Connect with us

    FILM

    ಬಾಲಿವುಡ್ ತಾರೆಯರನ್ನು ಹಿಂದಿಕ್ಕಿದ ಕೊಹ್ಲಿ ಬ್ರ್ಯಾಂಡ್ ಮೌಲ್ಯ !

    Published

    on

    ಮಂಗಳೂರು: ಭಾರತೀಯ ಕ್ರಿಕೆಟಿಗರ ಪ್ರದರ್ಶನ ಮತ್ತು ಕ್ರಿಕೆಟಿಗಿರುವ ಭಾರೀ ಸಂಖ್ಯೆಯ ಅಭಿಮಾನಿಗಳು ಇದು ಬಾಲಿವುಡ್ ತಾರೆಯರಿಗಿಂತ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ ಗಣನೀಯವಾಗಿ ಹೆಚ್ಚಳವಾಗುವಂತೆ ಮಾಡಿದೆ.


    ಮುಂಬೈ ಮೂಲದ ಹಂಸ ಸಂಶೋಧನ ಸಂಸ್ಥೆಯ ಬ್ರ್ಯಾಂಡ್ ಎಂಡೋರ್ಸರ್ ವರದಿ-2024ರ ಪ್ರಕಾರ, ಭಾರತೀಯ ಕ್ರಿಕೆಟಿಗರ ಮೌಲ್ಯ ಬಾಲಿವುಡ್ ತಾರೆಯರಿಗಿಂತ ಮೇಲೇರುತ್ತಿದೆ.

    ಇದನ್ನೂ ಓದಿ: ನೀವು ಕೂಡ ಕ್ರಿಕೆಟ್ ಅಂಪೈರ್ ಆಗಬಹುದು; ಲಕ್ಷ ಲಕ್ಷ ಸಂಬಳ !
    ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರ ನಂತರದ ಎರಡು ಸ್ಥಾನಗಳಲ್ಲಿ ಎಂ.ಎಸ್. ಧೋನಿ ಮತ್ತು ಸಚಿನ್ ತೆಂಡುಲ್ಕರ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ತಾರೆ ಶಾರುಖ್ ಖಾನ್ ಗೆ ನಾಲ್ಕನೇ ಸ್ಥಾನ ಲಭಿಸಿದೆ.

    ಇನ್ನೂ ಅಕ್ಷಯ್ ಕುಮಾರ್, ಅಮಿತಾಭ್ ಬಚ್ಚನ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಇವರೆಲ್ಲ 10 ಅಗ್ರ ಬ್ರ್ಯಾಂಡ್ ಮೌಲ್ಯ ಹೊಂದಿರುವ ತಾರೆಯರು.

    FILM

    ಉದ್ಯಮಿ ಪ್ರತ್ಯಕ್ಷ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಂದನಾ ಅನಂತಕೃಷ್ಣ

    Published

    on

    ‘ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.

    ಗುರುಹಿರಿಯರು ನಿಶ್ಚಿಯಿಸಿದ ಮದುವೆ ಇದಾಗಿದ್ದು, ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ನಟಿಯ ನಿಶ್ಚಿತಾರ್ಥ ಸರಳವಾಗಿ ನಡೆದಿತ್ತು. ಇಂದು ಅದ್ಧೂರಿಯಾಗಿ ಚಂದನಾ ಮತ್ತು ಪ್ರತ್ಯಕ್ಷ್ ಮದುವೆ ನಡೆದಿದೆ.

    ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್‌ಕುಮಾರ್ ಜೊತೆ ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದರು. ಆರಂಭ, ಅಗ್ನಿಪರ್ವ, ಶುಭ ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.

    ನ್ನೂ ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಜೊತೆಗೆ ‘ಭಾವ ತೀರ ಯಾನ’ ಸಿನಿಮಾದಲ್ಲಿ ಧೃತಿ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ.

    Continue Reading

    FILM

    ಖ್ಯಾತ ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಬೆ*ದರಿಕೆ ಕರೆ

    Published

    on

    ಮಂಗಳೂರು/ಬೆಂಗಳೂರು : ಕಿರುತೆರೆ ನಟಿ, ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ತಾಯಿಗೆ ಕಿ*ಡಿಗೇ*ಡಿಯೊಬ್ಬ ಕರೆ ಮಾಡಿ ಬೆ*ದರಿಕೆಯೊಡ್ಡಿದ್ದಾನೆ. ಈ ಬಗ್ಗೆ ನಟಿಯ ತಾಯಿ  ಪದ್ಮಲತಾ ಮಾದನಾಯಕನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

    ದೂರಿನಲ್ಲಿ ಏನಿದೆ?

    ತನಗೆ ಬೆ*ದರಿಕೆ ಕರೆ ಬಂದಿರುವ ಬಗ್ಗೆ ಪದ್ಮಲತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಬಗ್ಗೆ ಎಫ್ ಐ ಆರ್ ದಾಖಲಾಗಿದೆ. ನನ್ನ ಮಗಳು ಚಲನಚಿತ್ರ ನಟಿಯಾಗಿದ್ದು, 8 ತಿಂಗಳ ಹಿಂದೆ ದೀಪಕ್ ಕುಮಾರ್ ಎಂಬರ ಜೊತೆ ವಿವಾಹವಾಗಿದೆ. ಮಗಳು, ಅಳಿಯ 1 ತಿಂಗಳ ಹಿಂದೆ ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಅಪರಿಚಿತನೋರ್ವ ಕರೆ ಮಾಡಿ ನಿಮ್ಮ ಮಗಳಿಗೆ ಯಾಕೆ ಮದುವೆ ಮಾಡಿದ್ರಿ. ನಿಮ್ಮ ಅಳಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರಿಗೆ ಮೋಸ ಮಾಡಿರುತ್ತಾನೆ ಎಂದಿದ್ದ. ನಾನು ಹಾಗೇನಾದರೂ ಇದ್ದರೆ ಕಾನೂನಾತ್ಮಕವಾಗಿ ದೂರು ನೀಡುವಂತೆ ಹೇಳಿದ್ದೆ.

    ಕೆಲವು ದಿನಗಳ ಬಳಿಕ ನನ್ನ ಮಗಳು ದೀಪಿಕಾ ದಾಸ್ ಗೂ ಕರೆ ಮಾಡಿದ್ದ. ನಿನ್ನ ಪತಿ ಅಕ್ರಮ ಚಟುವಟಿಕೆಗಳಿಂದ ಬಡಾವಣೆಗೆ ಮೋಸ ಮಾಡಿದ್ದು ನಿಮಗೆ ತಿಳಿದಿಲ್ಲವೆ. ನೀವು ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಆಣೆ ಮಾಡುವಂತೆ ಕೇಳಿದ್ದ.  ಈ ಆರೋಪಗಳೆಲ್ಲ ಸುಳ್ಳು ಇದಕ್ಕೆ ಪುನೀತ್ ರಾಜ್ ಕುಮಾರ್ ಹೆಸರು ತರಬೇಡಿ ಎಂದಿದ್ದಳು. ನೀವೂ ಕಾನೂನು ರೀತಿ ದೂರು ನೀಡಿ ಎಂದು ಹೇಳಿರುತ್ತಾಳೆ. ನಿಮ್ಮ ಹೆಸರಿಗೆ ಧಕ್ಕೆ ತರುತ್ತೇನೆ. ನನಗೆ ಹಣ ನೀಡಿ ಎಂದಿದ್ದ. ಹಣ ನೀಡದೆ ಇದ್ದರೆ ನಿಮ್ಮ ಹೆಸರು ಬರೆದು ಆ*ತ್ಮಹ*ತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದ.
    ಇದನ್ನೂ ಓದಿ : ಮೂರು ತಿಂಗಳ ಹಿಂದೆ ಪ್ರೀತಿಸಿ ಮದುವೆ.. ಮಗಳು ಕೈಹಿಡಿದ ಅಳಿಯನ ಜೀವವನ್ನೇ ತೆಗೆದ ಪೋಷಕರು..!

    ನನ್ನ ಮಗಳು ಮತ್ತು ಅಳಿಯನ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿರುತ್ತಾನೆ. ಪದೇ ಪದೇ ಫೋನ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಸಾಯುವುದಾಗಿ ಬೆದರಿಕೆ ಇಟ್ಟಿದ್ದಾನೆ. ಯಶವಂತ ಎಂಬಾತನ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.  ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    FILM

    15 ವರ್ಷದ ಲವ್; ಬಾಯ್‌ಫ್ರೆಂಡ್ ಜೊತೆ ಕೀರ್ತಿ ಸುರೇಶ್ ಫೋಟೋ ವೈರಲ್ !!

    Published

    on

    ತಮೀಳಿನ ಖ್ಯಾತ ನಟಿ ಕೀರ್ತಿ ಸುರೇಶ್ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಇದ್ದಾರೆ. ಅವರ ಬಾಯ್​ಫ್ರೆಂಡ್ ಯಾರು ಎಂಬ ಕುತೂಹಲ ಅನೇಕರಿಗೆ ಇತ್ತು. ಕೊನೆಗೂ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೀರ್ತಿ ಸುರೇಶ್ ಹೊಸ ಪೋಸ್ಟ್ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    ಕೀರ್ತಿ ಹಾಗೂ ಮತ್ತೋರ್ವ ವ್ಯಕ್ತಿ ನಿಂತಿರುವ ಫೋಟೋನ ಹಂಚಿಕೊಳ್ಳಲಾಗಿದೆ. ಈ ಫೋಟೋದಲ್ಲಿ ಇರುವ ವ್ಯಕ್ತಿ ಆ್ಯಂಟನಿ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಶೀಘ್ರವೇ ಇವರು ವಿವಾಹವಾಗುತ್ತಾರೆ ಎನ್ನಲಾಗಿದೆ. ಸದ್ಯ ಕೀರ್ತಿ ಸುರೇಶ್ ಈ ಫೋಟೋಗೆ, ‘ಹದಿನೈದು ವರ್ಷ ಹಾಗೂ ಇನ್ನೂ ಲೆಕ್ಕ ಹಾಕಲಾಗುತ್ತಿದೆ. AntoNY x Keerthy’ ಎಂದು ಬರೆದಿರುವ ಮೂಲಕ ಮದುವೆ ಸುದ್ದಿಗೆ ಪುಷ್ಟಿ ನೀಡಿದ್ದಾರೆ.

    ಕೀರ್ತಿ ಸುರೇಶ್ ಲವ್ ಸ್ಟೋರಿ :

    ಕೀರ್ತಿ ಹಾಗೂ ಆ್ಯಂಟೋನಿ ಬಾಲ್ಯದ ಗೆಳೆಯರು. 16ನೇ ವಯಸ್ಸಿನಲ್ಲಿ ಕೀರ್ತಿಗೆ ಆ್ಯಂಟೋನಿ ಪರಿಚಯವಾಗಿತ್ತು. ಆ ಗೆಳೆತನನಂತರದ ದಿನಗಳಲ್ಲಿ ಪ್ರೀತಿಗೆ ತಿರುಗಿದೆ. ಈ ವಿಚಾರವನ್ನು ಕೀರ್ತಿ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಆ್ಯಂಟೋನಿ ಅವರು ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಖತಾರ್​ನಲ್ಲಿ ಕೆಲಸ ಮಾಡಿದ್ದಾರೆ. ಸದ್ಯ ಕೊಚ್ಚಿಯಲ್ಲಿ ಇದ್ದಾರೆ. ತಮ್ಮದೇ ಉದ್ಯಮ ಹೊಂದಿರುವ ಆ್ಯಂಟೋನಿ ವೈದ್ಯಕೀಯ ಕ್ಷೇತ್ರದಲ್ಲೂ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ.

    Continue Reading

    LATEST NEWS

    Trending