DAKSHINA KANNADA
ದ.ಕ. ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಸಮಾಲೋಚನೆ..
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧೃವನಾರಾಯಣ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿಗಳಾದ ಪಿ.ವಿ ಮೋಹನ್,ಐವನ್ ಡಿ ಸೋಜಾ, ಶಾಸಕ ಯು.ಟಿ. ಖಾದರ್, ಮಾಜಿ ಶಾಸಕರಾದ, ಶಕುಂತಲಾ ಶೆಟ್ಟಿ. ಮೊಯ್ದೀನ್ ಬಾವ, ಜೆ.ಆರ್ ಲೋಬೊ, ರಾಕೇಶ್ ಮಲ್ಲಿ, ಅಶೋಕ್ ಕೊಡವೂರ್, ಡಾ.ರಘು, ಗೋಪಾಲ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.
ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.
ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್ಎಸ್ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ
ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.
ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.
DAKSHINA KANNADA
ಅರ್ಜುನ್ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.
ಇಂದು ಅರ್ಜುನ್ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.
ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.
ಇಂದು ಅರ್ಜುನ್ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- DAKSHINA KANNADA6 days ago
PUTTUR : ನಾಪತ್ತೆಯಾಗಿದ್ದ ಯುವಕನ ಮೃ*ತದೇಹ ಗೌರಿ ಹೊಳೆಯಲ್ಲಿ ಪತ್ತೆ