Tuesday, October 19, 2021

ಇಂದು ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ನಾಳೆ ಬೆಳಗ್ಗೆ 6 ಗಂಟೆಗೆ ರಿಲೀಸ್‌

ಬೆಂಗಳೂರು: ದಸರಾ ಸಂಭ್ರಮ ಹೆಚ್ಚಿಸಲು ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಇಂದು ರಾಜ್ಯಾದ್ಯಂತ ರಿಲೀಸ್ ಆಗಬೇಕಿದ್ದ ಸಿನಿಮಾ ಶೋ ಕ್ಯಾನ್ಸಲ್ ಆಗಿದೆ. ಇದರಿಂದ ಕಿಚ್ಚನ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ಸಿನಿಮಾ ಮಂದಿರಗಳ ಮುಂದೆ ಡಿಸ್ಟ್ರಿಬ್ಯೂಟರ್ಸ್​ಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇಂದು ಮುಂಜಾನೆ ಅಭಿಮಾನಿಗಳಿಗಾಗಿ ಏರ್ಪಡಿಸಿದ್ದ ವಿಷೇಶ ಪ್ರದರ್ಶನ ನೋಡಲು ಕಿಚ್ಚನ ಅಭಿಮಾನಿಗಳು ಚಿತ್ರ ಮಂದಿರಗಳ ಮುಂದೆ ನೆರೆದಿದ್ದು ಥಿಯೇಟರ್ ಆವರಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

7 ಗಂಟೆ ಆಗುತ್ತಿದ್ದಂತೆ ಕೋಟಿಗೊಬ್ಬ 3 ಸಿನಿಮಾ ಕಣ್ತುಂಬಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದರು. ಆದ್ರೆ ತಾಂತ್ರಿಕ ಕಾರಣಗಳಿಂದಾಗಿ ಮಾರ್ನಿಂಗ್ ಶೋ ಕ್ಯಾನ್ಸಲ್ ಆಗಿದೆ.

ಶೋ ಕ್ಯಾನ್ಸಲ್ ಮಾಡಿರುವುದಾಗಿ ಚಿತ್ರಮಂದಿರದ ಆಡಳಿತ ಮಂಡಳಿ ಮುಂದೆ ಬೋರ್ಡ್ ಹಾಕಿದೆ. ಆನ್ ಲೈನ್ ಮೂಲಕ ಅಮೌಂಟ್ ರೀಫಂಡ್ ಮಾಡುವುದಾಗಿ ತಿಳಿಸಿದೆ.

ನೆಚ್ಚಿನ ನಟನ ಸಿನಿಮಾ ನೋಡದೆ ಬೇಸರದಿಂದ ಅಭಿಮಾನಿಗಳು ಆಚೆ ನಿಂತಿದ್ದು ಕೆಲ ಅಭಿಮಾನಿಗಳು ಡಿಸ್ಟ್ರಿಬ್ಯೂಟರ್ಸ್​ಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ನಿರ್ಮಾಪಕ ಸೂರಪ್ಪ ಬಾಬು ಪ್ರತಿಕ್ರಿಯಿಸಿ ನಾಳೆ ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...