Saturday, July 2, 2022

ಕೆ.ಎಸ್ಆರ್ ಟಿಸಿ ಅಧಿಕಾರಿ ವರ್ಗಾವಣೆಗೆ ಆಗ್ರಹ;  ದಲಿತ ಸಂಘರ್ಷ ಸಮಿತಿ ಪ್ರತಿಭಟನೆ..!

ಕೆ.ಎಸ್ಆರ್ ಟಿಸಿ ಅಧಿಕಾರಿ ವರ್ಗಾವಣೆಗೆ ಆಗ್ರಹ;  ದಲಿತ ಸಂಘರ್ಷ ಸಮಿತಿ ಪ್ರತಿಭಟನೆ..!

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಸ್ ಎನ್. ಅರುಣ್ ಇವರನ್ನು ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಂಗಳೂರಿನ ಬಿಜೈ ಕೆಎಸ್ ಆರ್ ಟಿ ಸಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಇಂದು ನಡೆಯಿತು.ಈ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಮ್ ದೇವದಾಸ್ “ಎಸ್. ಎನ್. ಅರುಣ್ ಅವರಿಂದ ಮಾನಸಿಕ ಕಿರುಕುಳ , ಹಾಗೂ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯಿಂದಾಗಿ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು. ಈ ಹಿಂದೆ ಚಿಕ್ಕಮಗಳೂರು, ದಾವಣಗೆರೆಯಲ್ಲು ಉಪ ನಿಯತಂತ್ರಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆ ಸಂದರ್ಭದಲ್ಲೂ ಅಲ್ಲಿನ ಕಾರ್ಮಿಕರಿಗೆ ಕಿರುಕಳವನ್ನು ನೀಡಿರುವುದು ಬೆಳಕಿಗೆ ಬಂದಿದೆ ಎಂದು ಹೇಳಿದರು

 ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ ದ.ಕ ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ  ಬಂಟ್ವಾಳ, ಜಿಲ್ಲಾ ಸಂಚಾಲಕರಾದ ರಘು ಕೆ ಎಕ್ಕಾರ್ ,ನಾಗೇಶ್ ಚಿಲಿಂಬಿ, ಬಾಲು‌ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಯುಗಾದಿ ಹಬ್ಬದ ಪ್ರಯುಕ್ತ ‘ದುಬೈ ಹೆಮ್ಮೆಯ ಯುಎಇ ಕನ್ನಡಿಗ’ರಿಂದ ಪ್ರತಿಭಾ ಸ್ಪರ್ಧೆ& ಪುರಸ್ಕಾರ

ದುಬೈ: ಯುಗಾದಿ ಹಬ್ಬದ ಪ್ರಯುಕ್ತ ದುಬೈ ಹೆಮ್ಮೆಯ ಯುಎಇ ಕನ್ನಡಿಗರು ತಂಡವು ಸಂಯುಕ್ತ ಅರಬ್ ಸಂಸ್ಥಾನದ ಕನ್ನಡ ಮಕ್ಕಳಿಗಾಗಿ ವಿವಿಧ ರೀತಿಯ ಕಲಾ ಪ್ರತಿಭಾ ಸ್ಪರ್ಧೆಯ ಗ್ರಾಂಡ್ ಫೈನಲ್ ಕಾರ್ಯಕ್ರಮ ಜೊತೆಗೆ ಹೆಚ್ಚು...

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್‌ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ.ಚರಂಡಿಗೆ ಮಣ್ಣು ಬಿದ್ದಿದ್ದರಿಂದ...

3ನೇ ಸೌತ್ ಇಂಡಿಯಾ ಪ್ರಾಜೆಕ್ಟ್ ಎಕ್ಸಿಬಿಷನ್‌ನಲ್ಲಿ ಉಜಿರೆ SDM ಇಂಜಿನಿಯರಿಂಗ್ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್...