Connect with us

    DAKSHINA KANNADA

    ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; 8 ಮಂದಿ ಪ್ರಯಾಣಿಕರು ಗಂಭೀರ

    Published

    on

    ಮಂಗಳೂರು: ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗಂಗಾವತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ಜೂ.19ರಂದು ಮುಂಜಾನೆ 5.30ಕ್ಕೆ ನಡೆದಿದೆ.

    Read More..; ಕೊತ ಕೊತ ಅಂತ ಕುದಿಯುತ್ತೆ ಈ ನದಿ! ಇದರ ಹಿಂದಿನ ರಹಸ್ಯ ಇಲ್ಲಿದೆ

    ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಈ ಅಪಘಾತ ಸಂಭವಿಸಿದ್ದು, ಹನ್ನೊಂದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು(ಜೂ.19) ಬೆಳಗಿನ ಜಾವ 5.30ಕ್ಕೆ ಬಸ್ ಯಲ್ಲಾಪುರ – ಹುಬ್ಬಳ್ಳಿ ಹೆದ್ದಾರಿಯ ಡೋಮಗೇರಿ ಬಳಿ ಈ ದುರ್ಘಟನೆ ನಡೆದಿದೆ. ಕೇರಳ ರಿಜಿಸ್ಟ್ರೇಷನ್ ಹೊಂದಿದ್ದ ಲಾರಿಯೊಂದು ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದು, ಬಸ್ ಚಾಲಕನ ಗಮನಕ್ಕೆ ಬಾರದೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಣಿಕರಲ್ಲಿ 8 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ(ಜೂ.18) ರಾತ್ರಿ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಬಸ್ ಗಂಗಾವತಿ ಕಡೆಗೆ ಪ್ರಯಾಣ ಆರಂಭಿಸಿತ್ತು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

    Published

    on

    ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.

    ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.

    ಈ ಕಾರು ಮಾಲಕ ಬಿಸಿ ರೋಡಿನ ಗುರುದೀಪ್ ಎಂದು ತಿಳಿದು ಬಂದಿದ್ದು, ಕಾರು ಬಿ ಎಂ ಡಬ್ಲ್ಯೂ ಕಂಪೆನಿಗೆ ಸೇರಿದ 2011-12 ಮಾಡೆಲ್‌ನದ್ದಾಗಿದೆ.

    Continue Reading

    DAKSHINA KANNADA

    ಕೆಮ್ಮಾರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

    Published

    on

    ಪುತ್ತೂರು :  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಘಟನೆ ಇಂದು(ಸೆ.28) ಕೆಮ್ಮಾರದಲ್ಲಿ ನಡೆದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕೂಡಲೇ ಸ್ಥಳೀಯರು ಕೂಡಿಕೊಂಡು ಕಾರನ್ನು ಮೇಲೆಕ್ಕೆತ್ತಿದ್ದಾರೆ.

    ಬಸ್‌ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘ*ಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

    ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ಧಾಣದ ಭದ್ರತೆಯಿಂದ ಜೂಲಿ ನಿವೃತ್ತಿ

    ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಈ ರಾಜ್ಯ ಹೆದ್ದಾರಿಯು ಹಳೆಗೇಟು- ಕೊಯಿಲದವರೆಗೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ-ಗುಂಡಿಗಳಿಂದ ಕೂಡಿದೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದರೂ ಲೋಕೋಪಯೋಗಿ ಇಲಾಖೆ ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ವ್ಯಕ್ತವಾಗಿದೆ

    Continue Reading

    DAKSHINA KANNADA

    ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದ ಮಂಗಳೂರಿಗರು..! ಬೃಹತ್ ಪ್ರತಿಭಟನೆ..!

    Published

    on

    ಮಂಗಳೂರು :  ಅಕ್ರಮ ಮರಳು ದಂಧೆಯ ವಿರುದ್ಧ ಮಂಗಳೂರಿನ ಜನರ ಆಕ್ರೋಶ ಮುಗಿಲು ಮುಟ್ಟಿದೆ ಅನ್ನೋದಿಕ್ಕೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ. ಪಾವೂರು ಉಳಿಯ, ಉಳ್ಳಾಲ ಪೊಯ್ಯೆ ಮೊದಲಾದ ದ್ವೀಪ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.

    ಮರಳು ಮಾಫಿಯಾದಿಂದ ದ್ವೀಪಗಳು ನಾಶವಾಗುತ್ತಿದೆ ಅಂತ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಹಲವಾರು ಪ್ರತಿಭಟನೆಗಳನ್ನೂ ಕೂಡಾ ನಡೆಸಲಾಗಿತ್ತು. ಆದ್ರೆ ಇದ್ಯಾವುದಕ್ಕೂ ಜಗ್ಗದ ಅಕ್ರಮ ದಂಧೆಕೋರರು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಸಿದ್ದರು. ಜಿಲ್ಲಾಡಳಿತ , ಗಣಿ ಇಲಾಖೆ ಕೂಡಾ ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬ ರೀತಿ ವರ್ತಿಸಿತ್ತು. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಪಾಠ ಕಲಿಸಲು ಜನರೇ ಮುಂದಾಗಿದ್ದು, ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದಿದ್ದಾರೆ.

    ಈ ಹೋರಾಟ ಕೇವಲ ದ್ವೀಪ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಿಸದೆ ಜಿಲ್ಲೆಯ ಎಲ್ಲೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧದ ಹೋರಾಟವಾಗಿದೆ. ಜಿಲ್ಲಾಡಳಿತ, ಹಾಗೂ ಜಿಲ್ಲೆಯ ಎರಡೂ ಪ್ರಭಲ ರಾಜಕೀಯ ಪಕ್ಷಗಳು ಈ ಅಕ್ರಮದಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನೂ ಅಕ್ರಮ ಮರಳುಗಾರಿಕೆ ನಡೆದಲ್ಲಿ ಪೊಲೀಸ್ ಠಾಣೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಪ್ರತಿಭಟನೆಯಲ್ಲಿ ನೀಡಲಾಗಿದೆ. ಮಂಗಳೂರು ಕ್ಯಾಥೋಲಿಕ್ ಸಭಾ, ಸಮಾನ ಮನಸ್ಕ ಸಂಘಟನೆ ಹಾಗೂ ಜಾತಿ, ಧರ್ಮ, ಪಕ್ಷಾತೀತ ನಿಲುವಿನ ಜನರ ಜೊತೆ ಸೇರಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

    Continue Reading

    LATEST NEWS

    Trending