Connect with us

DAKSHINA KANNADA

ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಕಿರಾತಕ- ಆರೋಪಿಯಿಂದ ಮನೆ ಮಂದಿಗೆ ಜೀವ ಬೆದರಿಕೆ..!

Published

on

ಮಂಗಳೂರು: ಮೂವತ್ತು ವರ್ಷಗಳ ಹಿಂದೆ ನಾಲ್ವರು ಸಂಬಂಧಿಕರನ್ನು ಬರ್ಬರವಾಗಿ ಕೊಲೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿಯನ್ನು ನಡುಗಿಸಿದ್ದ ಪ್ರವೀಣ್‌ ಕುಮಾರ್‌ ಇದೀಗ ಮತ್ತೆ ಆತ ಕುಟುಂಬದವರಿಗೆ ಕಂಟಕವಾಗಿ ಪರಿಣಮಿಸಿದ್ದಾನೆ.

ಈ ಹಿನ್ನೆಲೆಯಲ್ಲಿ ಹಂತಕ ಪ್ರವೀಣನಿಂದ ರಕ್ಷಣೆ ಒದಗಿಸುವಂತೆ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಮಂಗಳೂರಿನ ವಾಮಂಜೂರಿನಲ್ಲಿ 1994 ರಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿದ್ದ ಪ್ರವೀಣ್‌ ಕುಮಾರ್‌ (60) ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡಿದ್ದು, ಕುಟುಂಬದವರಿಗೆ ಜೀವ ಬೆದರಿಕೆ ಹಾಕಿರುವ ಇರುವ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ಒದಗಿಸಬೇಕು ಎಂದು ಆತನ ಕುಟುಂಬಸ್ಥರು ಮತ್ತೊಮ್ಮೆ ಪೊಲೀಸರು ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಪ್ರವೀಣ್‌ನನ್ನು ಸನ್ನಡತೆಯ ಕಾರಣ ನೀಡಿ ಬಿಡುಗಡೆ ಮಾಡಿರುವ ಬಗ್ಗೆ 2023 ಮೇ ತಿಂಗಳಿನಲ್ಲಿ ಮಾಹಿತಿ ಬಂದಿತ್ತು. ಬಳಿಕ ನ.7ರಂದು ರಾತ್ರಿ ಆತ ತಮ್ಮನಿಗೆ ಕರೆ ಮಾಡಿ ಜೀವಬೆದರಿಕೆ ಹಾಕಿದ್ದ. ಹಾಗಾಗಿ ನಾವು ಜೀವ ಭಯದಿಂದ ಇದ್ದೇವೆ. ಪೊಲೀಸರು ಆತನ ಚಲನವಲನಗಳನ್ನು ನಿತ್ಯವೂ ಗಮನಿಸ ಬೇಕು. ದ.ಕ ಜಿಲ್ಲೆಗೆ ಬರದಂತೆ ಗಡೀಪಾರು ಮಾಡಬೇಕು ಎಂದು ಕುಟುಂಬಸ್ಥರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಪ್ರವೀಣ್‌ ಈಗ ಬೆಳಗಾವಿ ಹಿಂಡಲಗಾ ಜೈಲಿನ ಬಳಿಯಲ್ಲೇ ಟೈಲರ್‌ ಅಂಗಡಿ ನಡೆಸುತ್ತಿದ್ದಾನೆಂಬ ಮಾಹಿತಿ ಇದೆ. ಆತನನ್ನು ಓರ್ವ ಉತ್ತಮ ವ್ಯಕ್ತಿಯಂತೆ ಬಿಂಬಿಸುವುದರಿಂದ ಸಮಾಜಕ್ಕೂ ಕೆಟ್ಟ ಸಂದೇಶ ಹೋಗುತ್ತಿದೆ. ಸಂಬಂಧಿಸಿದವರು ಈ ಬಗ್ಗೆ ಗಮನ ಹರಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಮೂಲತಃ ಉಪ್ಪಿನಂಗಡಿಯವ ನಾಗಿದ್ದರೂ ಹೆಚ್ಚಾಗಿ ವಾಮಂಜೂರಿನಲ್ಲಿ ತನ್ನ ಅತ್ತೆಯ ಮನೆಯಲ್ಲೇ ವಾಸವಾಗಿದ್ದು, ಮಂಗಳೂರಿನಲ್ಲಿ ಟೈಲರ್‌ ವೃತ್ತಿ ಮಾಡುತ್ತಿದ್ದ. 1994ರ ಫೆ.23ರ ರಾತ್ರಿ ವಾಮಂಜೂರಿನ ಮನೆಗೆ ಬಂದಿದ್ದ. ಆಗ ಕಳ್ಳರ ಹಾವಳಿ ಹೆಚ್ಚಾಗಿದ್ದ ಕಾಲ. ಮನೆಯಲ್ಲಿದ್ದ ಆತ ತಮ್ಮ ರಕ್ಷಣೆಗೆ ಇದ್ದಾನೆಂದು ಮನೆಯವರು ಭಾವಿಸಿದ್ದರು. ಆದರೆ ಕುಡಿತ, ಜೂಜಿನ ಚಟ ಹೊಂದಿದ್ದ ಪ್ರವೀಣ್‌ ಮನೆಯಲ್ಲಿದ್ದ ನಾಲ್ವರು ತನ್ನ ಸಂಬಂಧಿಕರನ್ನೇ ಕತ್ತಿಯಿಂದ ಹೊಡೆದು ಕೊಲೆ ಮಾಡಿ ಚಿನ್ನ, ಹಣ ದೋಚಿ ಪರಾರಿಯಾಗಿದ್ದ. ಪೊಲೀಸರು ಒಮ್ಮೆ ಬಂಧಿಸಿದ ಬಳಿಕವೂ ತಪ್ಪಿಸಿಕೊಂಡಿದ್ದ. ಮತ್ತೂಮ್ಮೆ ಬಂಧಿಸಲಾಗಿತ್ತು.

Click to comment

Leave a Reply

Your email address will not be published. Required fields are marked *

DAKSHINA KANNADA

ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!

Published

on

ಮಂಗಳೂರು: ಹೂವುಗಳ ಅಲಂಕಾರದಿಂದ ದೇವರ ಕೋಣೆ ಸುಂದರವಾಗಿ ಕಾಣಿಸುತ್ತದೆ. ಅಲ್ಲದೇ ದೇವರ ಪೂಜೆ ಪೂರ್ಣವೆನಿಸುತ್ತದೆ. ಹೂವುಗಳು ಮನೆಯ ಶಕ್ತಿಯನ್ನು ಬದಲಾಯಿಸುತ್ತದೆ. ಆದರೆ ಅದೇ ಹೂಗಳು ನಿಮ್ಮ ಮನೆಯಲ್ಲಿ ದೋಷಗಳನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ.

ಒಣಗಿದ ಹೂವುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದರೆ ಅಥವಾ ಅದನ್ನು ತೆಗೆಯದೇ ಹಾಗೇ ಬಿಟ್ಟರೆ, ಅದು ನಿಮ್ಮ ಮನೆಯ ಶಕ್ತಿಯನ್ನು ಹಾಳು ಮಾಡುತ್ತದೆ. ಹಾಗಾಗಿ ಒಣಗಿದ ಅಥವಾ ಬಾಡಿದ ಹೂವುಗಳನ್ನು ಮನೆಯಲ್ಲಿ ಇಡಬಾರದು. ದೇವರಿಗೆ ಆಗಿರಬಹುದು ಅಥವಾ ಮನೆಯಲ್ಲೇ ಆಗಿರಬಹುದು ಯಾವಾಗಲೂ ಪರಿಮಳಯಕ್ತ ಹೂವುಗಳನ್ನು ಮಾತ್ರ ಇಟ್ಟುಕೊಳ್ಳಬೇಕು.

ತಾಜಾ ಹೂವುಗಳಿಗೆ ಅದ್ಭುತವಾದ ಧನಾತ್ಮಕ ಶಕ್ತಿಯನ್ನು ಸೃಷ್ಟಿಸುವ ಸಾಮರ್ಥ್ಯವಿರುತ್ತದೆ. ಅವುಗಳಿಂದ ಉತ್ಪತ್ತಿಯಾಗುವ ಶಕ್ತಿಯು ಧನಾತ್ಮಕವಾಗಿ ನಮ್ಮ ಸುತ್ತಮುತ್ತಲಿನ ಸ್ಥಳವನ್ನು ಬದಲಾಯಿಸುತ್ತದೆ. ತಾಜಾ ಹೂವುಗಳು ಇರುವಲ್ಲೆಲ್ಲಾ ತಮ್ಮ ಸುತ್ತಲಿನ ಜೀವಿಗಳನ್ನು ಸಕಾರಾತ್ಮಕವಾಗಿರಿಸುತ್ತದೆ. ಅದೇ ಹೂವುಗಳು ಒಣಗಲು ಪ್ರಾರಂಭವಾದಾಕ್ಷಣ ಅದರಿಂದ ನಕಾರಾತ್ಮಕ ಕಂಪನಗಳು ಹರಡಲು ಪ್ರಾರಂಭವಾಗುತ್ತದೆ.

ಪೂಜೆಯಲ್ಲಿ ಒಣಗಿದ ಹೂವುಗಳನ್ನು ಬಳಸುವುದರಿಂದ ಆ ಪೂಜೆಯಿಂದ ಯಾವುದೇ ರೀತಿಯ ಫಲವನ್ನು ನಮಗೆ ಅನುಭವಿಸಲು ಸಾಧ್ಯವಾಗುವುದಿಲ್ಲ. ಮತ್ತೊಂದೆಡೆ ಪೂಜೆಯು ಯಾವುದೇ ಶುಭ ಫಲವನ್ನು ಪಡೆಯುವುದಿಲ್ಲ. ಬದಲಾಗಿ ಅಶುಭ ಫಲಗಳನ್ನು ಅನುಭವಿಸುವಂತಾಗುತ್ತದೆ.

ಅದಕ್ಕಾಗಿಯೇ ಹೂವುಗಳನ್ನು ಒಣಗುತ್ತಿದ್ದಂತೆ ಅವುಗಳನ್ನು ತಕ್ಷಣವೇ ಅಲ್ಲಿಂದ ಬದಲಾಯಿಸಬೇಕು. ಒಂದು ವೇಳೆ ಒಣಗಿದ ಹೂವುಗಳು ಇದ್ದರೆ ಅದು ಆರೋಗ್ಯದ ಮೇಲೆಯೂ ಮತ್ತಷ್ಟು ಕೆಟ್ಟ ಪರಿಣಾಮ ಬೀರಬಹುದು.

Continue Reading

DAKSHINA KANNADA

ಎಸ್ ಎಸ್ ಎಲ್ ಸಿ ಫಲಿತಾಂಶ: ಜಿಯಾ ಸ್ವೀಡಲ್ ಲಸ್ರಡೊಗೆ 599 ಅಂಕ

Published

on

ಪುತ್ತೂರು : ಸುದಾನ ರೆಸಿಡೆನ್ಶಿಯಲ್ ಸ್ಕೂಲ್, ನೆಹರು ನಗರ, ಮಂಜಲ್ಪಡ್ಪು ಇಲ್ಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ
ಜಿಯಾ ಸ್ವೀಡಲ್ ಲಸ್ರಡೊ 599 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ ಪಾಟ್ರಿಕ್ ಲಸ್ರಡೊ, ಅಮಿತಾ ಲಸ್ರಡೊ ದಂಪತಿ ಪುತ್ರಿ.

Continue Reading

DAKSHINA KANNADA

ಕುಟುಂಬ ಸದಸ್ಯರ ಮಾರಣ ಹೋಮ..! ಆರು ಜೀವಗಳು ಬಲಿ..!

Published

on

ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ ಆರೋಪಿ ಬಳಿಕ ತಾನೂ ಕೂಡಾ ಗುಂಡು ಹಾರಿಸಿ ಜೀವಾಂತ್ಯಗೊಳಿಸಿದ್ದಾನೆ.

ಈ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಆರೋಪಿ ಅನುರಾಗ್ ಸಿಂಗ್ ಎಂಬಾತ ತನ್ನ ಪತ್ನಿಯ ತಲೆಗೆ ಹ್ಯಾಮರ್‌ನಿಂದ ಹೊಡೆದಿದ್ದು, ತಾಯಿಗೆ ಗುಂಡು ಹೊಡೆದು ಸಾ*ಯಿಸಿದ್ದಾನೆ. ಬಳಿಕ ತನ್ನ ಮೂವರು ಮಕ್ಕಳನನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಅನುರಾಗ್ ಸಿಂಗ್ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಆದ್ರೆ ವಿಪರೀತವಾಗಿ ಮದ್ಯ ಸೇವನೆಯ ಚಟ ಹೊಂದಿದ್ದ ಅಂತಾನೂ ಪೊಲೀಸರು ತಿಳಿಸಿದ್ದಾರೆ. ಇದೇ ಕಾರಣದಿಂದ ತಾಯಿ , ಪತ್ನಿ, ಹಾಗೂ ಮೂವರು ಮಕ್ಕಳು ಹ*ತ್ಯೆ ಮಾಡಿದ್ದಾನೆ ಎನ್ನಲಾಗಿದೆ.

62 ವರ್ಷ ಪ್ರಾಯದ ಸಾವಿತ್ರಿ ಸಿಂಗ್, 40 ವರ್ಷ ಪ್ರಾಯದ ಪ್ರಿಯಾಂಕ, ಮಕ್ಕಳಾದ 12 ವರ್ಷದ ಅಸ್ವಿ, 8 ವರ್ಷದ ಅರ್ನಾ, ಹಾಗೂ 4 ವರ್ಷದ ಅದ್ವಿಕ್‌ ಅನುರಾಗ್ ಸಿಂಗ್ ಕೈನಿಂದ ಹತರಾದವರಾಗಿದ್ದಾರೆ. ಬಳಿಕ ಆರೋಪಿ ಕೂಡಾ ಗುಂಡು ಹಾರಿಸಿ ಸ್ವಯಂ ಹ*ತ್ಯೆ ಮಾಡಿಕೊಂಡಿದ್ದಾನೆ.

 

Continue Reading

LATEST NEWS

Trending