ಮೈಸೂರು: ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಮುಂದೆ ಪೊಲೀಸ್ ಇದ್ದುದನ್ನು ಕಂಡು ಏಕಾಏಕಿ ಯೂಟರ್ನ್ ಹೊಡೆದಾಗ ಹಿಂದಿನಿಂದ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿರುವ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಸಚಿನ್ ಮತ್ತು ದೊರೆಸ್ವಾಮಿ ಮೃತ ದುರ್ದೈವಿಗಳು.
ಇಂದು ಬೆಳಗ್ಗೆ ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ಮೂವರು ಯುವಕರು ಒಂದೇ ಬೈಕ್‌ನಲ್ಲಿ ಹೋಗುತ್ತಿದ್ದರು.
ಮಾರ್ಗಮಧ್ಯೆ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಯುವಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಏಕಾಏಕಿ ಯೂ ಟರ್ನ್ ತೆಗೆದುಕೊಳ್ಳಲು ಹೋಗಿದ್ದಾರೆ.
ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಯುವಕರ ದೇಹ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮತ್ತೊಬ್ಬ ಯುವಕ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ.