Connect with us

    FILM

    ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?

    Published

    on

    ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ.

    ಘಟನೆ ಏನು?

    ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ತಂದೆಗಾಗಿ, ‘ಜಸ್ಟ್ ಮಾತ್ ಮಾತಲ್ಲಿ..’ ಹಾಡನ್ನು ಸುಮಧುರವಾಗಿ ಹಾಡಿದರು. ಈ ಹಾಡಿನ ಬಳಿಕ ಅವರು ಸಂಪೂರ್ಣವಾಗಿ ಮಾತನಾಡಿದ್ದು ಇಂಗ್ಲಿಷ್​​ನಲ್ಲಿ. ‘ಪ್ರತಿವರ್ಷ’ ಎಂಬ ಶಬ್ದ ಬಿಟ್ಟು ಅವರು ಮತ್ತೆಲ್ಲಿಯೂ ಕನ್ನಡ ಶಬ್ದ ಮಾತನಾಡಿಲ್ಲ. ಇದು ಟ್ರೋಲ್​ಗೆ ಕಾರಣವಾದ ವಿಚಾರ.

    ಸುದೀಪ್ ಕನ್ನಡ ಪ್ರೀತಿ

    ಕಿಚ್ಚ ಸುದೀಪ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಕನ್ನಡಕ್ಕೆ ಗೌರವ ನೀಡದ ಸಂದರ್ಭದಲ್ಲಿ ಅವರು ಇದನ್ನು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸ್ಪರ್ಧಿಗಳು ಇಂಗ್ಲಿಷ್ ಮಾತನಾಡಿದಾಗ ಅದನ್ನು ಪ್ರಶ್ನೆ ಮಾಡಬೇಕು ಮತ್ತು ಕನ್ನಡ ಬಳಕೆ ಹೆಚ್ಚುವಂತೆ ಆಗಬೇಕು ಎಂದು ಸುದೀಪ್ ಅವರು ಬಿಗ್ ಬಾಸ್ ಆಯೋಜಕರ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಪರಭಾಷಾ ಸಂದರ್ಶನಗಳಲ್ಲಿ ಯಾರಾದರೂ ‘ಕನ್ನಡ್’ ಎಂದರೆ ‘ಅದು ಕನ್ನಡ್ ಅಲ್ಲ ಕನ್ನಡ’ ಎಂದು ತಿದ್ದುವ ಕೆಲಸ ಮಾಡಿದ್ದಾರೆ. ಆದರೆ, ಕನ್ನಡ ರಿಯಾಲಿಟಿ ಶೋನಲ್ಲಿ ಮಗಳಿಗೇಕೆ ಅವರು ಕನ್ನಡ ಮಾತನಾಡುವಂತೆ ಒತ್ತಾಯಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾ ಇದ್ದಾರೆ.

    ಸಮರ್ಥನೆ

    ಇನ್ನೂ ಕೆಲವು ಸಾನ್ವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಸುದೀಪ್ ಮಗಳು ಸಾನ್ವಿ ಇಂಗ್ಲಿಷ್​ನಲ್ಲೇ ಮಾತನಾಡಿರಬಹುದು, ಆದರೆ, ಅವರು ಹಾಡಿದ್ದು ಕನ್ನಡದ ಹಾಡನ್ನೇ. ಈ ಕಾರಣಕ್ಕೆ ಸಂತೋಷ ವ್ಯಕ್ತಪಡಿಸಬೇಕು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಜೋರಾಗಿದೆ.

    FILM

    ಯಶ್ ಫ್ಯಾನ್ಸ್‌ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್‌ನಿಂದ ಸಿಕ್ತು ಸಿಹಿ ಸುದ್ದಿ

    Published

    on

    ನ್ಯಾಷನಲ್ ಸ್ಟಾರ್ ಯಶ್ ಅವರು ಇದೇ ಜ.8ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ದಿನ ‘ಟಾಕ್ಸಿಕ್’ ಚಿತ್ರದ ಬಗ್ಗೆ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ನಿರೀಕ್ಷಿಸಿದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ಚಿತ್ರತಂಡದ ಕಡೆಯಿಂದ ಬಿಗ್ ನ್ಯೂಸ್‌ವೊಂದು ಸಿಕ್ಕಿದೆ. ಸಿನಿಮಾ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

    ಯಶ್ ಬರ್ತ್‌ಡೇಯಂದು (ಜ.8) ಬೆಳಗ್ಗೆ 10:25ಕ್ಕೆ ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್’ (Toxic) ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಯಶ್ ಕೂಡ ಇದೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

    ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಫ್ಯಾನ್ಸ್ ಜ.8ರಂದು ಯಶ್ ಲುಕ್ ನೋಡಲು ಕಾಯುತ್ತಿದ್ದಾರೆ.

    ಇನ್ನೂ ಜ.8ರಂದು ಬೆಂಗಳೂರಿನಲ್ಲಿ ಇರುವುದಿಲ್ಲ ಬರ್ತ್‌ಡೇ ಆಚರಣೆ ಮಾಡಲ್ಲ ಎಂದು ಫ್ಯಾನ್ಸ್ ಯಶ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

    ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದಿದ್ದರು.

    Continue Reading

    FILM

    ನಟ ಶಿವರಾಜ್ ಕುಮಾರ್ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

    Published

    on

    ಅಮೇರಿಕಾ: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ನಟ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಸರ್ಜರಿಗೆ ಒಳಗಾಗಿದ್ದರು.ಈಗ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಬೆಂಗಳೂರಿನಿಂದ ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದರು. ಆ ನಂತರ ಸರ್ಜರಿ ಮಾಡಲಾಗಿತ್ತು. ಅವರು ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಖುಷಿಯ ವಿಚಾರವನ್ನು ಸ್ವತಃ ನಟ ಶಿವರಾಜ್ ಕುಮಾರ್ ಅವರೇ ತಿಳಿಸಿದ್ದರು.

    ಈಗ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯಕೀಯ ತಪಾಸಣೆಯಲ್ಲಿದ್ದಂತ ಅವರು, ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ತಿಳಿದು ಬಂದಿದೆ. ಇದೇ ಜನವರಿ 24ರಂದು ಬೆಂಗಳೂರಿಗೆ ಮರಳಳಿದ್ದು, ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ ತೊಡಗುವ ಸಾಧ್ಯತೆ ಇದೆ.

    Continue Reading

    bangalore

    ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ

    Published

    on

    ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್​​ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್​ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್​ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್​ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.

    52ನೇ ವಾರದ ಟಿಆರ್​ಪಿ ಪ್ರಕಾರ, ಬಿಗ್ ಬಾಸ್​ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್​ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್​ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್​ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.

    ಸೀರಿಯಲ್‌ಗಳ ಟಿಆರ್​ಪಿ

    ಸೀರಿಯಲ್‌ಗಳ ಟಿಆರ್​ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.

    Continue Reading

    LATEST NEWS

    Trending