Connect with us

DAKSHINA KANNADA

ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕದ್ದಿದ್ದ ಕಳ್ಳ ಪೊಲೀಸರ ವಶ..! ಆರೋಪಿ ಆಸ್ಪತ್ರೆಗೆ..!

Published

on

ಮಂಗಳೂರು: ಉಳ್ಳಾಲ ತಾಲೂಕಿನ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರದ ಮನೆ ದ್ವಂಸ ಮಾಡಿದ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಭಂಡಾರದ ಮನೆ ಧ್ವಂಸ ಮಾಡಿದವರನ್ನು ಪೊಲೀಸರು ಬಂಧಿಸಿ ಆರೋಪಿಗಳು ಜಾಮೀನು ಪಡೆದು ಹೊರಗೆ ಕೂಡಾ ಬಂದಿದ್ದಾರೆ. ಆದ್ರೆ ಇದೀಗ ಮತ್ತೆ ಕೊಂಡಾಣ ಕ್ಷೇತ್ರ ಸುದ್ದಿಯಾಗಿದ್ದು, ಯುವಕನೊಬ್ಬ ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾಗಳನ್ನೇ ಕದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.

tharavadu mane

ಎ.4ರಂದು ಕ್ಷೇತ್ರದಲ್ಲಿನ 6 ಸಿಸಿ ಕ್ಯಾಮೆರಾಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.  ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್‌ ಅವರು ಉಳ್ಳಾಲ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕ್ಷೇತ್ರದ ಕಚೇರಿಯಲ್ಲಿದ್ದ ಡಿವಿಆರ್ ಮೂಲಕ ಕಳ್ಳ ಯಾರು ಎಂದು ಪತ್ತೆ ಹಚ್ಚಿದ್ದಾರೆ. ಕೊಂಡಾಣದ ಬೀರಿ ನಿವಾಸಿ ಶುಭಾಶ್‌ಚಂದ್ರ ಎಂಬಾತ ಈ ಕಳ್ಳತನ ಮಾಡಿರುವುದು ಡಿವಿಆರ್ ಮೂಲಕ ಗೊತ್ತಾಗಿದೆ. ಆರೋಪಿಯನ್ನು ಬಂಧಿಸಿ ಆತನಿಂದ ಸಿಸಿ ಕ್ಯಾಮೆರಾಗಗಳನ್ನು ವಶಕ್ಕೆ ಪಡೆಯಲಾಗಿದೆ. ಆದ್ರೆ ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದು ಈ ಕೃತ್ಯ ಮಾಡಿದ್ದಾಗಿ ಹೇಳಿರುವ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

LATEST NEWS

Trending