Sunday, November 27, 2022

“ಮುತಾಲಿಕ್‌ ಉಡುಪಿ ಪ್ರವೇಶಕ್ಕೆ ನಿಷೇಧ ಹೇರಿದ ‘ಕಾಣದ ಕೈ’ಗೆ ಕೊರಗಜ್ಜನೇ ಶಿಕ್ಷಿಸಲಿ”

ಉಡುಪಿ: ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ಗೆ ಉಡುಪಿಯ ಗಂಗೊಳ್ಳಿಗೆ ಬರದಂತೆ ತಡೆದವರಿಗೆ ಕೊರಗಜ್ಜನೇ ಶಿಕ್ಷೆ ನೀಡಲಿ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಾದಾಯಾತ್ರೆ ಮೂಲಕ ತೆರಳಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.


ಏ. 15ರಂದು ಗಂಗೊಳ್ಳಿಯಲ್ಲಿ ವೀರೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಗವಹಿಸುವವರಿದ್ದರು.

ಆದರೆ ಅಂದು ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮುತಾಲಿಕ್‌ ಉಡುಪಿ ಜಿಲ್ಲೆ ಪ್ರವೇಶಿಸದಂತೆ ಉಡುಪಿ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು. ಈ ಆದೇಶ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು.


ಮುತಾಲಿಕ್‌ ಪ್ರವೇಶಕ್ಕೆ ನಿಷೇಧ ಹೇರಿದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಆರೋಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಂದು ಏಳು ಕಿಲೋಮೀಟರ್ ಪಾದಯಾತ್ರೆ ಮಾಡಿ ಮುಳ್ಳಿಕಟ್ಟೆ ಕೊರಗಜ್ಜನಿಗೆ ಸಾಮೂಹಿಕವಾಗಿ ಪ್ರಾರ್ಥನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...