Tuesday, October 19, 2021

ಡಿಕೆಶಿ ಬಗ್ಗೆ ಮಾತನಾಡಿದ ಸಲೀಂಗೆ ಗೇಟ್‌ ಪಾಸ್‌, ಉಗ್ರಪ್ಪಗೆ ನೋಟೀಸ್‌-ಯತ್ನಾಳ್‌, ವಿಶ್ವನಾಥ್‌ ಬಗ್ಗೆ ಬಿಜೆಪಿ ಕ್ರಮ ಯಾವಾಗ ಎಂದ ಕಾಂಗ್ರೆಸ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪಿಸುಗುಟ್ಟಿದ ಮುಖಂಡರಾದ ಸಲೀಂ ಅವರನ್ನು ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಗೇಟ್​ ಪಾಸ್ ನೀಡಲಾಗಿದೆ.

ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಇದೀಗ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ.

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಕೆಪಿಸಿಸಿ ‘ಆಧಾರ ರಹಿತವಾಗಿ ಮಾತನಾಡಿದ್ದ ಸಲೀಂ ಅವರನ್ನು ಅಮಾನತು ಮಾಡಿದ್ದೇವೆ.

ತಮ್ಮ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ಆರೋಪಗಳ ಸುರಿಮಳೆಗೈದ ಯತ್ನಾಳ್, ಹೆಚ್. ವಿಶ್ವನಾಥ್ ಅವರ ಮೇಲೆ ಬಿಜೆಪಿ ಕ್ರಮ ಕೈಗೊಳ್ಳುವ ಧೈರ್ಯ ತೋರುವುದೇ ಅಥವಾ ಅವರ ಆರೋಪಗಳನ್ನು ಒಪ್ಪಿಕೊಳ್ಳುವ ಪ್ರಾಮಾಣಿಕತೆ ತೋರುವುದೇ’? ಎಂದು ಪ್ರಶ್ನಿಸಿದ್ದಾರೆ.


ಮತ್ತೊಂದು ಕುತೂಹಲದ ಸಂಗತಿಯೆಂದರೆ ಅತ್ತ ಉಗ್ರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದು, ಅವರು ಹೊರ ಬರುವುದನ್ನೇ ಪಕ್ಷದ ಸಿಬ್ಬಂದಿ ಕಾಯುತ್ತಿದ್ದಾರೆ.

ಉಗ್ರಪ್ಪ ಹೊರಬರುತ್ತಿದ್ದಂತೆ ಅವರಿಗೆ ಕೆಪಿಸಿಸಿ ವತಿಯಿಂದ ನೋಟಿಸ್​ ಸರ್ವ್ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ರೆಹಮಾನ್ ಖಾನ್ ಸಹಿಯುಳ್ಳ ನೋಟಿಸ್​ ಪತ್ರ ಜಾರಿಯಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...