Connect with us

DAKSHINA KANNADA

ಈ ‘ಮಲ್ನಾಡ್’ ಮರ್ಮಕ್ಕೆ ಕೆಎಸ್‌ಆರ್ ಟಿಸಿ ಅಧಿಕಾರಿಗಳೇ ಉತ್ತರಿಸಿ..!!!

Published

on

ಮಂಗಳೂರು: ಖಾಸಗಿ ಬಸ್ಸುಗಳ ಕಾನೂನು ಬಾಹಿರ ನಡೆಗೆ ಅಂಕುಶ ಹಾಕುವ ಸಂಬಂಧ ದಶಕಗಳ ಹಿಂದೆ ಸರ್ಕಾರ ಕೈಗೊಂಡ ನಿಷ್ಟೂರ ಕ್ರಮದ ಫಲವಾಗಿ ಸರ್ಕಾರದ ಸಾರಿಗೆ ಸಂಸ್ಥೆ ಅಸ್ತಿತ್ವಕ್ಕೆ ಬಂದಿದೆ.

ಆದರೆ ಇದೀಗ ಸರ್ಕಾರಿ ಹಿಡಿತದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಜನಸಾಮಾನ್ಯರ ಪಾಲಿಗೆ ಸೇವೆ ನೀಡುವ ಬದಲು ಕಂಟಕಪ್ರಾಯ ಎಂಬಂತಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಹಂಚಿಕೊಂಡರೆ ಉಡಾಫೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಧಿಕಾರಿಗಳ ಈ ನಡೆಯಿಂದಾಗಿ ಸಾರ್ವಜನಿಕರೂ ಕೆಎಸ್‌ಆರ್‌ಟಿ‌ಸಿ ಬಗ್ಗೆ ಅನುಮಾನ ಪಡುವಂತಾಗಿದೆ.

ಏನಿದು ಅವಾಂತರ?

ಜನರಿಗೆ ಅಗ್ಗ ದರದಲ್ಲಿ ಸಾರಿಗೆ ಸೇವೆ ಮೂಲಕ ಮೂಲ, ಅಗತ್ಯ ಸೌಲಭ್ಯ ಒದಗಿಸುವ ಪರಿಕಲ್ಪನೆಯಲ್ಲಿ ರಾಜ್ಯ ಸರ್ಕಾರ ಸಾರಿಗೆ ನಿಗಮಗಳನ್ನು ಸ್ಥಾಪಿಸಿದೆ. ಆದರೆ ಅಧಿಕಾರಿಗಳ ಅಸಡ್ಡೆ ಹಾಗೂ ಸ್ವಾರ್ಥದ ನಡೆಯಿಂದಾಗಿ ಜನರು ಪಡಬಾರದ ವೇದನೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರ ತಂಡ ಪತ್ರಕರ್ತರೊಂದಿಗರ ರಿಯಾಲಿಟಿ ಚೆಕ್‌ಗೆ ಮುಂದಾದ ಸಂದರ್ಭದಲ್ಲಿ ಅಧಿಕಾರಿಗಳ ಒಳ ಮರ್ಮ ಬಟಾಬಯಲಾಗಿದೆ.

ಒಂದು ಊರಿನಿಂದ ಮತ್ತೊಂದು ಊರಿಗೆ ದೂರದ ಪ್ರಯಾಣ ಕೈಗೊಳ್ಳುವ ಪ್ರಯಾಣಿಕರಿಗೆ ಮಾರ್ಗ ಮಧ್ಯೆ ಸಮರ್ಪಕ ಆಹಾರ ವ್ಯವಸ್ಥೆ ಕಲ್ಪಿಸುವುದು ನಿಗಮದ ಜವಾಬ್ಧಾರಿ. ಅದಕ್ಕಾಗಿಯೇ ಕರ್ನಾಟಕದಲ್ಲಿ ಅರ್ಧ ಗಂಟೆ ಪ್ರಯಾಣದ ನಡುವೆ ಸುಸಜ್ಜಿತ ಬಸ್ ನಿಲ್ದಾಣಗಳೂ ಇವೆ. ಆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲೆಂದೇ ಕ್ಯಾಂಟೀನ್ ಹಾಗೂ ಇನ್ನಿತರ ಮಳಿಗೆಗಳನ್ನು ತೆರೆಯಲಾಗಿದೆ. ಆದರೆ ಸಾರಿಗೆ ಬಸ್ಸುಗಳ ಪ್ರಮುಖರ ನಿರ್ದೇಶನವೇ ಬೇರೆ‌. ದುಡ್ಡು ಕೊಡುವ ಹೊಟೇಲ್‌ಗಳ ಮುಂದೆ ಪ್ರಯಾಣಿಕರನ್ನು ಇಳಿಸುತ್ತಾರೆ. ನಿರ್ವಾಹಕರು ಹಾಗೂ ಚಾಲಕರಿಗೆ ಬಿಟ್ಟಿ ಊಟ ನೀಡುವ ಹೊಟೇಲ್ ಮಾಲೀಕರು ಅದಕ್ಕೆ ಪ್ರತಿಯಾಗಿ ಪ್ರಯಾಣಿಕರಿಂದ ಸುಲಿಗೆ ಮಾಡುತ್ತಾರೆ.

ಇಲ್ಲಿದೆ ನೋಡಿ ಉದಾಹರಣೆ:

24.3.2021ರಂದು ಬುಧವಾರ ಬೆಳಿಗ್ಗೆ ಬೆಂಗಳೂರಿನಿಂದ ಕುಂದಾಪುರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ರಾಜಹಂಸ ಬೆಳಿಗ್ಗೆ 7.30ಕ್ಕೆ ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿತ್ತು. ಈ ಬಸ್ಸು ಸುಮಾರು 1.15ರ ಸುಮಾರಿಗೆ ಸಕಲೇಶಪುರ ತಲುಪಿತ್ತು. ಅಲ್ಲೇ ಸಾರಿಗೆ ನಿಗಮದ ಬಸ್ ನಿಲ್ದಾಣದ ಆವರಣದಲ್ಲೇ ಹೊಟೇಲ್‌ಗಳು ಇದ್ದರೂ ಅಲ್ಲಿ ಮಧ್ಯಾಹ್ನದ ಪ್ರಯಾಣಿಕರ ಊಟಕ್ಕೆಂದು ಬಸ್ಸು ನಿಲ್ಲಿಸಲಿಲ್ಲ. ‘ಡಿಪೋ ಮ್ಯಾನೇಜರ್ ಸೂಚನೆಯಿದೆ. ಅವರ ಸೂಚಿಸಿದ ಹೊಟೇಲ್‌ಗಳಲ್ಲೇ ಊಟಕ್ಕೆ ನಿಲ್ಲಿಸಬೇಕಿದೆ’ ಎಂದು ಹೇಳಿದ್ರು ನಿರ್ವಾಹಕರು.

ಡಿಪೋ ಮೇನೇಜರ್ ಸೂಚಿಸಿದ ಹೊಟೇಲ್‌ಗಳ ಬಳಿ ಬಸ್ ನಿಲ್ಲಿಸಬೇಕು. ಪ್ರತೀ ಬಾರಿಯೂ ಚಲನ್‌ಗಳಿಗೆ ನಿರ್ವಾಹಕರು ಸೀಲ್ ಹಾಕಿಸಬೇಕು.
ಮಟಮಟ ಮದ್ಯಾಹ್ನ 2.05ರ ಸುಮಾರಿಗೆ ಶಿರಾಡಿ ಘಾಟ್‌ನ ‘ಎಂಜಿರಾ’ ಎಂಬಲ್ಲಿ ‘ಮಲ್ನಾಡ್’ ಎಂಬ ಹೊಟೇಲ್ ಬಳಿ ಊಟಕ್ಕೆಂದು ಬಸ್ ನಿಲ್ಲಿಸಲಾಯಿತು.

ಅಧ್ವಾನದ ಹೊಟೇಲ್..

ಆ ಹೊಟೇಲ್ ಸಿಬ್ಬಂದಿ ಶುಚಿತ್ವ ಕಾಪಾಡಿಲ್ಲ. ಕೋವಿಡ್ ಮಾರ್ಗಸೂಚಿಯನ್ನೂ ಪಾಲಿಸುತ್ತಿರಲಿಲ್ಲ. ಅಷ್ಟೇ ಅಲ್ಲ ಕಳಪೆ ಊಟ ಪೂರೈಸುತ್ತಿದೆ. ಮಹಾನಗರಿ ಬೆಂಗಳೂರಿನಲ್ಲಿ 30ರಿಂದ 40 ರೂಪಾಯಿ ದರದಲ್ಲಿ ಊಟ ಸಿಗುತ್ತಿದ್ದರೆ ಕುಗ್ರಾಮದಲ್ಲಿರುವ ಈ ‘ಮಲ್ನಾಡ್’ ಹೆಸರಿನ ಹೊಟೇಲ್‌ನಲ್ಲಿ ಊಟದ ದರ ಬರೋಬ್ಬರಿ 80 ರೂಪಾಯಿ. ಅದೂ ಕಳಪೆ ಗುಣಮಟ್ಟದ ಊಟ. ಅಲ್ಲಿ ಊಟಕ್ಕೆಂದು ಹೋದ ಪ್ರಯಾಣಿಕರ ಪೈಕಿ ಹ್ತಾರು ಮಂದಿ ವಯಸ್ಸದವರು, ಇನ್ನೂ ಕೆಲವರು ರೋಗಿಗಳು, ಅವರ ಜೊತೆ ಒಂದಷ್ಟು ಮಕ್ಕಳು.

ಒಂದೆಡೆ ದುಬಾರಿ ಊಟ.‌ ಅಷ್ಟೇ ಅಲ್ಲ, ಅದೂ ಕೂಡಾ ಕಳಪೆ ಆಹಾರ. ಹೀಗಿದ್ದರೂ ಊಟಕ್ಕೆ 80ರೂ ಕೊಡಲೇಬೇಕು. ಇದರಿಂದ ರೋಸಿಹೋದ ಪ್ರಯಾಣಿಕರನೇಕರು ಕೆಸ್ಸಾರ್ಟಿಸಿ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ನಿರ್ವಾಹಕರು ಮಾತ್ರ ಬಿಟ್ಟಿ ಊಟ ಮಾಡುತ್ತಾ, ‘ನಾವು ಡಿಪೋ ಮೇನೇಜರ್ ಹೇಳಿದ ಹೊಟೇಲ್ ಮುಂದೆಯೇ ನಿಲ್ಲಿಸಿದ್ದೇವೆ’ ಎಂದು ಸಮಜಾಯಿಷಿ ನೀಡಿ ಜಾರಿಕೊಳ್ಳುತ್ತಿದ್ದರು.

ಉಚಿತ ಊಟದ ಪ್ರತಿಫಲ ಪಡೆದು ಪ್ರಯಾಣಿಕರಿಗೆ ಕಳಪೆ ಸೇವೆ ನೀಡುವುದು.. ಇದನ್ನು ಲಂಚ ಎಂಬುದಾಗಿ ಅರ್ಥೈಸಬಹುದೇ?

ಆ ತಕ್ಷಣವೇ ಸದರಿ ಬಸ್ ಯಾವ ಡಿಪೋಗೆ ಸೇರಿದ್ದೆಂದು ಪರಿಶೀಲಿಸಿ ಸಂಬಂಧಿತ ಡಿಪೋ ಮೇನೇಜರ್‌ರನ್ನು ಸಂಪರ್ಕಿಸಿದಾಗ ಅವರಿಂದಲೂ ಅಸಮರ್ಪಕ ಉತ್ತರ. ‘ಆ ಹೊಟೇಲ್‌ನವರು ನಮಗೆ ದುಡ್ಡು ಕೊಡುತ್ತಾರೆ. ಹಾಗಾಗಿ ನಿಗಮದ ಬಸ್‌ಗಳನ್ನು ಅಲ್ಲಿ ಬಿಲ್ಲಿಸುತ್ತಿದ್ದೇವೆ’ ಎಂಬ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲ, ಪ್ರಾದೇಶಿಕ ನಿಯಂತ್ರಣಾಧಿಕಾರಿಗಳೇ ಈ ಬಗ್ಗೆ ನಿರ್ದೇಶನ ಕೊಡುವುದು ಎಂಬ ಸ್ಪಷ್ಟನೆಯೂ ಕುಂದಾಪುರದ ಡಿಪೋ ಮೇನೇಜರ್ ಕಡೆಯಿಂದ ಸಿಕ್ಕಿದೆ. ಎಲ್ಲಾ ಅವಂತರಗಳಿಗೆ ಡಿಸಿಯೇ ಹೊಣೆ ಎಂಬಂತಿತ್ತು ಡಿಪೋ ಮೇನೇಜರ್ ಹೇಳಿಕೆ.

ಪ್ರಯಾಣದ ನಡುವೆ ಅಗತ್ಯ ಸಮಯದಲ್ಲಿ ಸೂಕ್ತ ಊಟ ಕೊಡಿಸುವುದು ನಿಗಮದ ಅಧಿಕಾರಿಗಳ ಜವಾಬ್ಧಾರಿ. ಆದರೆ ಬಿಡಿಕಾಸಿನ ಆಸೆಗಾಗಿ ಎಲ್ಲೆಂದರಲ್ಲಿ, ಯಾವಾಗಲೋ ಊಟಕ್ಕೆ ಅವಕಾಶ ಕಲ್ಲಿಸುವುದು ಎಷ್ಟು ಸರಿ? ಇದು ಕಾನೂನಾತ್ಮಕ ನಡೆಯೇ? ಸಾಂವಿಧಾನಾತ್ಮಕ ಸೇವೆಯೇ ಎಂಬ ಪ್ರಶ್ನೆ ಮೂಡುವಂತಿದೆ. ಇದಕ್ಕೆ ಡಿಸಿ ಹೊಣೆಯೇ ಅಥವಾ ಡಿಪೋ ಮೇನೇಜರ್ ಜವಾಬ್ಧಾರಿಯೇ? ಉತ್ತರಿಸುವವರು ಯಾರು ಎಂಬುದೇ ಕುತೂಹಲ.

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

LATEST NEWS

Trending