ಬೆಂಗಳೂರು : ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು. ಬೆಂಗಳೂರಿನ ಅಗರ ಉದ್ಯಾನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಶುಕ್ರವಾರ ಸಂಜೆ ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್‍ನಲ್ಲಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ‘ಹುಲಾ ಹೂಪ್ ಡ್ಯಾನ್ಸ್’ ಮಾಡುತ್ತಿದ್ದರು. ಇದಕ್ಕೆ ಮಹಿಳೆಯರು ವಿರೋಧ ವ್ಯಕ್ತಪಡಿಸಿದ್ದು. ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಪಾರ್ಕ್ ನ ಗೇಟ್ ನ್ನು ಸಾರ್ವಜನಿಕರು ಲಾಕ್ ಮಾಡಿದ್ದರು.
ಈ ವೇಳೆ ಸಂಯುಕ್ತಾ ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದು ನಮ್ಮದು ಏನು ತಪ್ಪಿಲ್ಲ, ನೀವೇ ನೋಡಿ ಎನ್ನುತ್ತ ತಾವು ಧರಿಸಿದ್ದ ಮೇಲಂಗಿ ತೆಗೆದು ನಾವು ತುಂಡು ಬಟ್ಟೆ ಧರಿಸಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ನಂತರ ಪೊಲೀಸರು ಸಂಯುಕ್ತಾ ಅವರ ಮನವೊಲಿಸಿ ಕಳುಹಿಸಿದ್ದಾರೆ ಎನ್ನಲಾಗಿದೆ.