Thursday, August 11, 2022

ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ-ಹಲವರಿಗೆ ಗಾಯ

ಚಿಕ್ಕಬಳ್ಳಾಪುರ: ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಾರ್ಗದ ಕಣಿವೆ ಪ್ರದೇಶದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಪುತ್ತೂರು ಘಟಕದ ಬಸ್‍ಗೆ ಗೌರಿಬಿದನೂರು ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಕಬ್ಬಿಣದ ರಾಡ್‍ಗಳನ್ನು ಹೊತ್ತು ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ.

ಕಣಿವೆ ಪ್ರದೇಶದಲ್ಲಿ ಸೇತುವೆ ಬಳಿ ಕವಲು ದಾರಿಯಿದ್ದು, ಎಡ ಬದಿಯಲ್ಲಿ ಬರಬೇಕಿದ್ದ ಕ್ಯಾಂಟರ್ ಚಾಲಕ ಬಲಬದಿಯಲ್ಲಿ ಬಂದಿದ್ದು, ಎದರುಗಡೆ ಬರುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದ್ದಾನೆ.

ಪರಿಣಾಮ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಕ್ಯಾಂಟರ್‌ನಲ್ಲಿದ್ದವರು ಹಾಗೂ ಬಸ್ ಚಾಲಕ, ನಿರ್ವಾಹಕ ಸೇರಿ 7-8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ಹಂತಕರನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ ಪ್ರವೀಣ್ ಕುಟುಂಬ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ.ಈ ಬಗ್ಗೆ...