Tuesday, October 19, 2021

ದುಷ್ಕರ್ಮಿಗಳಿಂದ ಚೂರಿ ಇರಿತ: ಆಸ್ಪತ್ರೆಗೆ ದಾಖಲು

ಮಂಗಳೂರು: ವ್ಯಕ್ತಿಯೊಬ್ಬರಿಗೆ ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ನಗರದ ಮಾಲೆಮಾರ್ ಬಳಿ ಬುಧವಾರ ರಾತ್ರಿ ನಡೆದಿದೆ.


ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತದಿಂದ ಗಾಯಗೊಂಡಿದ್ದಾರೆ.

ರಾಜೇಶ್ ಎಂದಿನಂತೆ ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಮಾಲೆಮಾರ್ ಬಳಿ ಅಪರಿಚಿತ ದುಷ್ಕರ್ಮಿಗಳು ಬೆನ್ನಿಗೆ ಚೂರಿ ಇರಿದು ಪರಾರಿಯಾದರು.

ಗಾಯಗೊಂಡಿದ್ದ ರಾಜೇಶ್ ಅವರನ್ನು ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪಕ್ಕೆಲುಬು ಮತ್ತು ಸೊಂಟದ ಭಾಗಗಳಿಗೆ ಗಾಯವಾಗಿದೆ‌.

ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...