Connect with us

    DAKSHINA KANNADA

    ಇಂದಿನಿಂದ 3ದಿನಗಳ ಕಾಲ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜಿಪಿಲ್‌ ಜಾಲಿ ರೈಡ್…

    Published

    on

    ಮಂಗಳೂರು: ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಫುಜ್ಲಾನಾ ಜಿಪಿಎಲ್ ಉತ್ಸವ-2022 ಕಾರ್ಯಕ್ರಮವನ್ನು ಇಂದು ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

    ಕ್ರಿಕೆಟ್ ಪಂದ್ಯಾಟಗಳಿಗೆ ಗಣ್ಯರು ಚಾಲನೆ ನೀಡಲಿದ್ದಾರೆ.
    ಈ ಬಾರಿಯ ಟೂರ್ನಿಯಲ್ಲಿ ‘ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ.

    ಜಿಪಿಎಲ್ ಉತ್ಸವದಲ್ಲಿ 25 ಸಾವಿರದಷ್ಟು ಜಿಎಸ್‌ಬಿ ಸಮುದಾಯದವರು ಭಾಗವಹಿಸುವ ನಿರೀಕ್ಷೆಯಿದೆ.


    ಇಂದಿನಿಂದ ಫೆ. 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ ಕರಾವಳಿ ಕರ್ನಾಟಕವನ್ನು ಒಳಗೊಂಡ 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.


    ಜಿಪಿಎಲ್ ಉತ್ಸವದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಒಂದು ಭಾಗವಾದರೆ, ಇಡೀ ಉತ್ಸವ ವೈವಿಧ್ಯತೆ ಮೂಲಕ ಗಮನ ಸೆಳೆಯಲಿದೆ.


    ಹೆಲಿ ಟೂರಿಸಂ ವೈಶಿಷ್ಟ್ಯತೆ: ಶುಕ್ರವಾರದಿಂದ ಭಾನುವಾರದವರೆಗೆ ಹೆಲಿ ಟೂರಿಸಂ ಅವಕಾಶವನ್ನು ನೀಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಎಟಿಸಿ (ಏರ್‌ಟ್ರಾಫಿಕ್ ಕಂಟ್ರೋಲ್) ನಿಯಂತ್ರಣದಲ್ಲಿ ಈ ಹೆಲಿಕಾಪ್ಟರ್ ಪ್ರಯಾಣಿಸಲಿದ್ದು,

    ಒಬ್ಬರಿಗೆ 10 ನಿಮಿಷಕ್ಕೆ 4 ಸಾವಿರ ರೂ. ದರ ವಿಧಿಸಲಾಗಿದೆ. ಏಕಕಾಲಕ್ಕೆ 6 ಮಂದಿಗೆ ಸಂಚರಿಸಬಹುದಾಗಿದೆ.

    ಫುಜ್ಲಾನಾ ಜಿಪಿಎಲ್ ಟೂರ್ನಿಯ ಮುಖ್ಯಸ್ಥರಾದ ನರೇಶ್ ಶೆಣೈ ಹೇಳುವಂತೆ ‘ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಿಂದ ಹೊರಟ ಈ ಹೆಲಿಕಾಪ್ಟರ್ ಉಳ್ಳಾಲ ಸೇತುವೆ, ಧಕ್ಕೆ, ಬೆಂಗರೆ, ಮಂಗಳೂರು ನಗರದಾದ್ಯಂತ ಸುತ್ತಾಡಿ ಮತ್ತೆ ಸಹ್ಯಾದ್ರಿ ಕ್ಯಾಂಪಸ್‌ನಲ್ಲೇ ಭೂಸ್ಪರ್ಶ ಆಗಲಿದೆ.

    ಸಾರ್ವಜನಿಕರ ಸ್ಪಂದನೆಯನ್ನು ಗಮನಿಸಿ ಸೋಮವಾರದವರೆಗೆ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ’.


    120ಕ್ಕೂ ಅಧಿಕ ಮಂದಿ ಬುಕ್ಕಿಂಗ್: ಹೆಲಿ ಟೂರಿಸಂಗೆ ಈಗಾಗಲೇ 120ಮಂದಿ ಬುಕ್ಕಿಂಗ್ ಮಾಡಿದ್ದು, ಅವರಿಗೆ ಸಮಯ ನಿಗದಿಪಡಿಸುವ ಅವಧಿಯಲ್ಲಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

    ಬೆಳಗ್ಗೆ 10ಗಂಟೆಯಿಂದ ಸಂಜೆ 6.00ಗಂಟೆಯವರೆಗೆ ಈ ಹೆಲಿಕಾಪ್ಟರ್ ನಗರ ಸಂಚಾರ ನಡೆಸಲಿದೆ.


    ಬೋಟಿಂಗ್, ಕಿಡ್‌ರೆನ್: ಹೆಲಿ ಟೂರಿಸಂ ಮಾತ್ರವಲ್ಲದೆ ನೇತ್ರಾವತಿಯಲ್ಲಿ ಬೋಟಿಂಗ್ ವ್ಯವಸ್ಥೆ, ಮಕ್ಕಳಿಗೆ ಆಟವಾಡಲು ಕಿಡ್‌ರೆನ್ ನಿರ್ಮಿಸಲಾಗಿದೆ. ಗೂಡುದೀಪ ಸ್ಪರ್ಧೆ, ಕಸದಿಂದ ರಸ,

    ಆಭರಣಗಳ ತಯಾರಿ, ಮೆಹಂದಿ, ಕ್ಲೇ ಮಾಡೆಲಿಂಗ್, ಹೂ ಅಲಂಕಾರ, ಕೇಶ ವಿನ್ಯಾಸ, ಡ್ರಾಯಿಂಗ್, ಕೊಲಾಜ್, ಜಿಎಸ್‌ಬಿ ಟ್ಯಾಲೆಂಟ್, ಅಡುಗೆ, ಪೋಸ್ಟರ್ ತಯಾರಿಕೆ,

    ಫ್ಯಾನ್ಸಿ ಡ್ರೆಸ್, ಟಗ್ ಆಫ್ ವಾರ್, ರಂಗೋಲಿ, ಮ್ಯೂಸಿಕ್ ವರ್ಕ್ ಶಾಪ್, ಹೌಸಿ ಹೌಸಿ ಸಹಿತ ಇನ್ನು ಹಲವು ಬಗೆಯ ಸ್ಪರ್ಧೆ ಆಯೋಜಿಸಲಾಗಿದೆ.

    ಜಿಪಿಎಲ್‌ನ ಆಕರ್ಷಣೆಗಳು (ಬಾಕ್ಸ್)
    * ಖಾದ್ಯಗಳನ್ನು ಉಣಬಡಿಸಲು ವಿಶಾಲವಾದ ಫುಡ್ ಕೋರ್ಟ್ ವ್ಯವಸ್ಥೆ ಮಾಡಲಾಗಿದ್ದು, 100ಕ್ಕೂ ಅಧಿಕ ಬಗೆಯ ತಿಂಡಿ-ತಿನಸುಗಳು, ಐಸ್ ಕ್ರೀಂಗಳು, ಹಣ್ಣುಹಂಪಲುಗಳ ಸಹಿತ ಮೊಕ್‌ಟೇಲ್ ರುಚಿ ಸವಿಯಬಹುದಾಗಿದೆ.


    * ಇನ್ನು ಕಲಾತ್ಮಕ ಮನಸ್ಸಿನ ಮಹಿಳೆಯರಿಗೆ ಮತ್ತು ಚಿಣ್ಣರಿಗಾಗಿ ಮತ್ತು ಪುರುಷರಿಗಾಗಿ ನಾನಾ ಸ್ಪರ್ಧೆಗಳು, ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

    * ಗೋವಾ ಮತ್ತು ಕೊಚ್ಚಿ ಸಮುದ್ರ ತೀರಗಳಲ್ಲಿ ಮಾತ್ರ ಕಂಡು ಬರುವ ಫ್ಲೆ ಬೋರ್ಡನ್ನು ಈ ಬಾರಿ ಪರಿಚಯಿಸಲಾಗಿದೆ.
    * ತಜ್ಞರಿಂದ ಸಂವಾದ, ಶಾಪಿಂಗ್ ಮೇಳಾ, ಜಲಕ್ರೀಡೆ, ವೈವಾಹಿಕ (ಜ್ಯೋತಿಷ್ಯ ಸಹಿತ) ಸಂಬಂಧ, ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಕಲೆ, ಸಂಸ್ಕೃತಿ ಪ್ರದರ್ಶನ ಕಾರ್ಯಕ್ರಮಗಳು.

    * ಜಿಎಸ್‌ಬಿ ಸಮುದಾಯದಲ್ಲಿ ಗೃಹ ಉತ್ಪನ್ನಗಳನ್ನು ತಯಾರಿಸಿ ಬದುಕು ಕಟ್ಟಿಕೊಂಡಿರುವ ಕಿರುವ್ಯಾಪಾರಿಗಳಿಗಾಗಿ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending