Connect with us

    LATEST NEWS

    ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಹೆಸರು ಕೇಳಿದರೆ ಆಘಾತವಾಗುತ್ತದೆ: ಡಿಕೆಶಿ

    Published

    on

    ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ವ್ಯವಹಾರಸ್ಥರ ಹೆಸರುಗಳು ಕೇಳಿ ಬರುತ್ತಿದ್ದು, ಆ ಹೆಸರುಗಳನ್ನು ಕೇಳಿದರೆ ಆಘಾತವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.


    ಈ ಬಗ್ಗೆ ಮಾತನಾಡಿದ ಅವರು, ‘ಬಿಟ್‌ ಕಾಯಿನ್‌ ವ್ಯವಹಾರದ ದೊಡ್ಡದಾಗಿ ನಡೆಯುತ್ತಿದೆ. ಯಾರ್ಯಾರ ಖಾತೆಗೆ ಏನೇನೋ ಬಂದಿದೆ ಎಂಬ ಮಾಹಿತಿಯೂ ಇದೆ. ಅಷ್ಟು ದೊಡ್ಡ ಮಟ್ಟದಲ್ಲಿ ಖಾತೆ ಹ್ಯಾಕ್ ಮಾಡಿ, ಎಲ್ಲೆಲ್ಲಿಗೆ ಹೇಗೆ ಹಣ ಹೋಗಿದೆ ಎಂದು ಹೇಳಲಾಗುತ್ತಿದೆ.

    ಈ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಯತ್ನಿಸುತ್ತಿದ್ದೇನೆ’ ಎಂದು ಅವರು ಹೇಳಿದರು. ಈ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪ್ರಕರಣವನ್ನು ಮುಚ್ಚಿ ಹಾಕುವುದೇ ಅವರ ದೊಡ್ಡ ಕೆಲಸ. ಅದನ್ನೇ ಅವರು ಮಾಡುವುದು, ಮಾಡುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

    LATEST NEWS

    ಮಳೆ ಆರ್ಭಟ; ಕೃಷ್ಣೆಗೆ ಭಾಗಿನ ಅರ್ಪಿಸಲು ಹೋಗಿ ಯುವಕ ನೀರು ಪಾ*ಲು

    Published

    on

    ಮಳೆ ಬಂದ್ರೆ ಇಳೆಗೆ ಜೀವ ಕಳೆ. ಅದೇ ಮಳೆ ರೌದ್ರನರ್ತನ ಮೆರೆದ್ರೆ ಸಾ*ವು-ನೋವಿನ ಸೆಲೆ. ರಾಜ್ಯದ ಅಷ್ಟ ದಿಕ್ಕುಗಳಲ್ಲೂ ಅಬ್ಬಿರಿಸಿ ಬೊಬ್ಬರಿಯುತ್ತಿರೋ ವರುಣ ಸಾ*ವು ನೋವಿನ ಸಂಕಷ್ಟಗಳ ಸರಮಾಲೆಗೆ ಸಾಕ್ಷಿಯಾಗಿದ್ದಾನೆ.

    ಕೃಷ್ಣಾ ನದಿಗೆ ಭಾಗಿನ ಅರ್ಪಿಸಲು ಹೋದ ಯುವಕ ಸಾ*ವು

    ಕೃಷ್ಣಾ ನದಿಯ ಹಿನ್ನೀರಿನಲ್ಲಿ ಭಾಗಿನ ಅರ್ಪಿಸಲು ಹೋದ ಯುವಕ ನೀರುಪಾ*ಲಾಗಿರೋ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

    ಈಜಲು ಬರದ ಹಿನ್ನಲೆ 28 ವರ್ಷದ ಯುವಕ ರೋಹಣ ಪಾಟೀಲ ಆಯತಪ್ಪಿ ನೀರಿಗೆ ಬಿದ್ದು ಸಾ*ವನ್ನಪ್ಪಿದ್ದಾನೆ. ಸ್ಥಳೀಯರ ಸಹಾಯದಿಂದ ಬೋಟ್ ಮೂಲಕ ರೋಹಣ ಪಾಟೀಲ ಮೃ*ತದೇಹ ಹೊರ ತೆಗೆಯಲಾಗಿದೆ.

    Continue Reading

    LATEST NEWS

    ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

    Published

    on

    ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


    ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

    Continue Reading

    DAKSHINA KANNADA

    ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡಿ; ರಾಜ್ಯ ಸರಕಾರಕ್ಕೆ ದ.ಕ. ಹಾಲು ಒಕ್ಕೂಟ ಪ್ರಸ್ತಾವನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

    ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್‌ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.

    ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್‌ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಾಗುವುದು. ಇದರಿಂದ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್‌, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್‌, ಕಮಲಾಕ್ಷ ಹೆಬ್ಟಾರ್‌, ಸವಿತಾ ಎನ್‌.ಶೆಟ್ಟಿ, ಸ್ಮಿತಾ ಆರ್‌.ಶೆಟ್ಟಿ, ಸುಭದ್ರಾ ರಾವ್‌, ವ್ಯವಸ್ಥಾಪಕ ನಿರ್ದೇಶಕ ವಿವೇಕ್‌, ಮಾರುಕಟ್ಟೆ ಮುಖ್ಯಸ್ಥ ರವಿರಾಜ್‌ ಉಡುಪ ಉಪಸ್ಥಿತರಿದ್ದರು.

    Continue Reading

    LATEST NEWS

    Trending