BIG BOSS
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
Published
2 hours agoon
By
NEWS DESK2ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 54ನೇ ದಿನಕ್ಕೆ ಕಾಲಿಟ್ಟಿದೆ. ಈ ಐವತ್ತು ದಿನಗಳಲ್ಲಿ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಅದರಲ್ಲೂ ಬಿಗ್ಬಾಸ್ ಮನೆಗೆ 50ನೇ ದಿನಕ್ಕೆ ಎಂಟ್ರಿ ಕೊಟ್ಟಿದ್ದ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ.
ಹೌದು, ಬಿಗ್ಬಾಸ್ ಮನೆಗೆ ಹನುಮಂತನ ಬಳಿಕ ಶೋಭಾ ಶೆಟ್ಟಿ ಹಾಗೂ ರಜತ್ ಕಿಶನ್ ಎಂಟ್ರಿ ಕೊಟ್ಟಿದ್ದರು. ಬಿಗ್ಬಾಸ್ ಮನೆಗೆ ಬಂದ ದಿನದಲ್ಲೇ ವಿಶೇಷ ಅಧಿಕಾರವನ್ನು ಪಡೆದುಕೊಂಡಿದ್ದರು. ಇದಾದ ಬಳಿಕ ಶೋಭಾ ಶೆಟ್ಟಿ ಅದ್ಭುತವಾಗಿ ಟಾಸ್ಕ್ ಆಡುವ ಮೂಲಕ ಕಮಾಲ್ ಮಾಡಿದ್ದರು. ಆದರೆ ರಜತ್ ಟಾಸ್ಕ್ವೊಂದನ್ನು ಆಡುವಾಗ ಗೋಲ್ಡ್ ಸುರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು.
ಆದರೆ ಇಂದಿನ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಅವರು ನೇರ ನೇರವಾಗಿ ಅವಾಚ್ಯ ಶಬ್ದಗಳನ್ನು ಬಳಸಿದ ರಜತ್ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸದ್ಯ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು, ರಜತ್ ಕನ್ನಡದಲ್ಲಿ ತುಂಬಾ ಪದಗಳು ಇವೆ ಮಾತನಾಡೋಕೆ, ಆದರೆ ಕೆಲವೊಂದಕ್ಕೆ ಅದರದ್ದೇ ಆದ ತೂಕಗಳಿವೆ. ಆ ಪದವನ್ನೇ ನನ್ನ ಮುಂದೆ ಹೇಳಿ ಅಂತ ಕೇಳಿದ್ದಾರೆ. ಆಗ ರಜತ್ ಫುಲ್ ಸೈಲೆಂಟ್ ಆಗಿದ್ದಾರೆ. ಮತ್ತೆ ಕಿಚ್ಚ ಸುದೀಪ್ ಅವರು ನೆಕ್ಸ್ಟ್ ಟೈಮ್ ಬಾಗಿಲು ಇದೆ ಹೊರಗಡೆ ಹೋಗೋದಕ್ಕೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
3 hours agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
BIG BOSS
ಜೈಲಲ್ಲಿ ರಜತ್ ಹೊಸ ವರಸೆ.. ಕಂಬಿ ಹಿಂದೆ ಇದ್ದುಕೊಂಡೇ ಎದುರಾಳಿಗಳ ಆಟವಾಡಿಸಿದ ಸ್ಪರ್ಧಿ..!
Published
4 hours agoon
23/11/2024By
NEWS DESK2ಬಿಗ್ಬಾಸ್ ಮನೆಯಲ್ಲಿ ಇವತ್ತು ಕಿಚ್ಚನ ಪಂಚಾಯ್ತಿ ನಡೆಯಲಿದೆ. ತಪ್ಪು ಮಾಡಿದ ಯಾವೆಲ್ಲ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ ಅನ್ನೋದನ್ನು ತಿಳಿದುಕೊಳ್ಳಲು ಬಿಗ್ಬಾಸ್ ವೀಕ್ಷಕರು ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆ ನಿನ್ನೆ ರಜತ್ ಜೈಲು ಸೇರಿದ ಮೇಲೆ ಮನೆಯಲ್ಲಿ ಏನಾಯ್ತು ಅನ್ನೋದ್ರ ಬಗ್ಗೆ ಪ್ರೊಮೋ ಒಂದನ್ನು ಕಲರ್ಸ್ ಕನ್ನಡ ರಿಲೀಸ್ ಮಾಡಿದೆ.
ವಿಡಿಯೋದಲ್ಲಿ ರಜತ್ ಅವರು, ಬಿಗ್ಬಾಸ್ ಮನೆಯ ಇತರೆ ಸ್ಪರ್ಧಿಗಳನ್ನು ಚೆನ್ನಾಗಿ ಆಟವಾಡಿಸಿದಂತೆ ಕಾಣ್ತಿದೆ. ನಿನ್ನೆಯ ದಿನ ರಜತ್ ಬಿಗ್ಬಾಸ್ ಮನೆಯಲ್ಲಿರುವ ಜೈಲು ಸೇರಿದ್ದಾರೆ. ಕಳಪೆ ಮತ್ತು ಉತ್ತಮ ವಿಚಾರದಲ್ಲಿ ಬಹುತೇಕ ಸ್ಪರ್ಧಿಗಳು ರಜತ್ ಅವರ ಹೆಸರನ್ನು ತೆಗೆದುಕೊಂಡರು. ಪರಿಣಾಮ ರಜತ್ ಬೇಸರದಲ್ಲಿ ಜೈಲಿಗೆ ಹೋಗಿದ್ದಾರೆ.
ಜೈಲು ಸೇರಿದ ರಜತ್ಗೆ ಶಿಕ್ಷೆಯ ಮುಂದುವರಿದ ಭಾಗವಾಗಿ ಅಡುಗೆಗೆ ಬೇಕಾಗಿದ್ದ ತರಕಾರಿಗಳನ್ನು ಕಟ್ ಮಾಡಿಕೊಡಬೇಕಿತ್ತು. ಅಂತೆಯೇ ನಿರ್ಗಮಿತ ಕ್ಯಾಪ್ಟನ್ ಭವ್ಯಗೌಡ ಅವರು ಅಡುಗೆಗೆ ಬೇಕಾದ ತರಕಾರಿಗಳನ್ನು ಕಟ್ ಮಾಡುವಂತೆ ರಜತ್ಗೆ ನೀಡುತ್ತಾರೆ. ಅದಕ್ಕೆ ತಿರುಗೇಟು ನೀಡಿರುವ ರಜತ್, ನಾನು ಕಟ್ ಮಾಡುತ್ತೇನೆ, ಆದರೆ ಎರಡು ಗಂಟೆ ಕಾಯಬೇಕು. ಅದು ಕೂಡ ನನಗೆ ಹೆಂಗೆ ಬೇಕೋ ಹಾಗೆ ಕಟ್ ಮಾಡ್ತೇನೆ. ನನಗೆ ಕಳಪೆ ಕೊಡ್ತಾರೆ, ಕಾಯಿರಿ. ನನಗೆ ಅನಿಸಿದಾಗ ಕಟ್ ಮಾಡಿಕೊಡ್ತೀನಿ.. ಏನ್ ಮಾಡ್ತೀರಿ ಇವಾಗ? ಏನೂ ಮಾಡೋಕೆ ಆಗಲ್ಲ. ನಂಗೂ ಹೊಟ್ಟೆ ಉರಿತಾ ಇಲ್ವಾ? ಎಂದು ತಮಾಷೆ ಮಾಡಿದ್ದಾರೆ.
BIG BOSS
ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ
Published
7 hours agoon
23/11/2024ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
LATEST NEWS
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು
ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ
ಜಾರ್ಖಂಡ್ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru1 day ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ