Connect with us

DAKSHINA KANNADA

KPSC ಪ್ರಶ್ನೆಪತ್ರಿಕೆ ಸೋರಿಕೆ : ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆ ಮುಂದೂಡಿಕೆ..!

Published

on

KPSC ಪ್ರಶ್ನೆಪತ್ರಿಕೆ ಸೋರಿಕೆ : ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆ ಮುಂದೂಡಿಕೆ..!

ಬೆಂಗಳೂರು: ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ತುಮಕೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ, ರಾಜ್ಯಾದ್ಯಂತ 4 ಲಕ್ಷ ಅಭ್ಯರ್ಥಿಗಳು ಈ ಪರಿಕ್ಷೆ ಬರೆಯಲಿದ್ದರು ಎಂದು ತಿಳಿದು ಬಂದಿದೆ.  ಸೋರಿಕೆ ಸಂಬಂಧ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 24 ಲಕ್ಷ ನಗದುಮತ್ತು ಮೂರು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯದರ್ಶಿ ಜಿ. ಸತ್ಯವತಿ ಅವರು ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ನಾಳೆ ನಡೆಯಬೇಕಿದ್ದ ಎಫ್ ಡಿಎ (ಪ್ರಥಮ ದರ್ಜೆ ಸಹಾಯಕ) ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಘೋಷಣೆ ಮಾಡುತ್ತೇವೆ ಎಂದೂ ಸತ್ಯವತಿ ಅವರು ಮಾಹಿತಿ ನೀಡಿದ್ದಾರೆ.

100%

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending