Connect with us

    DAKSHINA KANNADA

    ಅ.21ರಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿ ಪರ್ಬ’ ಸ್ಪರ್ಧೆ

    Published

    on

    ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಶಾಸಕ ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾರ್ಗದರ್ಶನದಲ್ಲಿ ನಡೆಯಲಿರುವ 2 ನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ದ ಚಪ್ಪರ ಮುಹೂರ್ತ ನಿನ್ನೆ ಮಂಗಳೂರಿನ ನೆಹರು ಮೈದಾನದಲ್ಲಿ ನೆರವೇರಿತು.

    ಮೇಯರ್ ಸುಧೀರ್‌ ಶೆಟ್ಟಿ ಕಣ್ಣೂರು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿದರು. ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಹುಲಿ ವೇಷ ಇಂದು ದೇಶ ವಿದೇಶಗಳಲ್ಲಿ ಜನಪ್ರಿಯತೆ ಗಳಿಸಿದ್ದು, ಈ ಕಲೆಗೆ ಇನ್ನಷ್ಟು ಮೆರುಗು ನೀಡಿ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ‘ಪಿಲಿ ಪರ್ಬ’ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

    ದ್ವಿತೀಯ ವರ್ಷದ ಪಿಲಿ ಪರ್ಬ ಅಕ್ಟೋಬರ್‌ 21 ರಂದು ನಡೆಯಲಿದ್ದು, ಈ ವರ್ಷದ ರ್ಸ್ಪರ್ಧೆಯಲ್ಲಿ 15 ತಂಡಗಳು ಭಾಗವಹಿಸಲಿವೆ ಎಂದರು.

    ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ ಗಿರಿಧರ ಶೆಟ್ಟಿ, ಅಧ್ಯಕ್ಷ ದಿವಾಕರ ಪಾಂಡೇಶ್ವರ್‌, ಪ್ರಮುಖರಾದ ಶಕೀಲ ಕಾವ, ಜಯಲಕ್ಷ್ಮಿ, ಭರತ್‌ ಸೂಟರ್‌ಪೇಟೆ, ನರೇಶ್‌ ಶೆಣೈ, ಉದಯ ಪೂಜಾರಿ, ಅಶ್ವಿತ್‌ ಕೊಟ್ಟಾರಿ, ಲಲಿತ್‌ ರಾಜ್‌ ಮೆಂಡನ್‌, ಜಗದೀಶ್‌ ಕದ್ರಿ ಮುಂತಾದವರು ಉಪಸ್ಥಿತರಿದ್ದರು.

    DAKSHINA KANNADA

    ರಾಷ್ಟ್ರ ಮಟ್ಟದ ಫಾರ್ಮುಲಾ ಫೆಸ್ಟ್ ನಲ್ಲಿ ಸಾಧನೆ ಮೆರೆದ ಶ್ರೀ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳು

    Published

    on

    ಮಂಗಳೂರು : ಶ್ರೀ ಚೈತನ್ಯ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಫಾರ್ಮುಲಾ ಫೆಸ್ಟ್ ನಲ್ಲಿ ಭಾಗವಹಿಸಿ ಪ್ರತಿಭಾ ಪ್ರದರ್ಶನ ನೀಡಿದರು.

    20 ರಾಜ್ಯಗಳಲ್ಲಿರುವ 120 ಶಾಖೆಯಲ್ಲಿ ಏಕಕಾಲಕ್ಕೆ 10,000 ವಿದ್ಯಾರ್ಥಿಗಳು ನೂರು ದಿನ ವಿಶೇಷ ತರಬೇತಿ ಪಡೆದು, 600 ಸೂತ್ರಗಳನ್ನು ಹೇಳುವುದರ ಮುಖಾಂತರ ಮೂರನೇ ಬಾರಿಗೆ ಇಲ್ಲಿನ ವಿದ್ಯಾರ್ಥಿಗಳು ಐತಿಹಾಸಿಕ ದಾಖಲೆ ಸೃಷ್ಠಿಸಿದ್ದಾರೆ.

    ಇದನ್ನೂ ಓದಿ : ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆ

    ಅದರಲ್ಲಿ ವಿಶೇಷವಾಗಿ ಮಂಗಳೂರು ನಗರದಲ್ಲಿರುವ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ  118 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ಯುತ್ತಮವಾದ ಸಾಧನೆ ಮಾಡಿದ್ದಾರೆ. ಸಾಧನೆಗೆ ಪಾಲಕರ ಪ್ರೋತ್ಸಾಹ,  ಶಿಕ್ಷಕರ ನಿರಂತರ ತರಬೇತಿ ಮುಖ್ಯವಾಗಿದೆ ಎಂದು ಶಾಲೆಯ ವ್ಯವಸ್ಥಾಪಕ ಕೆ. ಸುನಿಲ್ ಕುಮಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಈ ಫಾರ್ಮುಲಾ ಫೆಸ್ಟ್ ನಲ್ಲಿ ಭಾಗಿಯಾದ ಎಲ್ಲಾ ಮಕ್ಕಳ ಪ್ರತಿಭೆ ಪ್ರಜ್ವಲಿಸುವಂತಾಗಲಿ ಎಂದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಹಾರೈಸಿದೆ.

    Continue Reading

    DAKSHINA KANNADA

    ಮಂಗಳೂರು : ಜಾನುವಾರು ಕಳ್ಳತನ ; ಆರೋಪಿಗಳು ಬಂಧನ

    Published

    on

    ಮಂಗಳೂರು : ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೊಳಂಬೆ ಕೊಂಚಾರು ಬದ್ರಿಯಾನಗರದ  ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24)  ಎಂಬವರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

    ಆರೋಪಿಗಳಿಂದ   ಕಾರು  ಹಾಗೂ ಸ್ಕೂಟರ್‌ನ್ನು ವಶಪಡಿಸಿದ್ದಾರೆ.

    ಆರೋಪಿಗಳನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.   ಆರೋಪಿಗಳ ಪೈಕಿ  ಪೈಜಲ್ ವಿರುದ್ಧ  ಬಜ್ಪೆ ಪೊಲೀಸ್ ಠಾಣೆಯಲ್ಲಿ 1 ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 2  ಪ್ರಕರಣಗಳು ದಾಖಲಾಗಿದೆ.

    ಪೈಜಲ್ ವಿರುದ್ಧ  ಒಟ್ಟು 12 ದನ ಕಳ್ಳತನ ಪ್ರಕರಣ ದಾಖಲಾಗಿದ್ದು ಅದರಲ್ಲಿ ಬಜ್ಜೆ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು, ಉಡುಪಿಯ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಮತ್ತು  ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.

    ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿಗಳನ್ನು ಬಂಧಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ಟೆಂಪೋ ಡಿ*ಕ್ಕಿ ಹೊಡೆದು ಮೂರು ವರ್ಷದ ಮಗು ಸಾ*ವು

    Published

    on

    ಬಂಟ್ವಾಳ: ನಿಲ್ಲಿಸಿದ್ದ ಟೆಂಪೋವೊಂದು ಏಕಾಏಕಿ ಹಿಮ್ಮುಖವಾಗಿ ಚಲಿಸಿದ್ದು, ಆ ವೇಳೆ ಆಟವಾಡುತ್ತಿದ್ದ ಮುರು ವರ್ಷದ ಮಗು ಚಕ್ರದ*ಡಿಗೆ ಸಿಲುಕಿ ಮೃ*ತಪಟ್ಟ ಘಟನೆ ಬುಧವಾರ (ನ.6) ಬಂಟ್ವಾಳದ ಲೊರೆಟ್ಟೋಪದವಿನ ಟಿಪ್ಪುನಗರದಲ್ಲಿ ನಡೆದಿದೆ.

    ಫರಂಗಿಪೇಟೆ ಸಮೀಪದ ಪತ್ತನಬೈಲು ನಿವಾಸಿ ಆಶೀಕಾ (3) ಮೃ*ತ ಮಗು.

    ಮಗು ತನ್ನ ಅಜ್ಜಿ ಮನೆಯಲ್ಲಿದ್ದು, ಮನೆಯ ಹೊರಗೆ ಮಗು ಆಡುತ್ತಿದ್ದ ವೇಳೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಒಮ್ಮೆಯೇ ಹಿಂದೆ ಬಂದ ಕಾರಣ ದುರ್ಘಟನೆ ಸಂಭವಿಸಿದೆ.

    ಘಟನೆಯಲ್ಲಿ ಗಂಭೀರ ಗಾ*ಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending