ಬೆಂಗಳೂರು: ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಕೆಜಿಎಫ್ 2’ ಚಿತ್ರ ಹಲವು ಕಾರಣಗಳಿಗಾಗಿ ಸದ್ದು ಮಾಡುತ್ತಿದೆ. ಸದ್ಯ ಸುದ್ದಿಯಾಗಿರೋದು ಈ ಸಿನಿಮಾದ ಆಡಿಯೋ ಹಕ್ಕುಗಳು ಮಾರಾಟಕ್ಕೆ.
‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಹಾಡು ಹಕ್ಕು ಖರೀದಿಸಿದ್ದ ‘ಲಹರಿ ಮ್ಯೂಸಿಕ್’ ಕಂಪನಿಯು ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಆಡಿಯೋ ರೈಟ್ಸ್ ಖರೀದಿ ಮಾಡಿದೆ. ಚಿತ್ರತಂಡದ ಮೂಲಗಳ ಪ್ರಕಾರ, ‘ಕೆಜಿಎಫ್: ಚಾಪ್ಟರ್ 1′ ಚಿತ್ರದ ಹಾಡುಗಳು ಆಗ 3.60 ಕೋಟಿಗೆ ವ್ಯವಹಾರ ಕುದುರಿತ್ತು. ಈಗ ಅದಕ್ಕಿಂತಲೂ ದುಪ್ಪಟ್ಟ ಹಣ ನೀಡಿ ‘ಕೆಜಿಎಫ್: ಚಾಪ್ಟರ್ 2’ ಆಡಿಯೋವನ್ನು ಲಹರಿ ಸಂಸ್ಥೆ ಖರೀದಿಸಿದೆ. ಕೇಳಿಬಂದಿರುವ ಮಾಹಿತಿ ಪ್ರಕಾರ 6 ಕೋಟಿ ರೂ.ಗಿಂತಲೂ ಹೆಚ್ಚಿನ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟ ಆಗಿದೆ. ಜು.1ರ ರಾತ್ರಿ ಅಧಿಕೃತವಾಗಿಯೇ ಈ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ.
ಈ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ರಶಾಂತ್ ನೀಲ್ ಚಿತ್ರ ನಿರ್ದೇಶನ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಲವು ಭಾಷೆಗಳಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಎಲ್ಲ ಭಾಷೆಯ ಆಡಿಯೋ ರೈಟ್ಸ್ ಲಹರಿ ಸಂಸ್ಥೆಯ ಪಾಲಾಗಿದೆ.
ಆಡಿಯೋ ಹಕ್ಕು ಮಾರಾಟಕ್ಕೆ ಸಂಬಂಧಿಸಿದಂತೆ ಇಂದು ಹೊಂಬಾಳೆ ಫಿಲ್ಮ್ಸ್ ಜೊತೆ ಲಹರಿ ಸಂಸ್ಥೆ ಅಧಿಕೃತವಾಗಿ ಒಪ್ಪಂದ ಮಾಡಿಕೊಂಡಿದೆ. ಲಹರಿ ಸಂಸ್ಥೆ ಮಾಲೀಕರಾದ ಮನೋಹರ್ ನಾಯ್ಡು ಅವರು ಇಂದು ಸಹಿ ಹಾಕಿದ್ದಾರೆ. ಆದಷ್ಟು ಬೇಗ ಆಡಿಯೋ ರಿಲೀಸ್ ಆಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.
ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು(ಜ.10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಜಾಮೀನು ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊ*ಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಇತರೆ ಆರೋಪಿಗಳು ತಮ್ಮ ತಮ್ಮ ವಕೀಲರೊಡನೆ ಕೋರ್ಟ್‌ಗೆ ಹಾಜರಾಗಿದ್ದರು. ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದಿದ್ದು, ಅವರೊಂದಿಗೆ ವಕೀಲರು ಸಹ ಆಗಮಿಸಿದ್ದರು.
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ ಜೋಡಿ ಭೇಟಿ ನೀಡಿದ್ದಾರೆ.
ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರ್ಷಿಕಾ ದಂಪತಿ ಹರಿಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇಗುಲಕ್ಕೆ ಭೇಟಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ ಹರ್ಷಿಕಾ ಮತ್ತು ಭುವನ್ ಹೊಸ ಬಾಳಿಗೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು. ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕಳೆದ ವರ್ಷ ಅಕ್ಟೋಬರ್ 3ರಂದು ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳ ಪಾಲನೆಯಲ್ಲಿ ಬ್ಯುಸಿಯಿರುವ ಹರ್ಷಿಕಾ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ಫೋಟೋ ವೈರಲ್ ಆಗಿತ್ತು.
ಆದರೆ ಬಳಿಕ ಇದು ಫೇಕ್ ಎಂದು ತಿಳಿದು ಬಂದಿದೆ. ಈ ಫೋಟೋವನ್ನು ಡೀಪ್ ಫೇಕ್ ಬಳಸಿ ಎಡಿಟ್ ಮಾಡಲಾಗಿದೆ.
“ಡೀಪ್ ಫೇಕ್” ಜಾಲಕ್ಕೆ ಖ್ಯಾತ ಸಿನಿ ತಾರೆಯರೆ ಸಿಲುಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಕಾಜಾಲ್, ಕತ್ರಿನಾ ಕೈಫ್, ಆಲಿಯಾ ಭಟ್ ಈಗಾಗಲೇ ಇದರ ಜಾಲಕ್ಕೆ ಸಿಲುಕಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಪ್ ಫೇಕ್ ಗಳನ್ನು ಸೃಷ್ಟಿಸಿ ವೈರಲ್ ಮಾಡಿದರೆ 1 ಲಕ್ಷ ರೂ. ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗುತ್ತವೆ. ರಾತ್ರಿ ಕಳೆದು ಬೆಳಕಾಗುವಷ್ಟರಲ್ಲಿ ಒಬ್ಬರ ಜೀವನವನ್ನೇ ಅಳಿಸುವಂತ ಶಕ್ತಿ ಈ ಇಂಟರ್ ನೆಟ್ ಗಿದೆ.