Connect with us

    LATEST NEWS

    ಕೊಡೇರಿ ನಾಡದೋಣಿ ದುರಂತ ಮೂವರು ಮೀನುಗಾರರ ಮೃತ ದೇಹ ಪತ್ತೆ ..ಓರ್ವ ನಾಪತ್ತೆ

    Published

    on

    ಉಡುಪಿ : ಕೊಡೇರಿ ನಾಡದೋಣಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರಲ್ಲಿ ಇಂದು ಇಬ್ಬರು ಮೀನುಗಾರರ ಶವ ಪತ್ತೆಯಾಗಿದೆ. ಇದರೊಂದಿಗೆ ನಾಲ್ವರಲ್ಲಿ ಮೂವರು ಮೃತದೇಹ ಪತ್ತೆಯಾದಂತಾಗಿದೆ.


    ಇಂದು  ಪತ್ತೆಯಾದ ಎರಡು  ಮೃತದೇಹಗಳಲ್ಲಿ ಲಕ್ಷ್ಮಣ ಖಾರ್ವಿ ಹಾಗೂ ಶೇಖರ ಖಾರ್ವಿ ಅವರದ್ದೆಂದು ಗುರುತಿಸಲಾಗಿದೆ. ಈ ಮೃತ ದೇಹ ಘಟನೆ ನಡೆದ ಸ್ಥಳವಾದ ಕೊಡೇರಿ ಅಳಿವೆ ಬಾಗಿಲಿನಿಂದ ದಕ್ಷಿಣದ ಸುಮಾರು 5 ಕಿ.ಮೀ. ದೂರದಲ್ಲಿರುವ ಹಾದರಗೋಳಿ ಎಂಬಲ್ಲಿ ಪತ್ತೆಯಾಗಿದೆ.  ನಾಡದೋಣಿ ಬಂಡೆಗೆ ಡಿಕ್ಕಿಯಾಗಿ ನಾಲ್ವರು ನಾಪತ್ತೆಯಾಗಿದ್ದರು, ನಾಲ್ವರ ಪೈಕಿ ನಾಗರಾಜ ಖಾರ್ವಿ, ಲಕ್ಷ್ಮಣ ಖಾರ್ವಿ, ಶೇಖರ ಖಾರ್ವಿ ಶವ ಪತ್ತೆಯಾಗಿದ್ದು, ಮಂಜುನಾಥ ಖಾರ್ವಿ ಅವರ ಶವ ಇನ್ನೂ ಪತ್ತೆಯಾಗಿಲ್ಲ.

    ಈ ನಡುವೆ ಕೊಡೇರಿ ನಾಡದೋಣಿ ದುರಂತ ಪ್ರಕರಣ ನಡೆದ ಸ್ಥಳದಿಂದ ಅರ್ಧ ಕಿ.ಮೀ ದೂರದಲ್ಲಿ ಶವ ತೆಲುತ್ತಿರುವ ದೃಶ್ಯ ಡ್ರೋನ್ ಕ್ಯಾಮರಕ್ಕೆ ಸೆರೆಯಾಗಿದೆ. ಆದರೆ ಕಡಲು ಪ್ರಕ್ಷ್ಯುಬ್ದವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆಗೆ ತೊಡಕು ಉಂಟಾಗಿದೆ.
    ಹವಮಾನ ಇಲಾಖೆ ಈಗಾಗಲೇ ಕಡಲು ಪ್ರಕ್ಷುಬ್ದಗೊಂಡಿರುವ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ಹಿನ್ನಲೆ ನಾಪತ್ತೆಯಾಗಿರುವ ಮೀನುಗಾರರ ಹುಡುಕಾಟಕ್ಕೆ ಕಡಲಿಗಿಳಿಯಲು ಅಸಾಧ್ಯವಾಗಿದೆ. ಈ ಹಿನ್ನಲೆ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಸಮುದ್ರದ ದಡದಿಂದ ಡ್ರೋನ್ ಮೂಲಕ ಹುಡುಕಾಟ ನಡೆಸಿದ್ದರು. ಈ ವೇಳೆ ಶವ ಪತ್ತೆಯಾಗಿದೆ.

    ನಾಳೆ ಇನ್ನಷ್ಟು ಕಾರ್ಯಾಚರಣೆ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ನಾಪತ್ತೆಯಾಗಿರುವ ನಾಲ್ವರ ಪೈಕಿ‌ ಈವರೆಗೆ ದಡ ಸೇರಿದ್ದು 3 ಶವ. ಆದರೆ ಡ್ರೋಣ್ ಕಾರ್ಯಾಚರಣೆಯಲ್ಲಿ ಕಣ್ಣೆದುರು ಶವ ಕಾಣಿಸುತ್ತಿದ್ದರೂ ಸಮುದ್ರಕ್ಕಿಳಿದು ಕಾರ್ಯಾಚರಣೆ ನಡೆಸಲು ಅಸಾಧ್ಯವಾದ ಸ್ಥಿತಿ ಬಂದೊದಗಿದೆ. ಇದು ಕೊಡೇರಿ ದೋಣಿ ದುರಂತದ ಭಯಾನಕ ಸ್ಥಿತಿ ಕಡಲಿನ ಅಲೆಯಲ್ಲಿ ಎರಡು ಶವಗಳು ಸಿಕ್ಕಿಬಿದ್ದರೂ ಕಡಲ ಮಕ್ಕಳಿಗೆ ತಮ್ಮವರ ಶವಗಳನ್ನು ಮೇಲೆ ತರಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ.

    Click to comment

    Leave a Reply

    Your email address will not be published. Required fields are marked *

    International news

    ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!

    Published

    on

    ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ.


    ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಅದ್ಬುತವಾಗಿ ನಡೆಯುತ್ತದೆ. ಒಂದೇ ಒಂದು ದಿನದಲ್ಲಿ ಇಡೀ ಲೋಕಸಭಾ ಚುನಾವಣೆಯ ಮತ ಎಣಿಕೆ ಮಾಡಿದ ಶ್ರೇಯಸ್ಸು ಭಾರತದ್ದು ಎಂದಿದ್ದಾರೆ.

    ಇದನ್ನೂ ಓದಿ: ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
    ಕ್ಯಾಲಿಫೋರ್ನಿಯಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿರುವ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ಪೊಸ್ಟ್ ಹಾಕಿದ್ದಾರೆ. ಅದರ ಅಡಿಬರಹದಲ್ಲಿ, ಭಾರತದಲ್ಲಿ ಚುನಾವಣೆ ಎಂದರೆ ವಂಚನೆಯೇ ಮೊದಲ ಗುರಿ ಇರುವಲ್ಲಿ ಒಂದೇ ಒಂದು ದಿನದಲ್ಲಿ 64 ಕೋಟಿ ಮತಗಳನ್ನು ಎಣಿಕೆ ಮಾಡಿದ್ದಾರೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಕೂಡ ಮತಗಳು ಎಣಿಕೆ ಆಗುತ್ತಲೇ ಇವೆ ಎಂದು ಬರೆದಿದ್ದಾರೆ.ಕ್ಯಾಲಿಫೋರ್ನಿಯಾದಲ್ಲಿ

    ಮತ ಎಣಿಕೆ ಕಾರ್ಯ ವಿಳಂಬ ಯಾಕೆ :
    ಅಮೆರಿಕಾದಲ್ಲಿ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದೆ. ಇದನ್ನು ಎಣಿಕೆ ಮಾಡುವ ಅನೇಕ ರೀತಿಯ ಪ್ರಕ್ರಿಯೆಗಳನ್ನು ಮಾಡುವ ಕಾರಣ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಂತಹ ದೊಡ್ಡ ದೊಡ್ಡ ನಗರಗಳಲ್ಲಿ ಈ ಮೇಲ್ ಇನ್ ವೋಟಿಂಗ್ ಗಳು ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ವಿಳಂಬ ನೀತಿಯನ್ನು ಎಲನ್ ಮಸ್ಕ್ ಟೀಕಿಸಿ ಭಾರತವನ್ನು ಹೋಗಳಿದ್ದಾರೆ.
    ಅಮೇರಿಕಾದಲ್ಲಿ ಹಿಂದಿನಿಂದಲೂ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದ್ದು, ಈಗಲೂ ಮುಂದುವರಿದುಕೊಂಡು ಬಂದಿದೆ.

    Continue Reading

    LATEST NEWS

    ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !

    Published

    on

    ಮಂಗಳೂರು: ತಮಿಳಿನ ಶಿವ ಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಚಿತ್ರ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಾಗಲೇ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.


    ನಟಿ ಸಾಯಿ ಪಲ್ಲವಿಯವರು ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ತನ್ನ ಪ್ರತಿಭೆಯಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಸದಾ ಒಂದಲ್ಲಾ ಒಂದು ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.

    ಇದನ್ನೂ ಓದಿ: ಹಾಸಿಗೆ ಹಿಡಿದಿದ್ದ 80ರ ಅಜ್ಜಿ ಮೇಲೆಯೂ ವರದಕ್ಷಿಣೆ ಕೇಸ್‌: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌
    ರಣಬೀರ್ ಕಪೂರ್, ಯಶ್ ನಟನೆಯ ಹಿಂದಿಯ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನಂತರ ಅಮೀರ್ ಖಾನ್ ನಿರ್ಮಾಣ ಮಾಡಿ ಅವರ ಮಗ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
    ಈಗಾಗಲೇ, ನಟ ನಾಗಚೈತನ್ಯ ನಟಿಸಿರುವ ‘ತಾಂಡೇಲ್’ ಸಿನಿಮಾದಲ್ಲೂ ಸಾಯಿ ಪಲ್ಲವಿಯವರು ನಟಿಸಿದ್ದಾರೆ. ಇದರ ಚಿತ್ರೀಕರಣ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ. ಇನ್ನೂ ಸುಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸಲಿದ್ದಾರೆ. ಇದರಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸಲಿದ್ದಾರೆ.
    ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ, ಪಕ್ಕಾ ಫ್ಯಾಮಿಲಿ ಗರ್ಲ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗಾಗಿಯೇ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

    Continue Reading

    International news

    80ರ ಪ್ರಾಯದಲ್ಲೂ ಅಜ್ಜಿಯ ಟ್ರೆಂಡಿಂಗ್ ಡ್ರೆಸ್ ಗೆ ಎಲ್ಲರೂ ಬೋಲ್ಡ್ !

    Published

    on

    ಮಂಗಳೂರು : ವಯಸ್ಸು ಎಂಬುದು ಕೇವಲ ಅಂಕೆಗಳು ಅಷ್ಟೇ. ಸಾಧನೆಗೆ ವಯಸ್ಸು ಅಡ್ಡಿ ಅಲ್ಲ, ಅದು ನೆಪ ಅಷ್ಟೇ. 80ರ ವಯಸ್ಸಿನಲ್ಲೂ ಫ್ಯಾಶನ್ ಲೋಕವನ್ನೆ ನಿದ್ದೆಗೆಡಿಸಿರುವ ಈ ಅಜ್ಜಿಯ ಸ್ಟೋರಿ ತುಂಬಾ ಕುತೂಹಲದಾಯಕವಾಗಿದೆ.


    ‘ಆಗದು ಎಂದು ಕೈ ಕಟ್ಟಿ ಕುಳಿತರೆ ಆಗದು ಎಂದು ಕೆಲಸವ’ ಎಂಬ ಹಾಡಿನ ಸಾಲಿನಂತೆ ಈ ಅಜ್ಜಿಗೆ ತನ್ನ ಮೊಮ್ಮಗಳೇ ಸ್ಪೂರ್ತಿ. ಕೆಲವೊಬ್ಬರು ಅಜ್ಜಿಯಂದಿರು, ಮೊಮ್ಮಕ್ಕಳು ಏನೇ ಹೇಳಿದರು ಅದನ್ನು ಮಾಡುತ್ತಾರೆ. ಹಾಗೆನೇ ಈ ಅಜ್ಜಿ ಕೂಡ ತನ್ನ ಮೊಮ್ಮಗಳ ಆಸೆ ಈಡೇರಿಸಲು ಹೋಗಿ ಇಂದು ಲಕ್ಷಾಂತರ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.


    ಜಾಂಬಿಯಾ ದೇಶದ 80ರ ಹರೆಯದ ಈ ವೃದ್ದೆಯ ಹೆಸರು ಮಾರ್ಗರೇಟಾ ಚೋಲಾ. ಕಟ್ಟಿಗೆ ಚೇರಲ್ಲಿ ಕೂತು, ಕಣ್ಣಿಗೆ ಸ್ಟೈಲಿಶ್ ಗ್ಲಾಸ್ ಹಾಕಿಕೊಂಡು, ಬಣ್ಣ ಬಣ್ಣದ ಕಾಸ್ಟ್ಯೂಮ್ ಗಳು ಹಾಕಿಕೊಂಡಿರುವುದನ್ನು ನೋಡಿದರೆ ಎಂಥವರಿಗೂ, ಒಂದು ಕ್ಷಣ ರೋಮಾಂಚನಕಾರಿಯಾಗಬೇಕು. ಹಾಗಂತ ಇವರು ಯಾವುದೋ ರಾಯಲ್ ಫ್ಯಾಮೀಲಿಗೆ ಸೇರಿದವರಲ್ಲ. ಮಾರ್ಗರೇಟ್ ಚೋಲಾ 12-13 ವರ್ಷದಲ್ಲಿಯೇ ಶಿಕ್ಷಣಕ್ಕೆ ಗುಡ್ ಬೈ ಹೇಳಿ, 30ನೇ ವಯಸ್ಸಿಗೆ ಮದುವೆಯಾಗಿ ಬಡತನ, ಕಷ್ಟ ಎಲ್ಲವನ್ನೂ ಕಂಡವರು.

    ಇದನ್ನೂ ಓದಿ: ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ

    ಆದರೆ ಮೊಮ್ಮಗಳಾದ ಡಿಯಾನಾ ಕುಂಬಾ ನ್ಯೂಯಾರ್ಕ್ ಮೂಲದ ಸ್ಟೈಲಿಸ್. ಈಕೆಗೆ, ತನ್ನ ಅಜ್ಜಿಯನ್ನು ಹೊಸ ಹೊಸ ಅವತಾರದಲ್ಲಿ ನೋಡಲು ಇಷ್ಟವಂತೆ. ಈಗಾಗೀ ಹೊಸ ಹೊಸ ಬಗೆಯ ಕಾಸ್ಟ್ಯೂಮ್ ಹಾಕಿ ಖುಷಿ ಪಡುತ್ತಾರೆ. ಈ ಅಜ್ಜಿಯ ಜನಪ್ರೀಯತೆ ಎಷ್ಟರ ಮಟ್ಟಿಗೆ ಇದೆ ಅಂದ್ರೆ, ಅಂತರಾಷ್ಟ್ರೀಯ ಸುದ್ದಿ ಮಾಧ್ಯಮಗಳೇ ಸಂದರ್ಶನ ಮಾಡಲು ಬರುತ್ತಿವೆ. ತನ್ನ ಫ್ಯಾಶನ್ ಬಗ್ಗೆ ಮಾರ್ಗರೇಟ್ ಹೆಳೋದು ಹೀಗೆ, ನಾನು ಈ ರೀತಿಯ ಉಡುಗೆ-ತೊಡುಗೆಗಳನ್ನು ಹಾಕಿಕೊಳ್ಳುವುದರಿಂದ ನನ್ನನ್ನು ನಾನು ಉಳಿದವರಿಗಿಂತ ಭಿನ್ನ ಎಂದುಕೊಳ್ಳುವಂತಹ ಭಾವ ಬರುತ್ತದೆ. ನಾನು ಇಂತಹ ಬಟ್ಟೆಗಳನ್ನು ಧರಿಸಿಕೊಳ್ಳುತ್ತಾ ಮತ್ತಷ್ಟು ಜೀವಂತಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

    ಮಾರ್ಗರೇಟ್ ರವರ ಈ ಫ್ಯಾಶನ್ ಫೋಟೋಗಳಿಗೆ, ಕ್ಲೀನ್ ಬೊಲ್ಡ್ ಆಗಿರುವ ಅವರ ಅಭಿಮಾನಿಗಳು ಅಜ್ಜಿಯನ್ನು ಕೊಂಡಾಡುತ್ತಿದ್ದಾರೆ. ಇವರಿಗೆ ಜಗತ್ತಿನಾದ್ಯಂತ ಅಭಿಮಾನಿಗಳು ಇದ್ದಾರೆ ಮತ್ತು ಇನ್ ಸ್ಟಾ ಗ್ರಾಮ್ ನಲ್ಲಿ 1 ಲಕ್ಷ 13 ಸಾವಿರದಷ್ಟು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
    ನಿಮ್ಮ ವಯಸ್ಸು, ನಿಮ್ಮ ಗುರಿ ಸಾಧನೆಗೆ ಅಡ್ಡಿಯಾಗುವುದಿಲ್ಲ. ಗುರು ಮತ್ತು ಗುರಿ ಎರಡು ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುವುದಕ್ಕೆ ಮಾರ್ಗರೇಟ್ ಚೋಲಾ ನಿದರ್ಶನ.

    Continue Reading

    LATEST NEWS

    Trending