Connect with us

    DAKSHINA KANNADA

    ವಿದ್ಯಾರ್ಥಿ ಬಸ್​ ಪಾಸ್​ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ

    Published

    on

    ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ನಲಿಯುತ್ತಾ ಶಾಲೆ-ಕಾಲೇಜುಗಳತ್ತ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ತರಗತಿಗಳು ಆರಂಭವಾದ ಹಿನ್ನಲೆಯಲ್ಲಿ ಬಸ್‌ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಾದರೆ ಈ ಬಾರಿಯ ಬಸ್‌ ಪಾಸ್ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ನೋಡಿ.

    ಪಾಸ್ ದರ ಪಟ್ಟಿ

    • ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
    • ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
    • ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
    • ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
    • ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
    • ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
    • ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
    • ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
    • ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
    • ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
    • ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
    • ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಸುವ ವಿಧಾನ

    • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices
    • ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
    • ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.
    • ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
    • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
    • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.
    • ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು.
    • ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending