Connect with us

STATE

ಡಾ.ಇ.ಕೆ.ಎ.ಸಿದ್ದೀಕ್ ಅಡ್ಡೂರುಗೆ ಕೊಡಗು ಬ್ಲಡ್ ಡೋನರ್ಸ್‌ನಿಂದ ಸನ್ಮಾನ

Published

on

ಕೊಡಗು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೋವಿಡ್ ವಾರಿಯರ್ ಕರ್ನಾಟಕದ ಬಾಹುಬಲಿ ಖ್ಯಾತಿಯ ಲಯನ್ಸ್ ಡಾ. ಇ.ಕೆ.ಎ. ಸಿದ್ದೀಕ್ ಅಡ್ಡೂರು ರವರಿಗೆ ಕೊಡಗು ಬ್ಲಡ್ ಡೋನರ್ಸ್(ರಿ) ಕೊಡಗು ವತಿಯಿಂದ ಮಡಿಕೇರಿಯಲ್ಲಿ ನಿನ್ನೆ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಬ್ಲಡ್ ಡೋನರ್ಸ್ (ರಿ) ಅಧ್ಯಕ್ಷರಾದ ಖಲೀಲ್ ವಹಿಸಿದ್ದರು.
ಸನ್ಮಾನಿತ ಡಾ. ಇ.ಕೆ.ಎ.ಸಿದ್ದೀಕ್ ಅಡ್ಡೂರು ಮಾತನಾಡಿ, ಸಮಾಜದಲ್ಲಿ ಅದೆಷ್ಟೋ ಬಡ ರೋಗಿಗಳಿಗೆ ತುರ್ತು ರಕ್ತ ಪೂರೈಸುವಲ್ಲಿ ಕೊಡಗು ಬ್ಲಡ್ ಡೋನರ್ಸ್ ಯಶಸ್ವಿಯಾಗಿದೆ‌.

ನಿಮ್ಮ ಈ ಒಂದು ಮಹತ್ತರವಾದ ಕಾರ್ಯವೂ ಇನ್ನಷ್ಟು ಮುಂದುವರಿಯಲಿ ಎಂದು ಶುಭ ಹಾರೈಸಿದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಮಾಡಿದ ಸೇವೆಯನ್ನು ಗುರುತಿಸಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನೀಡುವ ಗೌರವ ಪ್ರಶಸ್ತಿಯನ್ನು ನಾಳೆ ಮಡಿಕೇರಿಯ ಕಾವೇರಿ ಸಭಾಂಗಣದಲ್ಲಿ ಸ್ವೀಕರಿಸಲಿದ್ದೇನೆ ಎಂದರು.


ತನ್ನನ್ನು ಗುರುತಿಸಿ ಸನ್ಮಾನಿಸಿದ ಕೊಡಗು ಬ್ಲಡ್ ಡೋನರ್ಸ್ (ರಿ) ತಂಡಕ್ಕೆ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಕೊಡಗು ಬ್ಲಡ್ ಡೋನರ್ಸ್ ಉಪಾಧ್ಯಕ್ಷರಾದ ಮೈಕಲ್ ವೇಗಸ್, ಕಾರ್ಯದರ್ಶಿಯಾದ ಮನ್ಸೂರ್ ಮತ್ತು ಪದಾಧಿಕಾರಿಗಳಾದ ಅಶ್ರಫ್, ಬಶೀರ್ ಮೊದಲಾದವರು ಉಪಸ್ಥಿತರಿದ್ದರು.

LATEST NEWS

ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

Published

on

ಮಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಆದ ನಂದಿನಿ ಜಾಗತಿಕ ಬ್ರಾಂಡ್ ಆಗಿ ಲಗ್ಗೆ ಇಟ್ಟಿದೆ. ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಕೂಟದಲ್ಲಿ ನಂದಿನಿ ಹೆಸರು ರಾರಾಜಿಸಲಿದೆ. ಹೌದು, ನಂದಿನಿ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಕೃಷಿಕರ ಶ್ರಮವನ್ನು ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ವಿಶ್ವಕ್ಕೆ ಸಾರುವ ಯತ್ನದಲ್ಲಿದೆ.


ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ :

ಜೂನ್ ೧ ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿ ಅಮೆರಿಕದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದು ಪ್ರದರ್ಶಿಸಲಾಗುತ್ತಿದೆ. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.


ಸಿಎಂ ಟ್ವೀಟ್ :

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ೨೦ ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಇದನ್ನೂ ಓದಿ : ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?!

ರಾಜ್ಯದ ಜನರ ಮನೆ-ಮನ ಗೆದ್ದಿರುವ ನಂದಿನಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಂದಿನಿ ಉತ್ಪನ್ನಗಳು ಕ್ರಿಕೆಟ್ ಆಟಗಾರರ ಹಾಗೂ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದಂತು ನಿಜ ಸಂಗತಿ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?

Published

on

ಹುಬ್ಬಳ್ಳಿ : ಅಂಜಲಿ ಅಂಬಿಗೇರ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಬ್ಬಳ್ಳಿ – ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ಹ*ತ್ಯೆ ಮಾಡಿದ್ದ.

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಆ ಬಳಿಕ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವನಾಥ್ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಭೀಕರವಾಗಿ ಯುವತಿಯ ಹ*ತ್ಯೆ ಮಾಡಿದ ಪೊಲೀಸರು ವಿಶ್ವನಾಥ್ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

ಅಂಜಲಿಯನ್ನು ಹ*ತ್ಯೆಗೈದ ಬಳಿಕ ವಿಶ್ವ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಅಂದುಕೊಂಡಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀ*ರ ಗಾ*ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Continue Reading

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

LATEST NEWS

Trending