Monday, July 4, 2022

ಕಾಸರಗೋಡು: ಕೆಎಸ್‌ಆರ್‌ಟಿಸಿ-ಲಾರಿ ಅಪಘಾತ: ನಾಲ್ವರು ಗಂಭೀರ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತ ದಲ್ಲಿ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ಸಮೀಪ ಇಂದು ಬೆಳಗ್ಗೆ ನಡೆದಿದೆ.


ಕಣ್ಣೂರು ಕಡೆಯಿಂದ ಕಾಞ೦ಗಾಡ್ ಗೆ ಕೇರಳದ ಕೆಎಸ್‌ಆರ್‌ಟಿಸಿ ಹೋಗುತ್ತಿದ್ದ

ಬಸ್ ಮತ್ತು ಮಧ್ಯಪ್ರದೇಶದಿಂದ ಕಣ್ಣೂರು ಕಡೆಗೆ ಬರುತ್ತಿದ್ದ ಸರಕು ಲಾರಿ ನಡುವೆ ಅಪಘಾತ ನಡೆದಿದೆ. ಲಾರಿಯಲ್ಲಿ ಸಿಲುಕಿದ್ದ ಚಾಲಕ ರಾಜೇಶ್ ಎಂಬವರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದರು.

ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಬಕ್ರೀದ್ ಹಬ್ಬ ಹಿನ್ನೆಲೆ ಜಿಲ್ಲಾ ಗಡಿಪ್ರದೇಶದಲ್ಲಿ ಬಂದೋಬಸ್ತ್‌

ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ...

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ. ಮೃತ ಕುಶಾಲಪ್ಪ ಗೌಡ ಮನೆಯ...