ಯ
ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾರೆಂದು ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಸುಖಾಂತ್ಯ ಕಂಡಿದ್ದು,
ಸ್ನೇಹಿತನ ಮನೆಗೆ ಬಂದವರನ್ನು ಸ್ಥಳೀಯರು ಅನುಮಾನಿಸಿದ್ದರಿಂತ ಇಂತಹ ಪ್ರಕರಣ ನಡೆದಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ಈ ಘಟನೆ ನಡೆದಿತ್ತು.
ರಾತ್ರಿ 12ಗಂಟೆಯ ಸುಮಾರಿಗೆ ಕೇರಳ ನೋಂದಣಿಯ ಮಾರುತಿ ರಿಡ್ಜ್ ಕಾರಿನಲ್ಲಿ ಮೂವರು ಯುವಕರು ಅನುಮಾನಾಸ್ಪದವಾಗಿ ಮನೆಯೊಂದರ ಬಳಿ ನಿಂತಿದ್ದರು.
ಇದರಿಂದ ಅನುಮಾನಗೊಂಡ ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರು.
ಸೆರ್ಕಳ ಸಲೀಂ ಎಂಬಾತ ನಮ್ಮನ್ನು ಬರುವಂತೆ ಹೇಳಿದ್ದು ಎಂದು ಈ ಮೂವರು ತಿಳಿಸಿದ್ದು, ಯಾವ ಉದ್ಧೇಶಕ್ಕಾಗಿ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದರು.
ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದು, ಮೂವರನ್ನೂ ವಿಟ್ಲ ಪೊಲೀಸರು ವಶಕ್ಕೆ ಪಡೆದು ವಿಚಾರ ನಡೆಸಿದ್ದರು.
ವಿದೇಶದಲ್ಲಿ ಬೆಳೆದ ಸ್ನೇಹಿತರು
ಈ ನಾಲ್ವರು ವಿದೇಶದಲ್ಲಿ ಕೆಲಸದಲ್ಲಿದ್ದು, ಒಂದೇ ರೂಮ್ ನಲ್ಲಿ ತಂಗಿದ್ದರು. ಪರಸ್ಪರ ಆತ್ಮೀಯರಾಗಿದ್ದರು. ಬಳಿಕ ಊರಿಗೆ ಮರಳಿದ್ದರು ತಮ್ಮ ಸ್ನೇಹಿತ ಸಲೀಂ ನನ್ನು ನೋಡಲು ರಿಡ್ಜ್ ಕಾರಿನಲ್ಲಿ ವಿಟ್ಲ ಸಮೀಪದ ಸೆರ್ಕಳ ಎಂಬಲ್ಲಿಗೆ ಬಂದಿದ್ದರು.
ಸಲೀಂ ಮನೆ ಗ್ರಾಮೀಣ ಭಾಗದಲ್ಲಿದ್ದು, ರಾತ್ರಿ ವೇಳೆಗೆ ಸಲೀಂ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಸ್ನೇಹಿತರಿಗೆ ಮನೆ ಹುಡುಕಲು ಕಷ್ಟವಾಗಿದೆ.
ಇದು ಮಧ್ಯರಾತ್ರಿಯಾದ್ದರಿಂದ ಅನುಮಾನಗೊಂಡ ಇದರಿಂದ ಅನುಮಾನಗೊಂಡ ಸ್ಥಳೀಯರು ತಪ್ಪು ಗೃಹಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ನೈಜ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಈ ಪ್ರಕರಣಕ್ಕೆ ಅಂತ್ಯ ಹಾಡಿದ್ದು, ಅವರ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.