LATEST NEWS
ಕೊಹ್ಲಿಯ ಎಕ್ಸಾಂ ಉತ್ತರ ಪತ್ರಿಕೆ ಲೀಕ್..! 35 ವರ್ಷ ಆದ್ರೂ ಬೋರ್ಡ್ ಎಕ್ಸಾಂ ಬರೆದ್ರಾ ವಿರಾಟ್..?
ದೆಹಲಿ/ಮಂಗಳೂರು: ಕ್ರಿಕೆಟ್ ಲೋಕದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವವರು ವಿರಾಟ್ ಕೊಹ್ಲಿ. ಪುಟ್ಟ ಮಕ್ಕಳಿಂದ ಹಿಡಿದು ಹೆಂಗಳೆಯರ ತನಕ ಎಲ್ಲರಿಗೂ ಫೇವರೆಟ್ ಇವರು. ಕ್ರಿಕೆಟ್ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಮೂಲಕ ಎಲ್ಲರೂ ಕೊಹ್ಲಿಯನ್ನು ಇಷ್ಟಪಡುತ್ತಾರೆ. ಇದೀಗ ಇದೇ ಆಟಗಾರನ ಪರೀಕ್ಷಾ ಉತ್ತರ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಕ್ಕಿದೆ. ಹೌದು, ಉತ್ತರ ಪತ್ರಿಕೆಯಲ್ಲಿರುವ ಹೆಸರು ಬರೆಯಲು ನಮೂದಿಸಿರುವ ಜಾಗದಲ್ಲಿ ವಿರಾಟ್ ಕೊಹ್ಲಿ ಎಂದು ಬರೆಯಲಾಗಿದೆ. ಅರೇ..! ವಿರಾಟ್ ಗೆ 35 ವರ್ಷವಾಗಿದ್ರೂ ಬೋರ್ಡ್ ಎಕ್ಸಾಂ ಬೆರೆದಿದ್ದಾರಾ..? ಎಂಬ ಪ್ರಶ್ನೆ ಕಾಡುತ್ತೆ ಅಲ್ವಾ..
ವಿನೇಶ್ ಫೋಗಟ್ ಬಳಿ ಕೋಟಿ ಕೋಟಿ ಆಸ್ತಿ.. ಕಾರಿನ ಮೇಲೆ ಭಾರೀ ಕ್ರೇಜ್.. ಎಷ್ಟು ಕೋಟಿ ಒಡತಿ ಗೊತ್ತೇ..?
ಅಸಲಿಗೆ ಈ ಉತ್ತರ ಪತ್ರಿಕೆ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯದ್ದು. ಕೊಹ್ಲಿ ಹಾಗೂ ಆರ್‌ಸಿಬಿ ಅಂದ್ರೆ ಒಂದು ನಾಣ್ಯದ ಎರಡು ಮುಖಗಳು ಇದ್ದ ಹಾಗೆ. ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿಗಳಿದ್ದು, ಅಷ್ಟೇ ಅಭಿಮಾನಿಗಳನ್ನು ಆರ್‌ಸಿಬಿ ಕೊಡ ಹೊಂದಿದೆ. ಹೀಗಾಗಿ ಈ ಪುಟ್ಟ ಬಾಲಕ ತನ್ನ ಬೋರ್ಡ್ ಎಕ್ಸಾಂ ಉತ್ತರ ಪತ್ರಿಕೆಯಲ್ಲಿ ವಿರಾಟ್ ಹಾಗೂ ಆರ್‌ಸಿಬಿ ಗುಣಗಾನ ಮಾಡಿದ್ದಾನೆ. ಬಿಹಾರ ಮೂಲದವನಾಗಿರುವ ಈ ಹುಡುಗನಿಗೆ ವಿರಾಟ್ ಅಂದ್ರೆ ಪಂಚಪ್ರಾಣವಂತೆ. ಹಾಗಾಗಿ ಉತ್ತರ ಪತ್ರಿಕೆಯಲ್ಲಿ ತನ್ನ ಹೆಸರಿನ ಬದಲು ವಿರಾಟ್ ಕೊಹ್ಲಿಯ ಹೆಸರು, ರೋಲ್ ನಂಬರ್ ಬದಲು ವಿರಾಟ್ ಜರ್ಸಿ ನಂಬರ್ 18 ಎಂದು ಬರೆದಿದ್ದಾನೆ. ಬಾಲಕ ದಿನಾಂಕವನ್ನು ನಮೂದಿಸುವಲ್ಲಿ 18 ಆರ್‌ಸಿಬಿ ಎಂದು ಬರೆದಿದ್ದಾನೆ. ಕೊಹ್ಲಿ ತನ್ನ ಹೆಸರು, ತಾಯಿ ಸರೋಜ್ ಕೊಹ್ಲಿ, ತಂದೆ ಪ್ರೇಮ್ ನಾಥ್ ಕೊಹ್ಲಿ, ತರಗತಿ ಆರ್‌ಸಿಬಿ, ಸೆಕ್ಷನ್ ಎ, ರೋಲ್ ನಂಬರ್ 18, ವಿಷಯ ಕ್ರಿಕೆಟ್, ಶಿಫ್ಟ್ ಓಪನಿಂಗ್ ಎಂದು ಬರೆದಿದ್ದಾನೆ.
‘ಔಟ್ ಆಫ್ ಕಾಂಟೆಕ್ಸ್ಟ್ ಕ್ರಿಕೆಟ್’ ಎಂಬ ಎಕ್ಸ್ ಖಾತೆಯಲ್ಲಿ ಫೊಟೋವನ್ನು ಹಂಚಿಕೊಂಡಿದ್ದಾರೆ.
ಬಾಲಕನಿಗೆ ವಿರಾಟ್ ಕೊಹ್ಲಿ ಮೇಲಿರುವ ಅಪಾರವಾದ ಪ್ರೀತಿಗೆ ಜನರು ಫಿದಾ ಆಗಿದ್ದಾರೆ. ಬಿಹಾರ ಮೂಲದ ಬಾಲಕ ಆರ್‌ಸಿಬಿ ಫ್ಯಾನ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ನಾನಾ ಕೆಮೆಂಟ್ಸ್ ಗಳ ಮಹಾಪೂರವೇ ಹರಿದು ಬಂದಿದೆ. ಕೆಲವರು ಈ ಬಾಲಕನ ಕ್ರಿಕೆಟ್ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಕ್ರಿಕೆಟ್‌ನಿಂದಾಗಿ ತಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಿಕೊಳ್ಳಬಾರದು. ಅಭಿಮಾನ ಇರಲಿ ಆದರೆ ಅದು ಕಲಿಕೆಗೆ ಕುತ್ತು ತರುವಂತಿರಬಾರದು ಎಂದು ಕಮೆಂಟ್ ಮಾಡಿದ್ದಾರೆ.
LATEST NEWS
ಮಂಗಳೂರು: ಮನೆಯ ಗೋಡೆ ಕುಸಿದು ಇಬ್ಬರು ಮೃ*ತ್ಯು
ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃ*ತರು ಎಂದು ಗುರುತಿಸಲಾಗಿದೆ.
ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋ ನೋಡಿ:
LATEST NEWS
ಭರ್ಜರಿ ಶಾಕ್ ಕೊಟ್ಟ ಕೇಂದ್ರ ಸರ್ಕಾರ ! ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ !
ಮಂಗಳೂರು/ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.
ವಿಂಡ್ಫಾಲ್ ಟ್ಯಾಕ್ಸ್ ಎಂದರೇನು ?
ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.
ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ. ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.
LATEST NEWS
ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಮೋದಿ
ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಅವರು, ದಾಖಲೆಯ 29 ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.
ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್‌ಗೆ ಆಟೋಗ್ರಾಫ್‌ನ್ನು ಸಹ ನೀಡಿದರು. ಇದೇ ವೇಳೆ ಅವನಿ ಲೆಖರಾ ಅವರು ಪ್ರಧಾನಿ ಮೋದಿಯವರಿಗೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಅಲ್ಲದೇ ಪ್ರಧಾನಿ ಮೋದಿಯವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಮಂಗಳವಾರ ದೇಶಕ್ಕೆ ಮರಳಿದ್ದ ಭಾರತೀಯ ಅಥ್ಲೀಟ್‌ಗಳು, ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚು ಸೇರಿದಂತೆ 29 ಪದಕಗಳನ್ನು ಗೆದ್ದಿದೆ. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್‌ನ 19 ಪದಕಗಳನ್ನು ಗೆದ್ದ ದಾಖಲೆಯನ್ನು ಮುರಿದಿದೆ. ಈ ಸಾಧನೆಯ ಮೂಲಕ ಪದಕ ಪಟ್ಟಿಯಲ್ಲಿ 24 ನೇ ಸ್ಥಾನದಲ್ಲಿದ್ದ ಭಾರತ 18 ನೇ ಸ್ಥಾನಕ್ಕೆ ಏರಿದೆ. ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಭಾರತ ಪ್ಯಾರಾಲಿಂಪಿಕ್ಸ್‌ಗೆ ತೆರಳಿತ್ತು.
ಕ್ರೀಡಾಪಟುಗಳ ಜೊತೆ ಮೋದಿ ಮಾತುಕತೆ ನಡೆಸಿದ ವೇಳೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಿಸಿಐ ಅಧ್ಯಕ್ಷ ದೇವೇಂದ್ರ ಜಜಾರಿಯಾ ಇದ್ದರು.
- LATEST NEWS4 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- FILM3 days ago
ಕನ್ನಡ ಬಿಗ್ ಬಾಸ್ ಸೀಸನ್ 11ಕ್ಕೆ ಮುಹೂರ್ತ ಫಿಕ್ಸ್! ಹೋಸ್ಟ್ ಕೂಡ ಕನ್ಫರ್ಮ್!
- DAKSHINA KANNADA4 days ago
WATCH : ಕದ್ರಿ ಪಾರ್ಕ್ ನ ರಸ್ತೆಯಲ್ಲಿ ‘ಅಪರೇಷನ್ ಹೆಬ್ಬಾವು’; ಭಾರಿ ಗಾತ್ರದ ಹಾವನ್ನು ಕಂಡು ಬೆಚ್ಚಿ ಬಿದ್ದ ಜನ
- LATEST NEWS2 days ago
ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ