ಸದ್ಯಕ್ಕೆ ದೇವರ ದರ್ಶನ ಮಾತ್ರ ಯಾವುದೇ ಸೇವೆಗೆ ಅವಕಾಶ ಇಲ್ಲ – ಕೋಟ
Published
4 years agoon
By
Adminಸುಬ್ರಹ್ಮಣ್ಯ : ರಾಜ್ಯದ ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲೂ ಸದ್ಯಕ್ಕೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗೆ ಅವಕಾಶವಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಕಾಮಗಾರಿಗಳ ವೀಕ್ಷಣೆ, ಹಾಗೂ ಕಾಮಗಾರಿಯಲ್ಲಾಗುತ್ತಿರುವ ವಿಳಂಬದ ಕುರಿತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ಧಿಗಾರೊಂದಿಗೆ ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಲ್ಲಿ ದೇವರಿಗೆ ವಿವಿಧ ರೀತಿಯ ಸೇವೆಗಳನ್ನು ನೀಡಬೇಕೆಂಬ ಇಚ್ಛೆ ಎಲ್ಲಾ ಭಕ್ತರಲ್ಲೂ ಇದೆ. ಆದರೆ ಕೊರೊನಾ ರೋಗದ ಹಿನ್ನಲೆಯಲ್ಲಿ ಸರಕಾರ ಅನಿವಾರ್ಯವಾಗಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಸದ್ಯಕ್ಕೆ ಎಲ್ಲಾ ಕ್ಷೇತ್ರಗಳಲ್ಲೂ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ಸೇವೆಗಳಿಗೆ ಅವಕಾಶವಿಲ್ಲ.
ಕ್ಷೇತ್ರಗಳಲ್ಲಿ ಸೇವಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ಬಳಿಕವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಕಾಮಗಾರಿಯಲ್ಲಿ ಕೈಗೊಂಡ ಒಳಚರಂಡಿ ವ್ಯವಸ್ಥೆ, ವಸತಿ ಗೃಹಗಳ ಕಾಮಗಾರಿಗೆ ಸಂಬಂಧಿಸಿದಂತೆ ಹಲವು ದೂರುಗಳು ಬಂದಿರುವ ಹಿನ್ನಲೆಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಮುಜರಾಯಿ ಇಲಾಖೆಯ ಕಮಿಷನರ್ ಗೆ ಸೂಚಿಸಲಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳು ಈಗಾಗಲೇ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಒಂದು ತಿಂಗಳ ಒಳಗೆ ಈ ವರದಿ ಸರಕಾರದ ಕೈ ಸೇರಲಿದ್ದು, ಕಾಮಗಾರಿಯಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಹಲವಾರು ಕಾನೂನಿನ ತೊಡಕುಗಳು ಎದುರಾಗಿದ್ದು, ಉಚ್ಛ ನ್ಯಾಯಾಲಯದಲ್ಲಿ ಮೂರು ಹಾಗೂ ಇತರ ನ್ಯಾಯಾಲಯಗಳಲ್ಲಿ ಸುಮಾರು 29 ವ್ಯಾಜ್ಯಗಳಿವೆ. ಈ ಎಲ್ಲಾ ವ್ಯಾಜ್ಯಗಳ ಶೀಘ್ರ ವಿಲೇವಾರಿಗಾಗಿ ಕ್ಷೇತ್ರದ ಕಾನೂನು ವಿಷಯಗಳಿಗಾಗಿಯೇ ವಿಶೇಧ ನ್ಯಾಯವಾದಿಯನ್ನು ನೇಮಿಸಲು ತೀರ್ಮಾನಿಸಲಾಗಿದೆ.
ಅಲ್ಲದೆ ಕ್ಷೇತ್ರದ ಎಲ್ಲಾ ಆಸ್ತಿಗಳನ್ನು ಹದ್ದುಬಸ್ತಿನಲ್ಲಿಡುವ ಕಾರ್ಯಗಳನ್ನೂ ನಡೆಸಲಾಗುತ್ತಿದೆ. ಅಲ್ಲದೆ ದೇವಸ್ಥಾನದ ಎಲ್ಲಾ ಆಡಳಿತಾತ್ಮಕ ವಿಚಾರಗಳ ಮೇಲ್ಪಿಚಾರಣೆಗಾಗಿ ವಿಶೇಷ ಲೆಕ್ಕಪರಿಶೋಧಕರನ್ನೂ ನೇಮಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಕರಾವಳಿಯಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದ್ದರೂ, ಈ ಬಾರಿ ಕೊರೊನಾ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಗರಪಂಚಮಿ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಜನ ತಮ್ಮ ತಮ್ಮ ಮನೆಯಲ್ಲಿರುವ ನಾಗನ ಕಲ್ಲುಗಳಿಗೆ ತನು ಎರೆಯುವ ಮೂಲಕ ನಾಗರಪಂಚಮಿಯನ್ನು ಆಚರಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
You may like
DAKSHINA KANNADA
ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್‌ಪಾಸ್ ಗೆ ಉರುಳಿದ ವಾಹನ; ಹಲವರಿಗೆ ಗಾಯ
Published
8 hours agoon
17/01/2025By
NEWS DESK3ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.
ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು
ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
DAKSHINA KANNADA
ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ
Published
8 hours agoon
17/01/2025By
NEWS DESK4ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್‌ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್‌ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.
ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
FILM
ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
Published
8 hours agoon
17/01/2025By
NEWS DESK3ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್‌ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.
ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.
ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.
ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್ ಫೀಲ್ ಮಾಡಿಕೊಂಡರಂತೆ.
ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.
LATEST NEWS
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ಡಬಲ್ ಧಮಾಕ
ದ.ಕ : ಪ್ರತ್ಯೇಕ ಅಪ*ಘಾತ ಪ್ರಕರಣ; ಇಬ್ಬರು ಬೈಕ್ ಸವಾರರು ಸಾ*ವು
Trending
- BIG BOSS6 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- BIG BOSS5 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS3 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS3 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?