Connect with us

    ಕೊರೊನಾ ಬಗ್ಗೆ ಬೆಚ್ಚಿಬೀಳಿಸುವ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ: ಜಗತ್ತಿಗೆ ಕಾದಿದೆಯಾ ಅಪಾಯ.?

    Published

    on

    ಕೊರೊನಾ ಬಗ್ಗೆ ಬೆಚ್ಚಿಬೀಳಿಸುವ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ: ಜಗತ್ತಿಗೆ ಕಾದಿದೆಯಾ ಅಪಾಯ.?

    ಬೆಂಗಳೂರು: ಕೋವಿಡ್ 19 ವೈರಸ್ ನಿಗ್ರಹಕ್ಕೆ ನಿಸರ್ಗದಿಂದಲೇ ಔಷಧ ದೊರೆಯಬೇಕು. ಈ ವೈರಾಣುವಿನಿಂದ ಭೂಪಟದಲ್ಲಿ ಒಂದು ದೇಶ ಸಂಪೂರ್ಣವಾಗಿ ಅಳಿಸಿಹೋಗುವ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

    ತಾಲ್ಲೂಕಿನ ಹಾರನಹಳ್ಳಿ ಸುಕ್ಪೇತ್ರ ಕೋಡಿಮಠ ಮಹಾ ಸಂಸ್ಥಾನದಲ್ಲಿ ಮಾತನಾಡಿದ ಅವರು ದೊಡ್ಡ ದೊಡ್ಡ ನಗರಗಳಿಗೆ ಕೋವಿಡ್ 19 ವೈರಸ್ಸಿನಿಂದ ಅಪಾಯ ತಪ್ಪಿದ್ದಲ್ಲ.

    ಸಾಧು ಸಂತರು ಜಪತಪಗೈದಿರುವ ಪುಣ್ಯಭೂಮಿ ಭಾರತಕ್ಕೆ ಕೋವಿಡ್ 19 ವೈರಸ್ಸಿನಿಂದ ಹೆಚ್ಚಿನ ಹಾನಿ ಹಾಗೂ ತೊಂದರೆ ಇಲ್ಲ.

    ಈ ರೋಗವನ್ನು ನಿಯಂತ್ರಿಸಲಾಗದೇ ಅನೇಕರು ತಮ್ಮ ಪಟ್ಟ ಕಳೆದುಕೊಳ್ಳಲಿದ್ದಾರೆ. ಜಗತ್ತಿನಲ್ಲಿ ಇನ್ನೂ ಕೋವಿಡ್ 19 ವೈರಸ್ ಹೆಚ್ಚು ವ್ಯಾಪಿಸಲಿದೆ ಎಂದರು.

    ಸಲಹೆ: ಅಕ್ಷಯ ನಾಮ ತಿಥಿವರೆಗೆ ಅಬ್ಬರಿಸಿ ಮೇ ತಿಂಗಳ ವೇಳೆಗೆ ಒಂದು ಹಂತ ತಲುಪಲಿದೆ. ಎಲ್ಲರೂ ರಾತ್ರಿ ಮಲಗುವಾಗ ಬಿಲ್ವಾ ಪತ್ರೆ ಹಾಗೂ ಬೇವಿನ ಸೊಪ್ಪು ಗಳನ್ನು ಹತ್ತಿರದಲ್ಲಿಟ್ಟುಕೊಂಡು ಮಲಗಬೇಕು ಹಾಗೂ ಮನೆಯಲ್ಲಿ ಸದಾ ದೀಪ ಉರಿಸುತ್ತಿರಬೇಕು .

    ಮುಂದಿನ ದಿನಗಳಲ್ಲಿ ದೇಶ ಮತ್ತು ರಾಜ್ಯದಲ್ಲಿ ಹೊಸ ಹೊಸ ಕಾನೂನುಗಳು ಜಾರಿಯಾಗಲಿವೆ. ಅವುಗಳ ಸಾಧಕ ಬಾಧಕಗಳ ಬಗ್ಗೆ ಚಿಂತಿಸಿ ಅರಸ ಆ ಕಾನೂನುಗಳನ್ನು ಜಾರಿಗೊಳಿಸಿದರೆ ಒಳಿತು.

    ಇಲ್ಲದಿದ್ದರೆ ಪ್ರಜೆಗಳು ದಂಗೆ ಏಳುವ ಸಾಧ್ಯತೆ ಹೆಚ್ಚು. ಇದರಿಂದ ಅರಸನ ಓಟಕ್ಕೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದರು.

    ಮುಂದಿನ ದಿನಗಳಲ್ಲಿ ಗಿಡ ಮರ ಪ್ರಾಣಿಗಳಿಗೂ ಅಪ್ಪಳಿಸುವ ಸಾಧ್ಯತೆಯಿದೆ ಎಂದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಹೇಳದೇ ಅವರ ಬಗ್ಗೆ ಮಾರ್ಮಿಕವಾಗಿ ಮಾತನಾಡಿದರು.

    ’ದೊರೆ ಮನೆಗೆ ವಾಸ ಹೋಗಿರುವುದನ್ನು (ಕಾವೇರಿ ನಿವಾಸಕ್ಕೆ) ಮರು ಪರಿಶೀಲನೆ ಮಾಡಿದರೆ ಒಳ್ಳೆಯದು. ಆ ಮನೆಯಿಂದ ಸುಖದುಃಖ ಕಾಡುತ್ತದೆ’ ಎಂದು ಎಚ್ಚರಿಸಿದರು.

    ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಲಿದೆ. ಇದರಿಂದ ಗ್ರಾಮೀಣ ನಿವಾಸಿಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಬಹುದು.

    ಅಶ್ಚಿಜದಿಂದ ಕಾರ್ತಿಕದವರೆಗೆ ಗ್ರಾಮ ವಾಸಿಗಳಿಗೆ ತೊಂದರೆ, ಮನೆಯಲ್ಲಿ ದೀಪ ಹಚ್ಚಿ ಪ್ರಾರ್ಥನೆ ಮಾಡಿದರೆ ಒಳ್ಳೆಯದು.

    ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಗೆ ಸಾರ್ವಜನಿಕರು ಸಹಕರಿಸಬೇಕು, ಇಲ್ಲದಿದ್ದರೆ ಸಾವಿಗೆ ಆಹ್ವಾನ ನೀಡಿದಂತಾಗುತ್ತದೆ.

    ಭೂಮಿ ಕಂಪಿಸಬಹುದು ಪಂಚಭೂತಗಳಿಂದ ತೊಂದರೆ ಇದೆ ಸಮುದ್ರದ ಒಡಲು ಬಿಚ್ಚಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ

    Published

    on

    ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.

     

    ಶಾಲಾ ಮಕ್ಕಳಿಗೆ ರಜೆ ಘೋಷಣೆ:
    ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್‌ಸಿ ಹಾಗೂ ಐಎಸ್‌ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending